
ಸ್ಯಾಂಡಲ್ ವುಡ್ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ನಟನೆ ಜೊತೆಗೆ ರಕ್ಷಿತ್ ಶೆಟ್ಟಿ ಮತ್ತೆ ನಿರ್ದೇಶನಕ್ಕೂ ಮರಳಿದ್ದಾರೆ. 777 ಚಾರ್ಲಿ ಬಳಿಕ ರಕ್ಷಿತ್ ಮತ್ತೆ ತೆರೆಮೇಲೆ ಬಂದಿಲ್ಲ. ಹಾಗಾಗಿ ಅಭಿಮಾನಿಗಳು ಸಿಂಪಲ್ ಸ್ಟಾರ್ ಸಿನಿಮಾಗಾಗಿ ಕಾತರದಿಂದ ಕಾಯುತ್ತಿದ್ದಾರೆ. ಈ ನಡುವೆ ರಕ್ಷಿತ್ ಅಭಿಮಾನಿಗಳಿಗೆ ಬ್ರೇಕಿಂಗ್ ಸುದ್ದಿ ನೀಡಿದ್ದಾರೆ. ಸದ್ಯದಲ್ಲೇ ಅಮೆರಿಕಾಗೆ ಹೋಗುತ್ತಿರುವುದಾಗಿ ಹೇಳಿದ್ದಾರೆ. ಯಾಕೆ ಎಂದು ಕಾರಣ ಸಹ ಬಹಿರಂಗ ಪಡಿಸಿದ್ದಾರೆ. ರಕ್ಷಿತ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ‘ರಿಚರ್ಡ್ ಆ್ಯಂಟನಿ’ ಸಿನಿಮಾ ಸ್ಕ್ರಿಪ್ಟ್ ಕೆಲಸಕ್ಕಾಗಿ ಅಮೆರಿಕಾಗೆ ಹೋಗುತ್ತಿರುವುದಾಗಿ ಹೇಳಿದ್ದಾರೆ.
ಉಡುಪಿಯಲ್ಲಿ ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ ಬಳಿಕ ಮಾಧ್ಯಮದ ಜೊತೆ ಮಾತನಾಡಿ ಇಂಟ್ರಸ್ಟಿಂಗ್ ವಿಚಾರಗಳನ್ನು ಬಹಿರಂಗ ಪಡಿಸಿದರು. ‘ರಿಚರ್ಡ್ ಆ್ಯಂಟನಿ’ ಚಿತ್ರಕ್ಕೆ ಈಗಾಗಲೇ ಒಂದು ಹಂತದವರೆಗಿನ ಸ್ಕ್ರಿಪ್ಟ್ ಕೆಲಸ ನಡೆದಿದ್ದು, ಕೊನೆಯ ಹಂತದ ಸ್ಕ್ರಿಪ್ಟ್ ವರ್ಕ್ ಬಾಕಿ ಇದೆ. ಅದನ್ನು ಪೂರ್ಣಗೊಳಿಸುವ ಸಲುವಾಗಿ ಅಮೆರಿಕಾಗೆ ತೆರಳುತ್ತಿರುವುದಾಗಿ ರಕ್ಷಿತ್ ಹೇಳಿದ್ದಾರೆ.
ಸ್ಕ್ರಿಪ್ಟ್‌ಗೆ ಫೈನಲ್ ಟಚ್ ನೀಡುವ ಹೊತ್ತಿಗೆ ಫೋನ್ ಕರೆಗಳು ಸೇರಿದಂತೆ ಯಾವುದೇ ಡಿಸ್ಟರ್ಬೆನ್ಸ್ ಇರಬಾರದು ಎಂಬ ಕಾರಣಕ್ಕೆ ಅಮೆರಿಕಾಗೆ ಹೋಗುತ್ತಿರುವುದಾಗಿ ಹೇಳಿದ್ದಾರೆ. ಮತದಾನದ ರಾತ್ರಿಯೇ ಅಮೆರಿಕಾಗೆ ತೆರಳುವುದಾಗಿ ತಿಳಿಸಿದ್ದಾರೆ.
ಬಕೆಟ್ ಅಲ್ಲಾ, ಟ್ಯಾಂಕರೇ ಹಿಡಿತೀನಿ; ನೆಟ್ಟಿಗರ ಮಾತಿಗೆ ರಕ್ಷಿತ್ ಶೆಟ್ಟಿ ತಿರುಗೇಟು
ಈಗಾಗಲೇ ಸಪ್ತ ಸಾಗರದಾಚೆ ಎಲ್ಲೋ ಸಿನಿಮಾದ ಶೂಟಿಂಗ್ ಮಾಗಿಸಿದ್ದಾರೆ ರಕ್ಷಿತ್ ಶೆಟ್ಟಿ. ಈ ಬಗ್ಗೆ ಮತನಾಡಿದ ರಕ್ಷಿತ್ ಸಪ್ತ ಸಾಗರದಾಚೆ ಎಲ್ಲೋ ಪೋಸ್ಟ್ ಪ್ರೊಡಕ್ಷನ್ ನಡೆಯುತ್ತಿದೆ ಎಂದು ಬಹಿರಂಗ ಪಡಿಸಿದರು. 'ಇಲ್ಲಿ ರಾತ್ರಿ ಇದ್ದಾಗ ಅಲ್ಲಿ ಬೆಳಗ್ಗೆ ಇರೋದ್ರಿಂದ ಕೆಲಸ ಮಾಡಲು ಸುಲಭ ಆಗುತ್ತದೆ' ಎಂದು ರಕ್ಷಿತ್ ಹೇಳಿದರು.
