ಹೊಸ ಹೆಜ್ಜೆ ಇಟ್ಟ ಶಿವರಾಜ್ ಕುಮಾರ್ ಪುತ್ರಿ: ನಿರ್ಮಾಪಕಿಯಾಗಿ ನಿವೇದಿತಾ ಎಂಟ್ರಿ

Published : May 01, 2023, 02:39 PM IST
ಹೊಸ ಹೆಜ್ಜೆ ಇಟ್ಟ ಶಿವರಾಜ್ ಕುಮಾರ್ ಪುತ್ರಿ: ನಿರ್ಮಾಪಕಿಯಾಗಿ ನಿವೇದಿತಾ ಎಂಟ್ರಿ

ಸಾರಾಂಶ

ಶಿವರಾಜ್ ಕುಮಾರ್ ಪುತ್ರಿ ನಿವೇದಿತಾ ಹೊಸ ಹೆಜ್ಜೆ ಇಟ್ಟಿದ್ದಾರೆ. ನಿರ್ಮಾಪಕಿಯಾಗಿ ಶಿವಣ್ಣ ಪುತ್ರಿ ಎಂಟ್ರಿ ಕೊಟ್ಟಿದ್ದು ಹೊಸ ಸಿನಿಮಾ ಅನೌನ್ಸ್ ಮಾಡಿದ್ದಾರೆ. 

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಯುವಕರಿಗೆ, ಹೊಸ ಪ್ರತಿಭೆಗಳಿಗೆ ಸದಾ ಬೆನ್ನು ತಟ್ಟುತ್ತಾ ಮುಂದೆ ಸಾಗುವ ಕನ್ನಡ ಚಿತ್ರರಂಗದ ಮಾಸ್ ಲೀಡರ್. ಹೊಸ ಚಿತ್ರತಂಡಕ್ಕೆ ಬಲವಾಗಿ ನಿಲ್ಲುವ ಶಿವಣ್ಣನ ಹಾದಿಯಲ್ಲಿ ಈಗ ಮಗಳು ನಿವೇದಿತಾ ಕೂಡ ಹೆಜ್ಜೆ ಇಟ್ಟಿದ್ದಾರೆ. ಹೇಳಿಕೇಳಿ ಕಲೆ ದೊಡ್ಮನೆ ಕುಟುಂಬದಲ್ಲಿ ರಕ್ತಗತವಾಗಿ ಬಂದಿದೆ. ಇಡೀ ಕುಟುಂಬ ಕಲಾಸೇವೆಯಲ್ಲಿ ನಿರತರಾಗಿದೆ. ಅಂದು ಅಣ್ಣಾವ್ರು ತೆರೆಮೇಲೆ ರಾರಾಜಿಸುತ್ತಿದ್ದರೆ, ತೆರೆಹಿಂದೆ ಅವರ ಬೆನ್ನೆಲುಬಾಗಿ ನಿರ್ಮಾಣ ಸಂಸ್ಥೆಯಡಿ ದುಡಿಯುತ್ತಿದ್ದವರು ಪಾರ್ವತಮ್ಮ. ಪೂರ್ಣಿಮಾ ಎಂಟರ್ ಪ್ರೈಸನ್ ನಡಿ ಪಾರ್ವತಮ್ಮ ಕನ್ನಡ ಚಿತ್ರರಂಗಕ್ಕೆ ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಅದೇ ಲೆಗಸಿ ಈಗ ಮುಂದುವರೆದಿದೆ.

ಗೀತಾ ಪಿಕ್ಚರ್ಸ್ ನಡಿ ಗೀತಾ ಶಿವರಾಜ್ ಕುಮಾರ್, ಪಿಆರ್ ಕೆ ಪ್ರೊಡಕ್ಷನ್ ನಡಿ ಅಶ್ವಿನಿ ಪುನೀತ್ ರಾಜ್ ಕುಮಾರ್ ನಿರ್ಮಾಪಕರಾಗಿ ಚಿತ್ರರಂಗಕ್ಕೆ ದುಡಿಯುತ್ತಿದ್ದಾರೆ. ಈಗ ಶಿವಣ್ಣನ ದ್ವೀತಿಯ ಪುತ್ರಿ ನಿವೇದಿತಾ ಶಿವರಾಜ್ ಕುಮಾರ್ ತಮ್ಮದೇ ಒಡೆತನದ ನಿರ್ಮಾಣ ಸಂಸ್ಥೆಯಡಿ ಚೊಚ್ಚಲ ಚಿತ್ರದ ನಿರ್ಮಾಣಕ್ಕಿಳಿದಿದ್ದಾರೆ.    

