ನಟ ಶಿವರಾಜ್‌ಕುಮಾರ್ ಅವರ ನಟನೆಯಲ್ಲಿ ‘ಘೋಸ್ಟ್’ ಹೆಸರಿನಲ್ಲಿ ಹೊಸ ಚಿತ್ರ ಸೆಟ್ಟೇರಿದೆ. ಶ್ರೀನಿ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದು, ಸಂದೇಶ್ ನಾಗರಾಜ್ ನಿರ್ಮಾಣ ಮಾಡುತ್ತಿದ್ದಾರೆ.
ಸ್ಯಾಂಡಲ್‌ವುಡ್‌ನಕರುನಾಡ ಚಕ್ರವರ್ತಿ ಶಿವರಾಜ್‍ಕುಮಾರ್ (Shivarajkumar) ಅವರ ನಟನೆಯಲ್ಲಿ ‘ಘೋಸ್ಟ್’ (Ghost) ಹೆಸರಿನಲ್ಲಿ ಹೊಸ ಚಿತ್ರ ಸೆಟ್ಟೇರಿದೆ. 'ಶ್ರೀನಿವಾಸ ಕಲ್ಯಾಣ', 'ಬೀರ್ ಬಲ್', 'ಓಲ್ಡ್ ಮಾಂಕ್' ಚಿತ್ರಗಳ ಖ್ಯಾತಿಯ ಶ್ರೀನಿ (Srini) ಈ ಚಿತ್ರವನ್ನು ನಿರ್ದೇಶಿಸಲಿದ್ದಾರೆ. ಸಂದೇಶ್ ನಾಗರಾಜ್ (Sandesh Nagaraj) ನಿರ್ಮಾಣ ಮಾಡುತ್ತಿದ್ದು, ಜೂನ್ ಅಥವಾ ಜುಲೈ ತಿಂಗಳಲ್ಲಿ ಚಿತ್ರೀಕರಣ ಶುರುವಾಗಲಿದೆ. ಪಕ್ಕಾ ಸ್ಟೈಲೀಶ್ ಆ್ಯಕ್ಷನ್ ಸಿನಿಮಾ ಇದಾಗಿದೆ. ವಿಶೇಷ ಎಂದರೆ ಈ ಚಿತ್ರದಲ್ಲಿ ಶಿವಣ್ಣ ಅವರಿಗೆ ನಾಯಕಿ ಇಲ್ಲ.
ಸ್ಪೈ ಆ್ಯಕ್ಷನ್ ಥ್ರಿಲ್ಲರ್ ಜಾನರ್‌ನಲ್ಲಿ ಸಾಗುವ ಈ ಕತೆಯ ಇಡೀ ಸಿನಿಮಾ ಜೈಲಿನಲ್ಲಿ ನಡೆಯುತ್ತದೆ ಎಂಬುದು ಚಿತ್ರದ ಮತ್ತೊಂದು ಹೈಲೈಟ್. ಈಗ ಚಿತ್ರದ ಹೆಸರು ಬಹಿರಂಗ ಮಾಡಿರುವ ಶ್ರೀನಿ, ಮುಂದಿನ ದಿನಗಳಲ್ಲಿ ಚಿತ್ರದ ಉಳಿದ ತಾರಾಗಣ ಆಯ್ಕೆ ಮಾಡಲಿದ್ದಾರೆ. ಸದ್ಯಕ್ಕೆ ತಾನೇ ನಟಿಸಿ, ನಿರ್ದೇಶಿಸಿದ ‘ಓಲ್ಡ್ ಮಾಂಕ್’ (Old Monk) ಚಿತ್ರದ ಯಶಸ್ಸಿನಲ್ಲಿರುವ ಶ್ರೀನಿ ಈಗ ಸ್ಟಾರ್ ನಟರಿಗೆ ನಿರ್ದೇಶನ ಮಾಡುತ್ತಿದ್ದಾರೆ. ಉಪೇಂದ್ರ (Upendra) ಅವರ ‘ಟೋಪಿವಾಲ’ (Topiwala) ಚಿತ್ರದ ನಂತರ ಶ್ರೀನಿ ಮತ್ತೊಬ್ಬ ಸ್ಟಾರ್ ನಟನಿಗೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಕಥೆಯನ್ನು ಶ್ರೀನಿ ಅವರೆ ಬರೆದಿದ್ದು, ಉಳಿದ ಕಲಾವಿದರ ಹಾಗೂ ತಂತ್ರಜ್ಞರ ಆಯ್ಕೆ ನಡೆಯುತ್ತಿದೆ. ಸದ್ಯದಲ್ಲೇ ಚಿತ್ರೀಕರಣ ಆರಂಭವಾಗಲಿದೆ.