ಇನ್ನೂ ಅದೇ ಸಮಯದಲ್ಲಿ ಮದುವೆ ಬಗ್ಗೆಯ ಪ್ರಶ್ನೆ ಎದುರಾಯಿತು. ಅಂದಹಾಗೆ ಮದುವೆ ಯಾವಾಗ ಎನ್ನುವ ಪ್ರಶ್ನೆ ರಕ್ಷಿತ್ ಶೆಟ್ಟಿಗೆ ಎದುರಾಗುತ್ತಲೇ ಇರುತ್ತದೆ. ಇದಕ್ಕೆ ಪ್ರತಿಕ್ರಿಯೆ ನೀಡಿದ ರಕ್ಷಿತ್ ಶೆಟ್ಟಿ, ಮುಂದೆ ನೋಡೋಣ ಎಂದು ಹೇಳಿದರು.
ಉಡುಪಿಯಲ್ಲಿ ಮತದಾನ ಮಾಡಿದ ರಕ್ಷಿತ್ ಶೆಟ್ಟಿ: ಮದುವೆ ಬಗ್ಗೆ ಹೇಳಿದ್ದೇನು?
'ಮತದಾನ ಮಾಡುವುದು ಬಹಳ ಮುಖ್ಯ ಅದು ನಮ್ಮ ಜವಾಬ್ದಾರಿ. ನನಗೆ ಪಕ್ಷದ ಮೇಲೆ ಒಲವಿದೆ, ಪ್ರಚಾರಕ್ಕೆ ಹೋಗಲ್ಲ. ಜನರಿಗಾಗಿ ಕೆಲಸ ಮಾಡುವ ನಾಯಕರನ್ನು ಆಯ್ಕೆ ಮಾಡಬೇಕು. ನಾನು ಚಿಕ್ಕವನಾಗಿದ್ದಾಗ ಉಡುಪಿ ನಗರ ಬೆಳಿಬೇಕು ಎಂದು ಆಸೆ ಇತ್ತು. ಈಗ ಬಂದು ನೋಡಿದರೆ ಮೊದಲೇ ಚೆನ್ನಾಗಿತ್ತು ಎಂದು ಅನಿಸುತ್ತಿದೆ. ನಾಯಕನಾದವ ಊರಿಗೆ ಮೂಲಭೂತ ಸೌಕರ್ಯ ಒದಗಿಸಬೇಕು. ಕ್ಷೇತ್ರದ ಜನರ ಬೇಡಿಕೆಗಳನ್ನು ಈಡೇರಿಸಬೇಕು. ಹಳ್ಳಿ ಭಾಗದಲ್ಲಿ ಮತದಾನ ಬಗ್ಗೆ ಜನಕ್ಕೆ ಕಾಳಜಿ ಜಾಸ್ತಿ. ನಮ್ಮ ನಾಯಕ ಯಾರಾಗಬೇಕು ಎಂದು ಜನ ಹೆಚ್ಚೆಚ್ಚು ಸಂಖ್ಯೆಯಲ್ಲಿ ಮತದಾನ ಮಾಡುತ್ತಾರೆ. ಸಿಟಿ ಲೈಫ್ ಬೇರೆ ಆಗಿರುತ್ತದೆ. ಯಾವ ನಾಯಕರು ಅಧಿಕಾರಕ್ಕೆ ಬರುತ್ತಾರೆ ಅಂತ ನಾವು ನಿರೀಕ್ಷೆ ಮಾಡುತ್ತಿದ್ದೇವೆ. ಯುವಜನರು ಯಾರನ್ನು ಆಯ್ಕೆ ಮಾಡುತ್ತಾರೆ ಅವರು ನಮ್ಮ ದೇಶದ ಭವಿಷ್ಯ ಆಗಿರುತ್ತಾರೆ. ಚುನಾವಣಾ ಪ್ರಕ್ರಿಯೆಗೆ ಹೊಸ ಹೊಸ ಮುಖಗಳು ಬರಲೇಬೇಕು. ಹೊಸ ನಾಯಕರು ಬಂದಾಗ ಹೊಸ ಹೊಸ ನಿರೀಕ್ಷೆಗಳು ಇರುತ್ತದೆ' ಎಂದು ರಕ್ಷಿತ್ ಶೆಟ್ಟಿ ವೋಟ್ ಮಾಡಿ ಮಾತನಾಡಿದರು.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.