
ಶಿವಮೊಗ್ಗ, (ಏ.11): ಶಿವರಾಜ್ ಕುಮಾರ್ ತಮ್ಮ ಅಭಿನಯದ 'ಕವಚ' ಚಿತ್ರದ ಪ್ರಚಾರ ಹೆಸರಿನಲ್ಲಿ ಕವಚ ಹಾಕಿಕೊಂಡು ರಾಜಕೀಯ ಮಾಡಲು ಶಿವಮೊಗ್ಗಕ್ಕೆ ಬಂದಿದ್ದಾರೆ ಎಂದು ಬಿಜೆಪಿ ಶಾಸಕ ಕುಮಾರ್ ಬಂಗಾರಪ್ಪ ಕಿಡಿಕಾರಿದ್ದರು.
'ಕವಚ' ತೆಗೆದಿಟ್ಟು ರಾಜಕೀಯಕ್ಕೆ ಬರಲಿ': ಶಿವಣ್ಣಗೆ 'ಬಾವ' ಸವಾಲ್
'ಶಿವರಾಜ್‌ಕುಮಾರ್‌ಗೆ ರಾಜಕೀಯ ಮಾಡುವ ಆಸೆ ಇದ್ದರೆ ಧರಿಸಿರುವ ಕವಚ ತೆಗೆದಿಟ್ಟು ರಾಜಕೀಯ ಮಾಡಲಿ. ಅದು ಬಿಟ್ಟು ಸಿನಿಮಾವನ್ನು ಮುಂದಿಟ್ಟುಕೊಂಡು ಅದರ ಪ್ರಚಾರ ಮಾಡುತ್ತೇನೆಂದು ರಾಜಕೀಯ ಪ್ರಚಾರ ಮಾಡುವುದು ಬೇಡ' ಎಂದು ನಟ ಶಿವರಾಜ್ ಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದರು.
ಇದಕ್ಕೆ ಪ್ರತಿಕ್ರಿಯಿಸಿರುವ ಶಿವಣ್ಣ, ಅದು ಅವರ ಅಭಿಪ್ರಾಯ ಅಷ್ಟೇ. ನಾನು ಅದಕ್ಕೆ ತಲೆಕೆಡಿಸಿಕೊಳ್ಳುವುದಿಲ್ಲ. ನನಗೆ ಅಭಿಮಾನಿಗಳೇ ಕವಚ. ಕರ್ನಾಟಕವೇ ನನಗೆ ಕವಚ. ಕನ್ನಡ ಇಂಡಸ್ಟ್ರಿ ನನಗೆ ಕವಚವಾಗಿದೆ ಅಂತ ಹೇಳುವ ಮೂಲಕ ನಾನು ಕವಚ ಸಿನಿಮಾದ ಪ್ರಚಾರಕ್ಕೆ ಹೋಗಿದ್ದು ಅಂತ ತಿಳಿಸಿದರು.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.