
ರಾಷ್ಟ್ರಪ್ರಶಸ್ತಿ ವಿಜೇತ ಸಾಗರ್ ಪುರಾಣಿಕ್ ಹೊಸ ಸಿನಿಮಾ ವೆಂಕ್ಯಾ ಶೂಟಿಂಗ್ ಭರದಿಂದ ಸಾಗುತ್ತಿದೆ. ಈ ಬಾರಿ ಸಾಗರ್ ನಿರ್ದೇಶನದ ಜೊತೆಗೆ ನಾಯಕನಾಗಿಯೂ ಬಣ್ಣ ಹಚ್ಚಿದ್ದು, ಇದೀಗ ವೆಂಕ್ಯಾ ಬಳಗಕ್ಕೆ ಯುವ ನಟಿಯರೊಬ್ಬರ ಆಗಮನವಾಗಿದೆ. ಶಿಮ್ಲಾ ಸುಂದರಿ ರೂಪಾಲಿ ಸೂದ್ ಸಾಗರ್ ಪುರಾಣಿಕ್ ಚಿತ್ರದಲ್ಲಿ ನಟಿಸ್ತಿದ್ದು, ಈ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದ್ದಾರೆ.
ಮೂಲತಃ ಶಿಮ್ಲಾದವರಾದ ರೂಪಾಲಿ ಕಾಲೇಜು ದಿನಗಳಲ್ಲಿದ್ದಾಗಲೇ ಮಾಡೆಲಿಂಗ್ ಅಖಾಡಕ್ಕೆ ಇಳಿದಿದ್ದರು. ಮಾಡೆಲಿಂಗ್ ಜೊತೆ ಜೊತೆಯಲಿ ಹಲವು ಮ್ಯೂಸಿಕ್ ಆಲ್ಬಂಗಳಲ್ಲಿ ನಟಿಸಿರುವ ಈ ಶಿಮ್ಲಾ ಚೆಲುವೆ, ಹಾರ್ಡಿ ಸಂಧು ಅವರೊಂದಿಗಿನ ಸೂಪರ್ ಹಿಟ್ ಹಾಡು'ಹಾರ್ನ್ ಬ್ಲೋ'ನಲ್ಲಿ ಹೆಜ್ಜೆ ಹಾಕಿದ್ದಾರೆ. ಇದೀಗ ವೆಂಕ್ಯಾ ಸಿನಿಮಾದ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ.
ರೂಪಾಲಿ ಈಗಾಗಲೇ ವೆಂಕ್ಯಾ ಶೂಟಿಂಗ್ ನಲ್ಲಿ ಭಾಗಿಯಾಗಿದ್ದಾರೆ. ಅವರು ಹಿಮಾಚಲದ ಪಹಾಡಿ ಹುಡುಗಿಯಾಗಿ ನಟಿಸುತ್ತಿದ್ದಾರೆ. ಶೂಟಿಂಗ್ ಅನುಭವ ಹಂಚಿಕೊಂಡಿರುವ ರೂಪಾಲಿ, ‘ನಾವು ಇತ್ತೀಚೆಗೆ ಮನಾಲಿಯ ಮುಂದೆ ಕೈಲಾಂಗ್ನಲ್ಲಿ, ಪರ್ವತಗಳ ನಡುವೆ ಸುಂದರವಾದ ಸ್ಥಳದಲ್ಲಿ ಕೆಲವು ಭಾಗಗಳನ್ನು ಚಿತ್ರೀಕರಿಸಿದ್ದೇವೆ. ಇದು ನನ್ನ ಸಿನಿಮಾ ವೃತ್ತಿಜೀವನಕ್ಕೆ ಅದ್ಭುತ ಆರಂಭ' ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಡೊಳ್ಳು ಸಿನಿಮಾ ನಿರ್ಮಾಣ ಮಾಡಿದ್ದ ಪವನ್ ಒಡೆಯರ್ ವೆಂಕ್ಯಾನಿಗೂ ಸಾಥ್ ಕೊಟ್ಟಿದ್ದಾರೆ. ಒಡೆಯರ್ ಫಿಲ್ಮ್ಸ್ ನಡಿ ತಯಾರಾಗ್ತಿರುವ ಈ ಚಿತ್ರಕ್ಕೆ ಅವಿನಾಶ್ ವಿ ರೈ ಮತ್ತು ಮೋಹನ್ ಲಾಲ್ ಮೆನನ್ ಕೂಡ ಹಣ ಹಾಕಿದ್ದಾರೆ. ಉತ್ತರ ಕರ್ನಾಟಕವನ್ನು ಕಥೆ ಆಧಾರಿಸಿ ಮೂಡಿ ಬರ್ತಿರುವ ವೆಂಕ್ಯಾ ಚಿತ್ರದ ಚಿತ್ರಕಥೆ ಮತ್ತು ಸಂಭಾಷಣೆಯನ್ನು ಶ್ರೀನಿಧಿ ಡಿಎಸ್ ಬರೆದಿದ್ದಾರೆ, ಪ್ರಣವ್ ಮುಲೆ ಅವರ ಛಾಯಾಗ್ರಹಣ ಮತ್ತು ಹೇಮಂತ್ ಜೋಯಿಸ್ ಸಂಗೀತ ನೀಡಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.