ಗಾಯಕ ಸೋನು ನಿಗಮ್ ವಿರುದ್ಧ ಕನ್ನಡ ಚಿತ್ರರಂಗದಿಂದ ಅಸಹಕಾರ ನಿರ್ಣಯ!

Published : May 05, 2025, 02:12 PM ISTUpdated : May 05, 2025, 03:22 PM IST
ಗಾಯಕ ಸೋನು ನಿಗಮ್ ವಿರುದ್ಧ ಕನ್ನಡ ಚಿತ್ರರಂಗದಿಂದ ಅಸಹಕಾರ ನಿರ್ಣಯ!

ಸಾರಾಂಶ

ಕನ್ನಡಿಗರನ್ನು ಉಗ್ರರಿಗೆ ಹೋಲಿಸಿ ಅವಮಾನಿಸಿದ ಗಾಯಕ ಸೋನು ನಿಗಮ್‌ರನ್ನು ಕನ್ನಡ ಚಿತ್ರರಂಗದಿಂದ ಅಸಹಕಾರ ನಿರ್ಣಯ ಕೈಗೊಳ್ಳಲಾಗಿದೆ. ಬೆಂಗಳೂರಿನ ಕಾರ್ಯಕ್ರಮವೊಂದರಲ್ಲಿ ಕನ್ನಡ ಹಾಡು ಹಾಡಲು ಕೇಳಿದ ಪ್ರೇಕ್ಷಕರನ್ನು ಪೆಹಲ್ಗಾಮ್ ಉಗ್ರರಿಗೆ ಹೋಲಿಸಿದ್ದರು. ಕ್ಷಮೆ ಕೇಳದೆ ಮತ್ತೆ ಅವಮಾನಿಸಿದ್ದರಿಂದ ಚಲನಚಿತ್ರ ವಾಣಿಜ್ಯ ಮಂಡಳಿ ಈ ಕ್ರಮ ಕೈಗೊಂಡಿದೆ.

ಬೆಂಗಳೂರು (ಮೇ 05): ಕನ್ನಡ ಹಾಡುಗಳನ್ನು ಹೇಳುವಂತೆ ಕೇಳಿದ ಕನ್ನಡಿಗರನ್ನು ಪೆಹಲ್ಗಾಮ್ ಉಗ್ರರಿಗೆ ಹೋಲಿಕೆ ಮಾಡಿ ದುರ್ವರ್ತನೆ ತೋರಿಸಿದ ಗಾಯಕ ಸೋನು ನಿಗಮ್ ವಿರುದ್ಧ ಕನ್ನಡ ಚಿತ್ರರಂಗದಿಂದ ಅಸಹಕಾರ ನಿರ್ಣಯ ಕೈಗೊಳ್ಳಲಾಗಿದೆ.

ಕನ್ನಡ ಚಿತ್ರರಂಗದಿಂದ ಜೀವನ ಕಟ್ಟಿಕೊಂಡ ಹಿಂದಿ ಗಾಯಕ ಸೋನು ನಿಗಮ್ ಕಾಲೇಜೊಂದರ ಕಾರ್ಯಕ್ರಮಕ್ಕೆ ಬಂದು ಕನ್ನಡದ ಹಾಡುಗಳನ್ನು ಹೇಳುವಂತೆ ಕೇಳಿದ ಕನ್ನಡಿಗರನ್ನು ಪೆಹಲ್ಗಾಮ್ ಉಗ್ರರಿಗೆ ಹೋಲಿಕೆ ಮಾಡಿ ಕುಚೇಷ್ಟೆ ಮೆರೆದಿದ್ದರು. ಇದರ ಬಳಿಕ ಕನ್ನಡಪರ ಸಂಘಟನೆಗಳು ಕ್ಷಮೆ ಕೋರುವಂತೆ ಆಗ್ರಹಿಸಿದ ನಂತರ, ಕ್ಷಮೆ ಕೇಳದೇ ತನ್ನ ಹೇಳಿಕೆಗೆ ಸ್ಪಷ್ಟನೆ ಕೊಡುವ ಜೊತೆಗೆ ಮತ್ತೊಮ್ಮೆ ಕನ್ನಡಿಗರನ್ನು ಪುಂಡರು ಎಂದು ಹೇಳಿ ವಿಡಿಯೋ ಹರಿಬಿಟ್ಟಿದ್ದಾರೆ. ಈ ಮೂಲಕ ದುರ್ವರ್ತನೆ ತೋರಿಸಿದ ಗಾಯಕ ಸೋನು ನಿಗಮ್ ವಿರುದ್ಧ ಕನ್ನಡ ಚಿತ್ರರಂಗದಲ್ಲಿಯೂ ಆಕ್ರೋಶ ವ್ಯಕ್ತವಾಗಿದ್ದು, ಇಂದು ಚಲನಚಿತ್ರ ವಾಣಿಜ್ಯ ಮಂಡಳಿಯಿಂದ ನಡೆದ ಸಭೆ ನಡೆಸಲಾಯಿತು. ಈ ಸಭೆಯಲ್ಲಿ ಗಾಯಕ ಸೋನು ನಿಗಮ್‌ನನ್ನು ಕನ್ನಡ ಚಿತ್ರರಂಗದಿಂದ ನಿಷೇಧಿಸುವ ಮುನ್ನ ಅಸಹಕಾರ ನಿರ್ಣಯ ಕೈಗೊಳ್ಳಲಾಗಿದೆ.

