ಬೆಂಗಳೂರಿನಲ್ಲಿ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ನಡೆದಿತ್ತು. ರೇಣುಕಾಸ್ವಾಮಿ ಚಿತ್ರದುರ್ಗದ ಲಕ್ಷ್ಮೀ ವೆಂಕಟೇಶ್ವರ ಬಡಾವಣೆಯ ನಿವಾಸಿಯಾಗಿದ್ದು, ಅಪೊಲೋ ಮೆಡಿಕಲ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದನು.
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನವಾಗಿದೆ. ಇಂದು ಬೆಳಗಿನ ಜಾವ ಮೈಸೂರಿನ ಫಾರ್ಮ್ ಹೌಸ್‌ನಲ್ಲಿದ್ದ ದರ್ಶನ್ ಬಂಧನವಾಗಿದೆ. ದರ್ಶನ್ ಜೊತೆಯಲ್ಲಿ ಇಬ್ಬರು ಬಾಡಿಗಾರ್ಡ್‌ಗಳನ್ನು ಸಹ ಪೊಲೀಸರು ಬಂಧಿಸಿದ್ದಾರೆ. ಜೂನ್ 9ರಂದು ಬೆಂಗಳೂರಿನ ಸುಮ್ಮನಹಳ್ಳಿ ಬ್ರಿಡ್ಜ್ ಬಳಿ ರೇಣುಕಾಸ್ವಾಮಿ ಶವ ಪತ್ತೆಯಾಗಿತ್ತು.ಮೃತದೇಹದ ಮೇಲೆ ಗಾಯದ ಗುರುತುಗಳು ಕಂಡು ಬಂದಿದ್ದ ಹಿನ್ನೆಲೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದರು. ಘಟನೆ ಸಂಬಂದ ಕಾಮಾಕ್ಷಿ ಪಾಳ್ಯ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಶವವನ್ನು ಮೊದಲ ಬಾರಿ ನೋಡಿದ್ದ ಅನುಗ್ರಹ ಅಪಾರ್ಟ್ಮೆಂಟ್ ನಲ್ಲಿ ಕೆಲಸ ಮಾಡಿಕೊಂಡಿದ್ದ ಸೆಕ್ಯುರಿಟಿ ಗಾರ್ಡ್ ಈ ಸಂಬಂಧ ದೂರು ದಾಖಲಿಸಿದ್ದರು. ಅಪಾರ್ಟ್ಮೆಂಟ್ ಮುಂಭಾಗ ಗಸ್ತು ಮಾಡುತ್ತಿದ್ದಾಗ ಪತ್ತೆಯಾಗಿತ್ತು. 35 ವರ್ಷ ಅಪರಿಚಿತ ವ್ಯಕ್ತಿ ಮೃತದೇಹ ಪತ್ತೆ ಆಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು.
ಬೆಂಗಳೂರಿನಲ್ಲಿ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ನಡೆದಿತ್ತು. ರೇಣುಕಾಸ್ವಾಮಿ ಚಿತ್ರದುರ್ಗದ ಲಕ್ಷ್ಮೀ ವೆಂಕಟೇಶ್ವರ ಬಡಾವಣೆಯ ನಿವಾಸಿಯಾಗಿದ್ದು, ಅಪೊಲೋ ಮೆಡಿಕಲ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದನು. ಶನಿವಾರ ಮನೆಯಿಂದ ಹೊರಟವನು ವಾಪಸ್ ಬಂದಿರಲಿಲ್ಲ. ನಿನ್ನೆ ಬೆಂಗಳೂರು ಪೊಲೀಸರು ರೇಣುಕಾಸ್ವಾಮಿ ಶವವಾಗಿ ಪತ್ತೆ ಆಗಿರುವ ಮಾಹಿತಿಯನ್ನು ಕುಟುಂಬಸ್ಥರಿಗೆ ನೀಡಲಾಗಿತ್ತು. ಮುಖ ಹಾಗೂ ತಲೆಗೆ ಮತ್ತು ಕಿವಿಗೆ ರಕ್ತದ ಗಾಯ ಆಗಿರೊದು ಕಂಡಬಂದಿತ್ತು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಿ ಕೊಲೆ ಮಾಡಿರುವ ಆಸಾಮಿಗಳನ್ನು ಪತ್ತೆ ಮಾಡಿ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಸೆಕ್ಯೂಟಿ ರಿಟಿ ಗಾರ್ಡ್ ಆಗ್ರಹಿಸಿದ್ದರು.
