Gajanana and Gang: ಅದಿತಿ ಪ್ರಭುದೇವ-ಶ್ರೀ ಮಹದೇವ್ ಚಿತ್ರ ಬಿಡುಗಡೆಗೆ ಡೇಟ್ ಫಿಕ್ಸ್​!

Suvarna News   | Asianet News
Published : Dec 31, 2021, 04:09 PM IST
Gajanana and Gang: ಅದಿತಿ ಪ್ರಭುದೇವ-ಶ್ರೀ ಮಹದೇವ್ ಚಿತ್ರ ಬಿಡುಗಡೆಗೆ ಡೇಟ್ ಫಿಕ್ಸ್​!

ಸಾರಾಂಶ

ಈಗಾಗಲೇ ಫಸ್ಟ್‌ಲುಕ್, ಟ್ರೇಲರ್‌ ಮೂಲಕವೇ ಸದ್ದು ಮಾಡಿರುವ ಶ್ರೀ ಮಹಾದೇವ್ ಹಾಗೂ ಅದಿತಿ ಪ್ರಭುದೇವ ಅಭಿನಯದ ಗಜಾನನ ಆ್ಯಂಡ್​ ಗ್ಯಾಂಗ್ ಸಿನಿಮಾ ಫೆಬ್ರವರಿ 4ರಂದು‌ ಬಿಡುಗಡೆಯಾಗಲಿದೆ.

ಶ್ಯಾನೇ ಟಾಪಾಗಿರುವ ನಟಿ ಅದಿತಿ ಪ್ರಭುದೇವ (Aditi Prabhudeva) ಹಾಗೂ ಕನ್ನಡ ಚಿತ್ರರಂಗದಲ್ಲಿ ಭರವಸೆಯ ನಾಯಕನಾಗಿ ಗುರುತಿಸಿಕೊಂಡಿರುವ ಶ್ರೀ ಮಹದೇವ್ (Shri Mahadev) ಅಭಿನಯದ 'ಗಜಾನನ ಅಂಡ್ ಗ್ಯಾಂಗ್' (Gajanana and Gang) ಚಿತ್ರದ ಫಸ್ಟ್‌ಲುಕ್ (First Look) ಮತ್ತು ಟ್ರೇಲರ್ (Trailer) ಈಗಾಗಲೇ ಬಿಡುಗಡೆಯಾಗಿ ಸಿನಿರಸಿಕರ ಗಮನ ಸೆಳೆದಿದೆ. 'ನಮ್ ಗಣಿ ಬಿಕಾಂ ಪಾಸ್' ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ನಾಯಕ ಮತ್ತು ನಿರ್ದೇಶಕನಾಗಿ ಪಾದರ್ಪಣೆ ಮಾಡಿದ್ದ ನಟ ಅಭಿಷೇಕ್ ಶೆಟ್ಟಿ (Abhishek Shetty) ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. 

ಸತತ ಎರಡು ವರ್ಷಗಳ ಪರಿಶ್ರಮದಿಂದ ತಯಾರಾಗಿರುವ 'ಗಜಾನನ ಅಂಡ್ ಗ್ಯಾಂಗ್' ಸಿನಿಮಾ ಬಿಗ್ ಸ್ಕ್ರೀನ್ ಮೇಲೆ ಮಿಂಚೋದಕ್ಕೆ ಸಜ್ಜಾಗಿದ್ದು, ಫೆಬ್ರವರಿ 4ರಂದು‌ ರಾಜ್ಯಾದ್ಯಂತ ಚಿತ್ರಮಂದಿರಗಳ ಬೆಳ್ಳಿ ತೆರೆಮೇಲೆ ಗಜಾನನ ಗ್ಯಾಂಗ್ ಎಂಟ್ರಿ‌ ಕೊಡಲಿದೆ. ಈ ಬಗ್ಗೆ ಇನ್‌ಸ್ಟಾಗ್ರಾಮ್‌ನಲ್ಲಿ 'ಬೆಳ್ಳಿತೆರೆಗೆ "ಗಜಾನನ ಅಂಡ್ ಗ್ಯಾಂಗ್". ಎರಡು ವರ್ಷದ ಶ್ರಮ ಕನಸು ನನಸಾಗುವ ಸಮಯ. ಸಿನಿಮಾವನ್ನು ಚಿತ್ರಮಂದಿರದಲ್ಲಿ ನೋಡಿ ಪ್ರೀತಿಯಿಂದ ಹಾರೈಸಿ. ಇದು ನಿಮ್ಮ ಸಿನಿಮಾ. ಮರೆಯದೆ ಹಂಚಿ ಹಾರೈಸಿ ಎಂದು ಕ್ಯಾಪ್ಷನ್ ಬರೆದು ಚಿತ್ರದ ಪೋಸ್ಟರನ್ನು 'ಗಜಾನನ ಅಂಡ್ ಗ್ಯಾಂಗ್' ಹಂಚಿಕೊಂಡಿದ್ದಾರೆ. 

