
ಅನೂಪ್ ಅಂಟೋನಿ ನಿರ್ದೇಶನ ಮಾಡುತ್ತಿದ್ದಾರೆ. ಹಿರಿಯ ನಿರ್ಮಾಪಕಿ ದಿ.ಪಾರ್ವತಮ್ಮ ರಾಜ್‌ಕುಮಾರ್ ಅವರ ಸೋದರನ ಪುತ್ರ ಧ್ರುವನ್ ಈ ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗಕ್ಕೆ ಪರಿಚಯ ಆಗುತ್ತಿದ್ದಾರೆ.
ಚಿತ್ರದ ಹೆರಿನಿಂದಲೇ ಗಮನ ಸೆಳೆಯುತ್ತಿರುವ ಈ ಚಿತ್ರದಲ್ಲಿ ವಿಶೇಷವಾದ ಕತೆ ಇದೆ. ಚಿತ್ರದಲ್ಲಿ ನಾಯಕಿ ಪಾತ್ರಕ್ಕೆ ತುಂಬಾ ಮಹತ್ವ ಇದ್ದು, ಈ ಪಾತ್ರವನ್ನು ಸೋನಾಲ್ ಅವರಿಗೆ ನಿಭಾಯಿಸುವ ಶಕ್ತಿ ಎನ್ನುವ ಕಾರಣಕ್ಕೆ ಅವರನ್ನು ಚಿತ್ರದ ನಾಯಕಿಯನ್ನಾಗಿ ಆಯ್ಕೆ ಮಾಡಿಕೊಳ್ಳಲಾಗಿದೆ. ಸೋನಾಲ್ ಅವರ ಹುಟ್ಟುಹಬ್ಬದ ಪ್ರಯುಕ್ತ ನಿರ್ದೇಶಕ ಅನೂಪ್ ಅಂಟೋನಿ ತಮ್ಮ ಚಿತ್ರದ ನಾಯಕಿ ಯಾರೆಂದು ಘೋಷಣೆ ಮಾಡಿದ್ದಾರೆ.
ಪದವಿಪೂರ್ವ ಚಿತ್ರಕ್ಕೂ ಜತೆಯಾದ ಸೋನಾಲ್
ನಿರ್ದೇಶಕ ಯೋಗರಾಜ್ ಭಟ್ ತಂಡದಲ್ಲಿ ಗುರುತಿಸಿಕೊಂಡಿರುವ ಹರಿಪ್ರಸಾದ್ ಜಯಣ್ಣ ನಿರ್ದೇಶನದ ‘ಪದವಿಪೂರ್ವ’ ಚಿತ್ರದಲ್ಲಿ ನಟಿ ಸೋನಾಲ್ ಮೊಂತೆರೋ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಚಿತ್ರದಲ್ಲಿ ಪೃಥ್ವಿ ಶಾಮನೂರು, ಅಂಜಲಿ ಅನೀಶ್, ಯಶ ಶಿವಕುಮಾರ್ ನಟಿಸುತ್ತಿದ್ದಾರೆ. ಯೋಗರಾಜ್ ಭಟ್ ಹಾಗೂ ರವಿ ಶಾಮನೂರು ಜಂಟಿಯಾಗಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.