ಆಸ್ಪತ್ರೆಯಲ್ಲಿಯೇ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡ ಎಸ್‌ಪಿಬಿ!

Kannadaprabha News   | Asianet News
Published : Sep 08, 2020, 09:04 AM IST
ಆಸ್ಪತ್ರೆಯಲ್ಲಿಯೇ  ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡ ಎಸ್‌ಪಿಬಿ!

ಸಾರಾಂಶ

ಕೊರೋನಾ ಸೋಂಕಿನಿಂದ ಇಲ್ಲಿನ ಎಂಜಿಎಂ ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಖ್ಯಾತ ಗಾಯಕ ಎಸ್‌.ಪಿ ಬಾಲಸುಬ್ರಹ್ಮಣ್ಯಂ ಕೊರೋನಾ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. 

ಚೆನ್ನೈ: ಇತ್ತೀಚಿನ ತಪಾಸಣೆ ವೇಳೆ ಅವರಲ್ಲಿ ಕೊರೋನಾ ನೆಗೆಟಿವ್‌ ಬಂದಿದೆ ಎಂದು ಪುತ್ರ ಎಸ್‌.ಪಿ.ಚರಣ್‌ ಮಾಹಿತಿ ನೀಡಿದ್ದಾರೆ.

ಈ ಕುರಿತು ಸೋಮವಾರ ಮಾಹಿತಿ ನೀಡಿರುವ ಚರಣ್‌ ‘ತಂದೆಯ ಆರೋಗ್ಯದಲ್ಲಿ ಗಣನೀಯ ಚೇತರಿಕೆ ಕಂಡುಬಂದಿದೆ. ಅವರಿಗೆ ಕೊರೋನಾ ನೆಗೆಟಿವ್‌ ಬಂದಿದೆ. ಜೊತೆಗೆ ಶ್ವಾಸಕೋಶದಲ್ಲಿ ಉಂಟಾಗಿದ್ದ ಸೋಂಕು ನಿವಾರಣೆ ಆಗುತ್ತಿದೆ. ಅವರೀಗ ಫಿಸಿಯೋಥೆರಪಿ ನೀಡಲಾಗುತ್ತಿದೆ’ ಎಂದು ತಿಳಿಸಿದ್ದಾರೆ.

ಇದೇ ವೇಳೆ ‘ಆಸ್ಪತ್ರೆಯಲ್ಲೇ ತಂದೆ- ತಾಯಿಯ ವಿವಾಹ ವಾಷಿಕೋತ್ಸವವನ್ನು ಸಣ್ಣದಾಗಿ ಆಚರಿಸಲಾಯಿತು. ಇದರ ಜೊತೆಗೆ ತಂದೆ ಐಪ್ಯಾಡ್‌ನಲ್ಲಿ ಕ್ರಿಕೆಟ್‌ ಮತ್ತು ಟೆನಿಸ್‌ ಪಂದ್ಯಗಳನ್ನು ವೀಕ್ಷಿಸುತ್ತಿದ್ದಾರೆ. ಐಪಿಎಲ್‌ ಆರಂಭವಾಗುವುದನ್ನೇ ಎದುರು ನೋಡುತ್ತಿದ್ದಾರೆ. ತಂದೆ ಗುಣಮುಖರಾಗಲಿ ಎಂದು ಅಭಿಮಾನಿಗಳ ಪ್ರಾರ್ಥನೆ, ಪ್ರೀತಿ-ವಿಶ್ವಾಸಕ್ಕೆ ತಾವೆಂದಿಗೂ ಚಿರಋುಣಿ’ ಎಂದು ಎಸ್‌ಪಿ ಚರಣ್‌ ತಿಳಿಸಿದ್ದಾರೆ.

ಕೊರೋನಾ ಸೋಂಕಿಗೆ ತುತ್ತಾಗಿದ್ದ ಎಸ್‌ಪಿಬಿ ಅವರು ಆ.5ರಂದು ತಮಿಳುನಾಡು ರಾಜಧಾನಿ ಚೆನ್ನೈನಲ್ಲಿರುವ ಎಂಜಿಎಂ ಆಸ್ಪತ್ರೆಗೆ ದಾಖಲಾಗಿದ್ದರು.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಟಾಕ್ಸಿಕ್ ಪೋಸ್ಟರ್ ರಿಲೀಸ್ ಮಾಡಿ ಕುತೂಹಲ ಹೆಚ್ಚಿಸಿದ ಯಶ್, ಸಿನಿಮಾ ಬಿಡುಗಡೆ ಕೌಂಟ್‌ಡೌನ್ ಶುರು
ಕನ್ನಡಿಗರ ಪ್ರೀತಿಯ ಪುಟ್ಟಿ ಯಾಕ್ ಹೀಗಾದ್ರು? Rukmini Vasanth ನ್ಯೂ ಲುಕ್ ವೈರಲ್