Gajanana and Gang: ಹಾಸ್ಯ ಪ್ರಧಾನ ಚಿತ್ರದ ಟ್ರೇಲರ್ ರಿಲೀಸ್ ಮಾಡಿದ ನಟಿ ಮೇಘನಾ ರಾಜ್

'ಗಜಾನನ ಅಂಡ್ ಗ್ಯಾಂಗ್' ಚಿತ್ರದ ಶೀರ್ಷಿಕೆಯೇ ಹೇಳುವಂತೆ ಕಾಲೇಜು ಕಥೆಯಾಧಾರಿತ ಸಿನಿಮಾ ಇದಾಗಿದ್ದು, ಹಾಸ್ಯ, ಭಾವನಾತ್ಮಕತೆಯೂ ಸಿನಿಮಾದಲ್ಲಿದೆ. ಶ್ರೀ ಮಹಾದೇವ್, ಗಜ ಎಂಬ ಪಾತ್ರದಲ್ಲಿ ಎರಡು ಶೇಡ್‌ನಲ್ಲಿ ಕಾಣಿಸಿಕೊಂಡಿದ್ದು, ಅದಿತಿ ಪ್ರಭುದೇವ ಮಿಡಲ್ ಕ್ಲಾಸ್ ಕಾಲೇಜು ಹುಡುಗಿಯಾಗಿ ನಟಿಸಿದ್ದಾರೆ.ನಿರ್ದೇಶಕ ಅಭಿಷೇಕ್ ಶೆಟ್ಟಿ ಕೂಡಾ ಚಿತ್ರದ ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದಾರೆ. ಬಿಗ್‌ಬಾಸ್ ಖ್ಯಾತಿಯ ರಘು ಗೌಡ, ಚೇತನ್ ದುರ್ಗ, ನಾಟ್ಯ ರಂಗ, ಅಶ್ವಿನ್ ಹಾಸನ್ ಹಾಗೂ ಶಮಂತ್ ಬ್ರೋ ಗೌಡ ಕೂಡ ಈ ಚಿತ್ರದಲ್ಲಿ ಬಣ್ಣ ಹಚ್ಚಿದ್ದಾರೆ.



ಇನ್ನು ಇತ್ತೀಚೆಗೆ ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು, ನಟಿ ಮೇಘನಾ ರಾಜ್​ (Meghana Raj) ಅವರು ಟ್ರೇಲರ್​ ಲಾಂಚ್​ ಮಾಡಿದ್ದಾರೆ. ಟ್ರೇಲರ್‌ನಲ್ಲಿ 'ಗಜಾನನ ಅಂಡ್ ಗ್ಯಾಂಗ್'ನ ಕಾಲೇಜ್ ಕಥೆಯಿದೆ. ಕಾಲೇಜಿನ ಹಿರೋ, ಹಿರೋಯಿನ್, ಗೆಳೆಯರು ಹಾಗೂ ವಿಲನ್‌ ಸುತ್ತ ಚಿತ್ರದ ಕಥೆ ಸಾಗುತ್ತದೆ. ಹಾಸ್ಯಮಿಶ್ರಿತ ಸಂಭಾಷಣೆಗಳು ನೋಡುಗರಿಗೆ ಕಚಗುಳಿಯನ್ನಿಡುತ್ತದೆ. ಹಾಗೆ ಸೆಂಟಿಮೆಂಟ್ ದೃಶ್ಯಗಳು ಮನಕಲುಕುತ್ತವೆ. ಈ ಸಿನಿಮಾದ ಶೀರ್ಷಿಕೆಯೇ ಹೇಳುವಂತೆ ಇದರಲ್ಲೊಂದು ಫ್ರೆಂಡ್​ಶಿಪ್​ ಕಥೆಯಿದೆ. ನೀನು ಯಾವತ್ತು ಇವರ ಸಹವಾಸ ಬಿಡುತ್ತೀಯೋ ಅವತ್ತು ಉದ್ಧಾರ ಆಗುತ್ತೀಯ ಎಂದು ಒಂದು ದೃಶ್ಯದಲ್ಲಿ ಹಾಗೆ ಮತ್ತೊಂದು ಸೀನ್‌ನಲ್ಲಿ 'ಎಂತಹ ಪರಿಸ್ಥಿತಿಯಲ್ಲೂ ಏನೇ ಆದರೂ ನಿನ್ನ ಫ್ರೆಂಡ್ಸ್​ ಬಿಟ್ಟುಕೊಡಬೇಡ' ಎಂಬ ಡೈಲಾಗ್ ಶ್ರೀಗೆ ಅದಿತಿ​ ಹೇಳುವುದು ಸಸ್ಪೆನ್ಸ್ ಆಗಿ ಟ್ರೇಲರ್‌ನಲ್ಲಿ ಮೂಡಿಬಂದಿದೆ.

