ರಿಚ್ಚಿ ಚಿತ್ರಕ್ಕೆ ಕುನಾಲ್ ಗಾಂಜಾವಾಲ ಧ್ವನಿ; ಕಳೆದು ಹೋಗಿರುವೆ ಹಾಡು ವೈರಲ್!

Published : May 23, 2023, 12:07 PM IST
ರಿಚ್ಚಿ ಚಿತ್ರಕ್ಕೆ ಕುನಾಲ್ ಗಾಂಜಾವಾಲ ಧ್ವನಿ; ಕಳೆದು ಹೋಗಿರುವೆ ಹಾಡು ವೈರಲ್!

ಸಾರಾಂಶ

ವೈರಲ್ ಅಯ್ತು ಕುನಾಲ್ ಗಾಂಜಾವಾಲ ಹಾಡಿರುವ ಕಳೆದು ಹೋಗಿರುವೆ ಹಾಡು. ಅಗಸ್ತ್ಯ ಸಂತೋಷ್ ಬರೆದಿರುವ ಹಾಡಿದು.

ರಿಚ್ಚಿ ನಾಯಕನಾಗಿ ನಟಿಸಿ, ನಿರ್ದೇಶಿಸಿ ಹಾಗೂ ನಿರ್ಮಾಣ ಮಾಡಿರುವ  'ರಿಚ್ಚಿ' ಚಿತ್ರಕ್ಕಾಗಿ ಖ್ಯಾತ ಗಾಯಕ ಕುನಾಲ್ ಗಾಂಜಾವಾಲ ಹಾಡಿರುವ 'ಕಳೆದು ಹೋಗಿರುವೆ' ಎಂಬ ಹಾಡು ಇತ್ತೀಚೆಗೆ ಬಿಡುಗಡೆಯಾಯಿತು. ಕುನಾಲ್ ಗಾಂಜಾವಾಲ ಸ್ವತಃ ಹಾಡು ಬಿಡುಗಡೆ ಸಮಾರಂಭಕ್ಕೆ ಆಗಮಿಸಿ ಚಿತ್ರಕ್ಕೆ ಶುಭ ಕೋರಿದರು.

ಸಾಮಾನ್ಯವಾಗಿ ನಾನು ನನ್ನ ಹಾಡುಗಳ ಬಿಡುಗಡೆ ಸಮಯದಲ್ಲಿ ಹೆಚ್ಚು ಕಾಣಿಸುವುದಿಲ್ಲ. ಆದರೆ, ಇಲ್ಲಿ ಸಂಗೀತ ನಿರ್ದೇಶಕ ಅಗಸ್ತ್ಯ ಸಂತೋಷ್ ಹಾಗೂ 'ರಿಚ್ಚಿ' ಅವರಿಗಾಗಿ ಬಂದಿದ್ದೇನೆ.  ಈ ಚಿತ್ರದಲ್ಲಿ ಎರಡು ಹಾಡುಗಳನ್ನು ಹಾಡಿದ್ದೇನೆ. ಒಂದು ಮೆಲೋಡಿ, ಮತ್ತೊಂದು ಪ್ಯಾಥೋ ಸಾಂಗ್ ಇಂದು ಮೆಲೋಡಿ ಸಾಂಗ್ ಬಿಡುಗಡೆಯಾಗಿದೆ. ಅಗಸ್ತ್ಯ ಅವರ ಸಂಗೀತ ಸಂಯೋಜನೆ ಚೆನ್ನಾಗಿದೆ. ಚಿನ್ನಿಪ್ರಕಾಶ್ ಈ ಹಾಡಿಗೆ ನೃತ್ಯ ನಿರ್ದೇಶನ ಮಾಡಿದ್ದಾರೆ. ಗೌಸ್ ಫಿರ್ ಬರೆದಿದ್ದಾರೆ. 'ರಿಚ್ಚಿ' ಚಿತ್ರ ಭರ್ಜರಿ ಯಶಸ್ಸು ಕಾಣಲಿ ಎಂದು ಕುನಾಲ್ ಗಾಂಜಾವಾಲ ಹಾರೈಸಿದರು. 

