
ಶ್ರೀನಗರ ಕಿಟ್ಟಿನಟನೆಯ ‘ಗೌಳಿ’ ಚಿತ್ರಕ್ಕೆ ಇತ್ತೀಚೆಗೆ ಅದ್ದೂರಿಯಾಗಿ ಮುಹೂರ್ತ ನಡೆಯಿತು. ರಘು ಸಿಂಗಮ್ ನಿರ್ಮಿಸುತ್ತಿರುವ ಈ ಚಿತ್ರವನ್ನು ಸೂರ ನಿರ್ದೇಶನ ಮಾಡುತ್ತಿದ್ದಾರೆ. ಆ್ಯಕ್ಷನ್, ಥ್ರಿಲ್ಲರ್ ಚಿತ್ರ ಇದಾಗಿದ್ದು, ಮೊದಲ ಬಾರಿಗೆ ಶ್ರೀನಗರ ಕಿಟ್ಟಿತುಂಬಾ ರಗ್‌್ಡ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
‘ನಾನು ಇಲ್ಲಿಯವರೆಗೂ ಮಾಡಿರುವ ಚಿತ್ರಗಳದ್ದೇ ಒಂದು ಹಂತವಾದರೆ, ಗೌಳಿ ಚಿತ್ರದ್ದೇ ಮತ್ತೊಂದು ಹಂತ. ಈ ಚಿತ್ರದಲ್ಲಿನ ನನ್ನ ಪಾತ್ರದ ಲುಕ್ಕು, ಕತೆಯಲ್ಲಿ ಸಾಕಷ್ಟುಹೊತನದಿಂದ ಕೂಡಿದೆ. ಪೂರ್ತಿ ಗಡ್ಡ ಬಿಟ್ಟು ಹೀಗೆ ನಾನು ಕಾಣಿಸಿಕೊಂಡಿರಲಿಲ್ಲ. ಇದೇ ಮೊದಲು. ನಿರ್ದೇಶಕ ಸೂರ ನನ್ನನ್ನು ಹೊಸ ರೀತಿಯಲ್ಲಿ ಈ ಚಿತ್ರದ ಮೂಲಕ ತೋರಿಸುತ್ತಿದ್ದಾರೆ’ ಎನ್ನುತ್ತಾರೆ ನಟ ಶ್ರೀನಗರ ಕಿಟ್ಟಿ.
ಪಾವನಾ ನಾಯಕಿಯಾಗಿ ನಟಿಸುತ್ತಿರುವ ಈ ಚಿತ್ರದಲ್ಲಿ ಯಶ್ ಶೆಟ್ಟಿಖಳನಾಯಕನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ರಂಗಾಯಣ ರಘು ಚಿತ್ರದ ಮುಖ್ಯ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಪ್ರಜ್ವಲ್ ಗೌಡ ಕ್ಯಾಮೆರಾ ಹಿಡಿಯುತ್ತಿದ್ದು, ಶಶಾಂಕ್ ಶೇಷಗಿರಿ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ಸೆ.21ರಿಂದ ಯಲ್ಲಾಪುರ, ಶಿರಸಿ ಮುಂತಾದ ಕಡೆ ಚಿತ್ರೀಕರಣ ನಡೆಯಲಿದೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.