ಗಾಯಕ ಸೋನು ನಿಗಮ್ ವಿವಾದಾತ್ಮಕ ಹೇಳಿಕೆ ವಿಚಾರದ ಬಗ್ಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಗಂಭೀರವಾಗಿ ಕ್ರಮ ಜರುಗಿಸುವ ಬಗ್ಗೆ ಸಭೆ ನಡೆಸಲಾಯಿತು. ಈ ಸಭೆಯಲ್ಲಿ Karnataka Film Chamber of Commerce (KFCC) ಅಧ್ಯಕ್ಷ ನರಸಿಂಹಲು, ವಾಣಿಜ್ಯ ಮಂಡಳಿಯ ಕುಮಾರ್, ಸಂಗೀತ ನಿರ್ದೇಶಕ ಧರ್ಮವಿಶ್, ನಿರ್ದೇಶಕರ ಸಂಘದ ಅಧ್ಯಕ್ಷ ವಿಶ್ವನಾಥ್ , ಗಾಯಕಿ ಶಮಿತಾ ಮಲ್ನಾಡ್ ಭಾಗಿಯಾಗಿದ್ದರು.

ಸಭೆಯ ಬಳಿಕ ಮಾತನಾಡಿದ ಫಿಲ್ಮ್ ಚೇಂಬರ್ ಅಧ್ಯಕ್ಷ ನರಸಿಂಹಲು, ಪಹಲ್ಗಾಮ್ ಗಲಭೆ ಕುರಿತು ಸೋನು ನಿಗಮ್ ಖಾಸಗಿ ಶಾಲೆಯಲ್ಲಿ‌ ಮಾತನಾಡಿದ್ದಾರೆ. ಪಹಲ್ಗಾಮ್ ವಿಚಾರವನ್ನ ಕನ್ನಡಿಗರಿಗೆ ಹೋಲಿಕೆ ಮಾಡಿದ್ದಾರೆ. ಇದು ಸರಿಯಲ್ಲ. ಮತ್ತೆ ಲೈವ್ ಬಂದು ಅವರ ಮಾತನ್ನ ಸಮರ್ಥಿಸಿಕೊಂಡಿದ್ದಾರೆ. ಈ ಕ್ಷಣದಿಂದಲೇ ಅಸಹಕಾರ ತೋರಿಸಲು ತೀರ್ಮಾನಿಸಲಾಗಿದೆ. ಅವರ ಜೊತೆಗೆ ಯಾವುದೇ ಚಟುವಟಿಕೆ ಮಾಡಬಾರದು. ಅವರನ್ನ ಕರ್ನಾಟಕ ಇಂಡಸ್ಟ್ರಿಯಿಂದ ಅಸಹಕಾರ ಮಾಡ ಬೇಕು ಅಂತ ತೀರ್ಮಾನಿಸಲಾಗಿದೆ. ಮುಂದಿನ ದಿನಗಳಲ್ಲಿ ಅವರ ವಿರುದ್ದ ಯಾವ ರೀತಿ ಕ್ರಮ ತೆಗೆದುಕೊಳ್ಳಬೇಕು ಅಂತ ಚರ್ಚಿಸುತ್ತೇವೆ. ಯಾರು ಕೂಡ ಅವರನ್ನ ಕರೆಯಬಾರದು. ಸಿನಿಮಾಗಳಲ್ಲಿ ಅವರ ಕೈಯಲ್ಲಿ ಹಾಡಿಸಬಾರದು. ಅವರ ಕೈಯಲ್ಲಿ ಲೈವ್ ಕಾರ್ಯಕ್ರಮ ಮಾಡಿಸಬಾರದು ಎಂದು ಹೇಳಿದರು.