Gajanana and Gang: ಶ್ರೀ ಮಹದೇವ್-ಅದಿತಿ ಪ್ರಭುದೇವ ಚಿತ್ರದ ಫಸ್ಟ್‌ಲುಕ್ ರಿಲೀಸ್

ವಿಶೇಷವಾಗಿ  'ಗಜಾನನ ಅಂಡ್ ಗ್ಯಾಂಗ್' ಚಿತ್ರದ ಹಾಡೊಂದಕ್ಕೆ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ (Puneeth Rajkumar) ದನಿಯಾಗಿದ್ದಾರೆ. 'ನಾನ್ ಒಳ್ಳೆಯವ್ನೇ, ಆದ್ರೆ ನನ್ ಟೈಮೇ ಸರಿಯಿಲ್ಲ' ಎಂಬ ಸಾಹಿತ್ಯವಿರುವ ಈ ಹಾಡು ಕಾಲೇಜಿನ ಹಿನ್ನೆಲೆಯಲ್ಲಿ ಚಿತ್ರೀಕರಣಗೊಂಡಿದೆ. ಪುನೀತ್ ರಾಜ್​ಕುಮಾರ್ ದನಿಯಲ್ಲಿ ಮೂಡಿ ಬಂದಿರುವ ಹಾಡಿಗೆ ನಿರ್ದೇಶಕ ಅಭಿಷೇಕ್ ಶೆಟ್ಟಿ ಸಾಹಿತ್ಯ ಬರೆದಿದ್ದಾರೆ. ಬೃಂದಾವನ್ ಎಂಟರ್ ಪ್ರೈಸಸ್ ಅಡಿಯಲ್ಲಿ ಯುಎಸ್ ನಾಗೇಶ್ ಕುಮಾರ್ (Nagesh Kumar US) ನಿರ್ಮಾಪಕರಾಗಿ 'ಗಜಾನನ ಅಂಡ್ ಗ್ಯಾಂಗ್' ಚಿತ್ರಕ್ಕೆ ಹಣ ಹೂಡುತ್ತಿದ್ದು, ಚಿತ್ರದ ಹಾಡುಗಳಿಗೆ ಪ್ರದ್ಯುತನ್ (Praddyottan) ಸಂಗೀತ ಸಂಯೋಜಿಸಿದ್ದಾರೆ. ಉದಯ ಲೀಲ ಕ್ಯಾಮರಾ ಕೈಚಳಕ, ವಿಜೆಟ್ ಚಂದ್ರ ಸಂಕಲನ, ಥ್ರಿಲ್ಲರ್ ಮಂಜು ಸಾಹಸ ನಿರ್ದೇಶನ ಚಿತ್ರಕ್ಕಿದೆ.
 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ಭಾರತೀಯ ಸಂಸ್ಕೃತಿಯನ್ನು ಎತ್ತಿ ಹಿಡಿಯುವ ಸಿನಿಮಾ: ‘45’ ಟ್ರೇಲರ್ ಬಿಡುಗಡೆಗೆ ಕೌಂಟ್‌ಡೌನ್
ಶಾರುಖ್ ಪುತ್ರ ಆರ್ಯನ್ ಖಾನ್ ಕನ್ನಡಿಗರ ಜೊತೆ ಅಸಭ್ಯ ವರ್ತನೆ ಮಾಡಿಲ್ಲ: ಸಚಿವ ಜಮೀರ್ ಪುತ್ರ ಹೇಳಿದ್ದೇನು?