ಶ್ರೀ ಮುತ್ತು ಸಿನಿ ಸರ್ವಿಸ್, ನಿವೇದಿತಾ ಕನಸಿನ ಕೂಸು. ಯುವ ಪ್ರತಿಭೆಗಳಿಗೆ ಹಾಗೂ ಹೊಸ ಆಲೋಚನೆಗಳಿಗೆ ವೇದಿಕೆ ನೀಡಲೆಂದು ಸೃಷ್ಟಿಯಾಗಿರುವ ನಿರ್ಮಾಣ ಸಂಸ್ಥೆ. ಈ ಸಂಸ್ಥೆಯಡಿ ಈಗಾಗಲೇ ಧಾರಾವಾಹಿ ಹಾಗೂ ಮೂರು ವೆಬ್ ಸೀರೀಸ್ ಗಳು ಹೊರ ಬಂದಿವೆ. ಈಗ ಇದೇ ಬ್ಯಾನರ್ ನಡಿ ನಿವೇದಿತಾ ಶಿವರಾಜ್ ಕುಮಾರ್ ಸಿನಿಮಾ ನಿರ್ಮಾಣಕ್ಕೆ ಮುಂದಾಗಿದ್ದಾರೆ. 'ಹೊಂಬಿಸಿಲ ಕಿರಣಗಳಲ್ಲಿ ತಂಗಾಳಿಯೊಂದು ಮೂಡಿದೆ, ಹುಟ್ಟು ಸಾವಿನ ಸ್ವಾರಸ್ಯವನ್ನು ಅನ್ವೇಷಿಸಲು ಹೊರಟಿದೆ. ಮೇ 1ರಂದು ಒಂದು ಹೊಸ ಅಧ್ಯಾಯದೊಂದಿಗೆ ನಿಮ್ಮ ಮುಂದೆ' ಎಂಬ ಪೋಸ್ಟರ್ ಮೂಲಕ ತಮ್ಮ ಹೊಸ ಹೆಜ್ಜೆಯ ಬಗ್ಗೆ ತಿಳಿಸಿದ್ದಾರೆ. 

ಹೆಂಡತಿ ಲಕ್ ತಂದುಕೊಡ್ತಾಳೆ; ಧನಂಜಯ್ ಮದುವೆ ಬಗ್ಗೆ ಶಿವಣ್ಣ ಹೇಳಿಕೆ ವೈರಲ್

ನಿವೇದಿತಾ ಶಿವರಾಜ್ ಕುಮಾರ್ ಒಡೆತನದ ಶ್ರೀ ಮುತ್ತು ಸಿನಿ ಸರ್ವಿಸ್ ನಡಿ ಮೂಡಿ ಬರ್ತಿರುವ ಚೊಚ್ಚಲ ಸಿನಿಮಾಗೆ ಯುವ ಪ್ರತಿಭೆ ವಂಶಿ ನಟನೆ ಜೊತೆಗೆ ನಿರ್ದೇಶನದ ಜವಾಬ್ದಾರಿ ಕೂಡ ವಹಿಸಿಕೊಂಡಿದ್ದಾರೆ. ಒಂದಷ್ಟು ಕಿರುಚಿತ್ರ ನಿರ್ದೇಶಿಸಿ, PRK ನಿರ್ಮಾಣ ಸಂಸ್ಥೆಯಡಿ ಬಂದ ಮಯಾಬಜಾರ್ ಸಿನಿಮಾದಲ್ಲಿ ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕೆಲಸ ಮಾಡಿರುವ, ಇತ್ತೀಚೆಗೆ ತೆರೆಗೆ ಬಂದ ಐದು ಕಥೆಗಳ ಪೆಂಟಗನ್ ಸಿನಿಮಾದ ಕಿರಣ್ ಕುಮಾರ್ ನಿರ್ದೇಶಕದ ಕಥೆಯಲ್ಲಿ ಪ್ರಮುಖ ಪಾತ್ರವಾಗಿ ನಟಿಸಿದ್ದ ವಂಶಿ ಇದೀಗ ನಿವೇದಿತಾ ಬಂಡವಾಳ ಹಾಕುತ್ತಿರುವ ಮೊದಲ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಈ  ಮೂಲಕ ಸ್ವತಂತ್ರ ನಿರ್ದೇಶಕರಾಗಿ ಹಾಗೂ ಪೂರ್ಣಪ್ರಮಾಣದ ನಾಯಕನಾಗಿ ಚಿತ್ರರಂಗಕದಲ್ಲಿ ಹೊಸ ಅಧ್ಯಾಯ ಪ್ರಾರಂಭಿಸುತ್ತಿದ್ದಾರೆ.&

RCB vs CSK ಮ್ಯಾಚ್‌ ನೋಡಿದ ಶಿವಣ್ಣ- ಧನುಷ್; ವೈರಲ್ ಫೋಟೋಗಳು

ಲೈಫ್ ಡ್ರಾಮಾ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ಬಾನ ದಾರಿಯಲಿ ಸಿನಿಮಾದ ಛಾಯಾಗ್ರಹಕ ಅಭಿಲಾಷ್ ಕಲ್ಲಟ್ಟಿ ಕ್ಯಾಮೆರಾ ಕೆಲಸ ಮಾಡುತ್ತಿದ್ದಾರೆ. ಚರಣ್ ರಾಜ್ ಸಂಗೀತ, ರಘು ನಿಡುವಳ್ಳಿ ಸಂಭಾಷಣೆ ಚಿತ್ರಕ್ಕಿದೆ. ಜಯ್ ರಾಮ್ ಸಹ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದಾರೆ. 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

Mark Movie: ಡಿಸೆಂಬರ್‌ನಲ್ಲಿ ಏಕಕಾಲಕ್ಕೆ ಸ್ಟಾರ್‌ಗಳ ಸಿನಿಮಾ ರಿಲೀಸ್;‌ ಕಿಚ್ಚ ಸುದೀಪ್‌ ಏನಂದ್ರು?
ಬಾಲಿವುಡ್ ನಿರ್ದೇಶಕ ವಿಕ್ರಂ ಭಟ್, ಪತ್ನಿ ಶ್ವೇತಾಂಬರಿ ಭಟ್ ಬಂಧನ; ಅಂತಿಂಥ ವಂಚನೆ ಕೇಸಲ್ಲ ಇದು ಅಂತೀರಾ?!