ಸೋನು ನಿಗಮ್‌ನನ್ನು ಯಾರು ಕರೆಸಿ ಹಾಡು ಹಾಡಿಸಬಾರದು. ಯಾರಾದರೂ ಅವರನ್ನ ಕರೆದು ಹಾಡು ಹಾಡಿಸಿದ್ರೆ ಕ್ರಮಕೈಗೊಳ್ಳುತ್ತೇವೆ. ಯಾವ ರೀತಿ ಕ್ರಮಕೈಗೊಳ್ಳಬೇಕು ಅಂತ ಚರ್ಚೆ ಮಾಡಿ ತೀರ್ಮಾನಿಸುತ್ತೇವೆ. ಸದ್ಯಕ್ಕೆ ಅಸಹಕಾರ ಅಂತ ತೀರ್ಮಾನ ಮಾಡಿದ್ದೇವೆ. ಇದೇ ವಿಚಾರಕ್ಕೆ ಮುಂದಿನ ದಿನಗಳಲ್ಲಿ ಎಲ್ಲರನ್ನ ಆಹ್ವಾನಿಸುತ್ತೇವೆ. ಅವತ್ತು ಅವರನ್ನ ಬ್ಯಾನ್ ಮಾಡಬೇಕಾ? ಎಷ್ಟು ದಿನ ಬ್ಯಾನ್ ಮಾಡಬೇಕು? ಯಾವ ರೀತಿ ಅವರ ವಿರುದ್ದ ಕ್ರಮಕೈಗೊಳ್ಳಬೇಕು ಅಂತ ತೀರ್ಮಾನ ಮಾಡುತ್ತೇವೆ ಎಂದು ಕನ್ನಡ ಫಿಲ್ಮ್ ಚೇಂಬರ್ ನರಸಿಂಹಲು ತಿಳಿಸಿದ್ದಾರೆ.

ನಾವು ಸಂಗೀತ ನಿರ್ದೇಶಕರ ಬಳಿ ಮಾತನಾಡಿದ್ದೇವೆ. ಸಾಧುಕೋಕಿಲ, ಹರಿಕೃಷ್ಣ ಅವರ ಬಳಿ ಮಾತನಾಡಿದ್ದೇವೆ. ನಮ್ಮ ಅಸೋಸಿಯೇಷನ್ ನಲ್ಲಿ ಎಲ್ಲರ ಹತ್ತಿರ ಮಾತನಾಡಿದ್ದೇವೆ. ಎಲ್ಲರೂ ಇವತ್ತು ಬರಲು ಸಾಧ್ಯವಾಗಿಲ್ಲ. ಕನ್ನಡಕ್ಕೆ ಅವಮಾನ ಮಾಡಿದವರನ್ನ ನಾವು ಪ್ರೋತ್ಸಾಹ ಮಾಡಲ್ಲ. ಅಸಹಕಾರ ಕೊಟ್ಟರೆ ಸಾಲದು ಎಲ್ಲ ಸೇರಿ ಅವರಿಗೆ ಅಸಹಕಾರ ಕೊಡಲ್ಲ. ಒಂದು ಸಾಂಗ್ ನ್ನು ಯಾರು ಹಾಡಬೇಕು ಅಂತ ಡಿಸೈಡ್ ಮಾಡೋಕೆ 4 ಜನ ಇರ್ತಾರೆ. ಅವರೆಲ್ಲ ಸಹಕಾರ ಇದಕ್ಕೆ ಬೇಕಾಗುತ್ತದೆ. ಅವರು ಕ್ಷಮೆ ಕೇಳುವವರೆಗೆ ಅವರಿಗೆ 100% ಅಸಹಕಾರ ತೋರಿಸುತ್ತೇವೆ.
- ಧರ್ಮ ವಿಶ್, ಸಂಗೀತ ನಿರ್ದೇಶಕರ ಸಂಘದ ಅಧ್ಯಕ್ಷ