Shiva Rajkumar: 'ಬೈರಾಗಿ' ಟೀಸರ್‌ನಲ್ಲಿ ಹುಲಿಯಾಗಿ ಘರ್ಜಿಸಿದ ಕರುನಾಡ ಚಕ್ರವರ್ತಿ ಶಿವಣ್ಣ
ಸದ್ಯ ಶಿವಣ್ಣ 'ಭಜರಂಗಿ 2' ಸಿನಿಮಾ ಸಕ್ಸಸ್ ಬಳಿಕ ಸಾಲು ಸಾಲು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. 'ಭೈರಾಗಿ' ಸಿನಿಮಾ ಶೂಟಿಂಗ್ ಮುಗಿಸಿ ತಮ್ಮದೇ ಹೋಂ ಬ್ಯಾನರ್‌ನಲ್ಲಿ ನಿರ್ಮಾಣ ಆಗುತ್ತಿರುವ 'ವೇದ' ಸಿನಿಮಾದ ಚಿತ್ರೀಕರಣದಲ್ಲಿದ್ದಾರೆ. ಮಾತ್ರವಲ್ಲದೇ ಸಂದೇಶ್ ನಾಗರಾಜ್ ಪುತ್ರ ಸಂದೇಶ್ ಎನ್. ನಿರ್ಮಾಣ ಮಾಡಲಿರುವ ಶಿವರಾಜ್‌ಕುಮಾರ್ ಅವರ ಸಿನಿಮಾಗೆ ಚಿ. ಗುರುದತ್ ನಿರ್ದೇಶನ ಮಾಡುತ್ತಾರೆ ಎಂಬ ಸುದ್ದಿ ಅಧಿಕೃತವಾಗಿ ಕೇಳಿಬಂದಿತ್ತು. ಆದರೆ ಆ ಬಗ್ಗೆ ಯಾವುದೇ ಸದ್ಯ ಮಾಹಿತಿ ಇಲ್ಲ. ಇದೀಗ ಅದೇ ಬ್ಯಾನರ್‌ನಲ್ಲಿ ಶಿವರಾಜ್‌ಕುಮಾರ್ ಮತ್ತೊಂದು ಸಿನಿಮಾ ಮಾಡುತ್ತಿದ್ದಾರೆ.
ಶಿವಣ್ಣ, ಎ.ಹರ್ಷ (A.Harsha) ನಿರ್ದೇಶನದಲ್ಲಿ 'ವೇದ' (Veda) ಚಿತ್ರದಲ್ಲಿ ನಟಿಸುತ್ತಿದ್ದು, ಗೀತಾ ಶಿವರಾಜ್‌ಕುಮಾರ್ (Geetha Shivarjkumar) ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಸದ್ಯಕ್ಕೆ ಬೆಂಗಳೂರಿನಲ್ಲಿ ಶೂಟಿಂಗ್ ನಡೆಯತ್ತಿದೆ. ಈಗಷ್ಟೆ ಮೊದಲ ಹಂತದ ಚಿತ್ರೀಕರಣ ಮುಗಿಸಿರುವ 'ವೇದ', ಎರಡನೇ ಹಂತದ ಶೂಟಿಂಗ್‌ಗೆ ತಯಾರಿ ಮಾಡಿಕೊಳ್ಳುತ್ತಿದೆ. ಚಿತ್ರದ ಬಹುತೇಕ ಚಿತ್ರೀಕರಣ ಬೆಂಗಳೂರು ಸುತ್ತಮುತ್ತ ಸೆಟ್‌ನಲ್ಲಿ ನಡೆಯುತ್ತಿದೆ. ಮತ್ತೊಮ್ಮೆ ಶಿವಣ್ಣ ಅವರಿಗೆ ಸಿನಿಮಾ ಮಾಡುತ್ತಿರುವುದು ಖುಷಿ ವಿಚಾರ. ಈ ಚಿತ್ರದಲ್ಲೂ ಹೊಸ ರೀತಿಯ ಕತೆಯೊಂದಿಗೆ ನಿಮ್ಮ ಮುಂದೆ ಬರಲಿದ್ದೇವೆ. 'ವೇದ' ಎನ್ನುವ ಹೆಸರು ಈಗಾಗಲೇ ಟ್ರೆಂಡ್ ಆಗಿದೆ ಎಂದು ಎ.ಹರ್ಷ ತಿಳಿಸಿದ್ದಾರೆ.
Shiva Rajkumar: 'ರಣರಂಗ' ಚಿತ್ರಕ್ಕೆ ಸಂತೋಷ್ ಆನಂದ್‌ರಾಮ್ ಆಕ್ಷನ್ ಕಟ್
ಇನ್ನು ಶಿವಣ್ಣ ಅಭಿನಯದ 123ನೇ ಸಿನಿಮಾ 'ಬೈರಾಗಿ' (Bairagi) ಚಿತ್ರದ ಟೀಸರ್ ಇತ್ತೀಚೆಗಷ್ಟೇ ಬಿಡುಗಡೆಯಾಗಿದ್ದು, ಹುಲಿ ವೇಷದಲ್ಲಿ ಕಾಣಿಸಿಕೊಳ್ಳುವ ಮೂಲಕ ಶಿವಣ್ಣ ಅಬ್ಬರಿಸಿದ್ದಾರೆ ವಿಜಯ್ ಮಿಲ್ಟನ್ (Vijay Milton) ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. 'ಟಗರು' ನಂತರ ಶಿವಣ್ಣ ಮತ್ತು ನಟ ರಾಕ್ಷಸ ಡಾಲಿ ಧನಂಜಯ್ (Dhananjay) ಮತ್ತೆ ತೆರೆ ಮೇಲೆ ಒಟ್ಟಿಗೆ ಕಾಣಿಸಿಕೊಳ್ಳಲಿರುವ ಕಾರಣ 'ಬೈರಾಗಿ' ಸಿನಿಮಾದ ಮೇಲೆ ದೊಡ್ಡ ಮಟ್ಟದ ನಿರೀಕ್ಷೆ ಅಭಿಮಾನಿಗಳಿಗೆ ಇದೆ. ಆ್ಯಕ್ಷನ್ ಡ್ರಾಮಾ ಜಾನರ್‌ನ ಈ ಸಿನಿಮಾದಲ್ಲಿ ಶಿವರಾಜ್‌ಕುಮಾರ್ ಮತ್ತು ಧನಂಜಯ್ ಅವರ ಲುಕ್‌ಗಳು ವಿಭಿನ್ನವಾಗಿವೆ.