undefined
ಕೆಲವೇ ಕ್ಷಣಗಳಲ್ಲಿ ಪ್ರಕರಣ ಸಂಬಂಧ ನಗರ ಪೊಲೀಸ್ ಆಯುಕ್ತ ದಯಾನಂದ್ ಸುದ್ದಿಗೋಷ್ಠಿ ನಡೆಸಲಿದ್ದಾರೆ. ದರ್ಶನ್ ಬಂಧನ ಆಗಿರೋದನ್ನು ಪಶ್ಚಿಮ ವಿಭಾಗದ ಡಿಸಿಪಿ ಗಿರೀಶ್ ಖಚಿತಪಡಿಸಿದ್ದಾರೆ. ಚಿತ್ರದುರ್ಗದಿಂದ ಬೆಂಗಳೂರಿಗೆ ಕರೆ ತಂದು ಹಲ್ಲೆ ಮಾಡಿ ಕೊಲೆಗೈಯ್ಯಲಾಗಿದೆ. ಚಿತ್ರದುರ್ಗದ ದರ್ಶನ್ ಅಭಿಮಾನಿಗಳ ಸಂಘದ ಅಧ್ಯಕ್ಷ ರಾಘವೇಂದ್ರ ಎಂಬಾತ ರೇಣುಕಾಸ್ವಾಮಿಯನ್ನು ಬೆಂಗಳೂರಿಗೆ ಕರೆದುಕೊಂಡು ಬಂದಿದ್ದನು ಎಂಬ ಮಾಹಿತಿ ಲಭ್ಯವಾಗಿದೆ. ಬೆಂಗಳೂರಿಗೆ ಕರೆದುಕೊಂಡು ಬಂದ ಮೇಲೆ ದರ್ಶನ್ ಸೇರಿದಂತೆ ಐವರು ಕಬ್ಬಿಣದ ರಾಡ್‌ನಿಂದ ಹಲ್ಲೆ ಮಾಡಿದ್ದಾರೆ. ಹಲ್ಲೆಗೊಳಗಾದ ರೇಣುಕಾಸ್ವಾಮಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ನಂತರ ಶವವನ್ನು ಸುಮ್ಮನಹಳ್ಳಿ ಬ್ರಿಡ್ಜ್ ಬಳಿ ಎಸೆದಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.
ಚಿತ್ರೀಕರಣ ಸ್ಥಗಿತಗೊಳಿಸಿದ್ದ ದರ್ಶನ್!
ಮೈಸೂರಿನಲ್ಲಿ ನಿನ್ನೆ ಚಿತ್ರೀಕರಣ ಅರ್ಧಕ್ಕೆ ನಿಲ್ಲಿಸಿದ್ದ ದರ್ಶನ್ ಶೂಟಿಂಗ್‌ನಿಂದ ಹೊರ ಬಂದಿದ್ದರು. ಕಲೆಕ್ಷನ್ ವಿಚಾರಕ್ಜೆ ಬೇಸತ್ತು ಶೂಟಿಂಗ್ ಸ್ಥಗಿತಮಾಡಲಾಗಿದೆ ಎಂದು ದರ್ಶನ್ ಹೇಳಿರುವ ಮಾಹಿತಿ ಲಭ್ಯವಾಗಿದೆ. ಆದ್ರೆ ಕೊಲೆ ಕೇಸ್‌ನಲ್ಲಿ ಪಾತ್ರದ ಬಗ್ಗೆ ದರ್ಶನ್ ಕಂಗಲಾಗಿ ಶೂಟಿಂಗ್ ಸ್ಥಗಿತಗೊಳಿಸಿದ್ದರು ಎನ್ನಲಾಗಿದೆ.
ಜೂನ್ 9ರಂದು ಪತ್ತೆಯಾದ ಶವದ ಮೇಲೆ ಹಲ್ಲೆಯ ಗುರುತುಗಳು ಪತ್ತೆಯಾಗಿದ್ದವು. ಹಾಗಾಗಿ ಇದೊಂದು ಕೊಲೆ ಎಂದು ಅನುಮಾನಸ್ಪಿಸಿದ್ದ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದರು. ಯಾವಾಗ ದರ್ಶನ್ ಪಾತ್ರದ ಕುರಿತು ಮಾಹಿತಿ ಲಭ್ಯವಾಯ್ತೋ ಪೊಲೀಸರು ಮೈಸೂರಿಗೆ ತೆರಳಿ ದರ್ಶನ್ ಬಂಧಿಸಿ ಬೆಂಗಳೂರಿಗೆ ಕರೆ ತಂದಿದ್ದರು.