2005 ನೇ ಇಸವಿಯಲ್ಲಿ 'ಆಕಾಶ್' ಚಿತ್ರದ ಹಾಡು ಹಾಡಲು ಬಂದಾಗ ಡಾ||ರಾಜಕುಮಾರ್ ಅವರನ್ನು ಭೇಟಿ ಮಾಡಿದ್ದೆ. ಅವರು ನನ್ನ ಕೈಗೊಂದು ಮುತ್ತು ಕೊಟ್ಟಿದ್ದರು. ಅದು ನನ್ನ ಜೀವನದಲ್ಲಿ ಮರೆಯಲಾಗದ ಘಟನೆ ಎಂದ  ಕುನಾಲ್ ಗಾಂಜಾವಾಲ, ಪುನೀತ್ ರಾಜಕುಮಾರ್ ಅವರೊಟ್ಟಿಗಿನ ಒಡನಾಟವನ್ನು ನೆನಪಿಸಿಕೊಂಡರು.

ಅಪ್ಪುಗಾಗಿ ಎಷ್ಟು ಹಾಡು ಬೇಕಾದ್ರೂ ಹಾಡ್ತೀನಿ; ಅಪ್ಪು ಜೊತೆಗಿನ ನೆನಪು ಬಿಚ್ಚಿಟ್ಟ ಖ್ಯಾತ ಗಾಯಕ ಕುನಾಲ್ ಗಾಂಜಾವಾಲ

'ರಿಚ್ಚಿ' ಒಂದು ಪ್ರೇಮಕಥೆಯ ಚಿತ್ರ. ನಾನು ಚಿಕ್ಕಂದಿನಿಂದಲೇ ಕುನಾಲ್ ಗಾಂಜಾವಾಲ ಅವರ ಅಭಿಮಾನಿ. ನನ್ನ ಚಿತ್ರಕ್ಕೆ ಅವರು ಹಾಡಬೇಕೆಂಬುದು ನನ್ನ ಆಸೆ. ಅದು ಈಡೇರಿದೆ. ಎರಡು ಹಾಡುಗಳನ್ನು ಅವರು ಹಾಡಿದ್ದಾರೆ. ಒಂದು ಈಗ ಬಿಡುಗಡೆಯಾಗಿದೆ. ಕನ್ನಡ ಹಾಗೂ ಹಿಂದಿಯಲ್ಲಿ ಈ ಚಿತ್ರ ಬರಲಿದೆ. ಆಗಸ್ಟ್ ನಲ್ಲಿ ತೆರೆಗೆ ತರುವ ಪ್ರಯತ್ನ ನಡೆಯುತ್ತಿದೆ ಎಂದು ನಾಯಕ, ನಿರ್ಮಾಪಕ ಹಾಗೂ ನಿರ್ದೇಶಕ 'ರಿಚ್ಚಿ' ಹೇಳಿದರು. 

ಸಂಗೀತ ನಿರ್ದೇಶಕ ಅಗಸ್ತ್ಯ ಸಂತೋಷ್ ಹಾಡುಗಳ ಬಗ್ಗೆ ಮಾಹಿತಿ ನೀಡಿದರು. ಸಹ ನಿರ್ಮಾಪಕ ರಾಕೇಶ್ ರಾವ್, ಪ್ರಕೃತಿ ಬನವಾಸಿ, ನಿರ್ಮಾಪಕರಾದ ಅಣಜಿ ನಾಗರಾಜ್, ವೆಂಕಟೇಶ್ ಮುಂತಾದವರು ಹಾಡು ಬಿಡುಗಡೆ ಸಮಾರಂಭದಲ್ಲಿ ಉಪಸ್ಥಿತರಿದ್ದರು.

 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ಬರ್ತಾ ಬರ್ತಾ ಸಖತ್ Bold ಆಗ್ತಿದ್ದಾರೆ ಬಿಗ್ ಬಾಸ್ ಸಿಂಹಿಣಿ Sangeetha Sringeri
ಮದ್ವೆ ಬಗ್ಗೆ ಡಾಲಿ ಧನಂಜಯ್​ ಒಂದೇ ಒಂದು ಮಾತು: 67% Gen Z ಮದ್ವೆಗೆ ರೆಡಿ! ಅಂಥದ್ದೇನು ಹೇಳಿದ್ರು ನಟ?