ಚಿತ್ರರಂಗದಿಂದ ಬಹಿಷ್ಕಾರ:
ಈ ಹೇಳಿಕೆಯ ಬಳಿಕ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (KFCC) ಗಾಯಕ ಸೋನು ನಿಗಮ್ ಮೇಲೆ ತೀವ್ರ ಕ್ರಮಕ್ಕೆ ಮುಂದಾಗಿದೆ. ಸಂಗೀತ ನಿರ್ದೇಶಕರ ಸಂಘ, ನಿರ್ದೇಶಕರ ಸಂಘ ಹಾಗೂ ನಿರ್ಮಾಪಕರ ಸಂಘದ ಪ್ರತಿನಿಧಿಗಳು ಸೇರಿ ವಿಶೇಷ ಸಭೆಯನ್ನು ನಡೆಸಿ ಈ ತೀರ್ಮಾನ ಕೈಗೊಂಡಿದ್ದಾರೆ. ಸಂಗೀತ ನಿರ್ದೇಶಕ ಸಾಧು ಕೋಕಿಲ, ಹರಿಕೃಷ್ಣ, ಅರ್ಜುನ್ ಜನ್ಯ ಹಾಗೂ ಧರ್ಮ ವಿಷ್ ಈ ಸಭೆಯಲ್ಲಿ ಪಾಲ್ಗೊಂಡಿದ್ದಾರೆ. ಈ ಸಭೆಯಲ್ಲಿ ಸೋನು ನಿಗಮ್ ವಿರುದ್ಧ ಭವಿಷ್ಯದಲ್ಲಿ ಯಾವುದೇ ಚಿತ್ರಗಳಲ್ಲಿ ಅವರು ಹಾಡು ಹಾಡಬಾರದು ಎಂಬ ನಿರ್ಧಾರಕ್ಕೂ ಚರ್ಚೆ ನಡೆಯಿತು. ಆದರೆ, ಇದೀಗ ಕನ್ನಡ ಚಿತ್ರರಂಗದಿಂದ ಅಸಹಾಕಾರ ನಿರ್ಣಯ ಕೈಗೊಳ್ಳಲಾಗಿದೆ.

ಸೋನು ನಿಗಮ್ ರನ್ನು  ಬ್ಯಾನ್ ಮಾಡಬೇಕು ಅಂತ ನಾವು ಕೇಳಿದ್ದೇವೆ. ಅವರು ಮಾಡಿದ್ದು ತಪ್ಪು. ಅವರಿಗೆ ಅನೇಕ ಅವಕಾಶ ಕೊಡಲಾಗಿದೆ. ಇಷ್ಟಾದರೂ ಕನ್ನಡಿಗರಿಗೆ ಅವಮಾನ‌ ಮಾಡಿದ್ದಾರೆ. ಹೀಗಾಗಿ ನಾವು ಸೋನು ನಿಗಮ್ ರನ್ನು ಬ್ಯಾನ್ ಮಾಡಿ ಅಂತ ಹೇಳಿದ್ದೇವೆ. ಬೇಕಿದ್ದರೆ ನಾವು ಸಹಿ ಸಂಗ್ರಹ ಮಾಡುತ್ತೇವೆ.
- ವಿಶ್ವನಾಥ್, ಕನ್ನಡ ಚಲನಚಿತ್ರ ನಿರ್ದೇಶಕರ ಸಂಘದ ಅಧ್ಯಕ್ಷ 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ಟಾಕ್ಸಿಕ್ ಸಿನಿಮಾ ರಿಲೀಸ್ ಸಮೀಪಿಸುತ್ತಿದ್ದಂತೆ ಐಟಿ ಪ್ರಕರಣದಲ್ಲಿ ನಟ ಯಶ್‌ಗೆ ಹೈಕೋರ್ಟ್ ರಿಲೀಫ್
ಜ್ಯೋತಿಷಿ ವೇಣು ಸ್ವಾಮಿ ಭವಿಷ್ಯ: ಸಮಂತಾ ಬಾಳಲ್ಲಿ ನಿಜವಾಯ್ತು, ಆದ್ರೆ ರಶ್ಮಿಕಾ ಲೈಫಲ್ಲಿ ಸುಳ್ಳಾಗಲಿ ಅಂತಿರೋ ಫ್ಯಾನ್ಸ್!