
ರೆಬಲ್ ಸ್ಟಾರ್ ಅಂಬರೀಶ್ ಜನ್ಮದಿನವನ್ನು ಇಂದು (ಮೇ 29) ಆಚರಿಸಲಾಗುತ್ತಿದೆ. ಅಭಿಮಾನಿಗಳು ಹಾಗೂ ಕುಟುಂಬದವರು ಅಂಬಿ ನೆನಪಲ್ಲೇ ಹುಟ್ಟುಹಬ್ಬ ಆಚರಿಸುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ರೆಬಲ್ ಸ್ಟಾರ್ ಫೋಟೋ, ವಿಡಿಯೋಗಳನ್ನು ಶೇರ್ ಮಾಡಿ ಅಭಿಮಾನಿಗಳು ಪ್ರೀತಿಯ ವಿಶ್ ಮಾಡಿ ನೆಚ್ಚಿನ ನೆಟನನ್ನು ಸ್ಮರಿಸುತ್ತಿದ್ದಾರೆ. ಕಂಠೀರವ ಸ್ಟೂಡಿಯೋದಲ್ಲಿರುವ ಅಂಬರೀಶ್ ಸ್ಮಾರಕ ಉದ್ಘಾಟನೆ ಆಗಿರುವ ಕಾರಣ ಅಪಾರ ಸಂಖ್ಯೆಯ ಅಭಿಮಾನಿಗಳು ಹರಿದು ಬರುತ್ತಿದ್ದಾರೆ. ಅಂಬಿ ಸ್ಮಾರಕ ದರ್ಶನ ಪಡೆದು ವಿಶೇಷ ನಮನ ಸಲ್ಲಿಸುತ್ತಿದ್ದಾರೆ. ಇನ್ನು ಕುಟುಂಬದವರು ಸ್ಮಾರಕ್ಕೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.
ಅಂಬಿ ಹುಟ್ಟುಹಬ್ಬದ ಈ ಸಮಯದಲ್ಲಿ ಸುಮಲತಾ ಅಂಬರೀಶ್ ಭಾವುಕ ಸಾಲು ಹಂಚಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಶೇರ್ ಮಾಡಿ, ಬಾಲ್ಯದ ಆ ತುಂಟತನ ನಿಮ್ಮಲ್ಲಿ ಕೊನೆವರೆಗೂ ಇತ್ತು. ಜತೆಗಿರದ ಜೀವ ಎಂದೆಂದಿಗೂ ಜೀವಂತ ಎಂದು ಹೇಳಿದ್ದಾರೆ.
'ರೆಬೆಲ್ ಸ್ಟಾರ್' ಅಂಬಿ ಜನ್ಮದಿನಕ್ಕೆ ಫ್ಯಾನ್ಸ್‌ಗೆ ಗುಡ್ ನ್ಯೂಸ್: ಹೊಸ ರೂಪದಲ್ಲಿ 'ಅಂತ' ಸಿನಿಮಾ ರೀ-ರಿಲೀಸ್!
'ನಿಮ್ಮ ಬಾಲ್ಯದ ದಿನಗಳನ್ನು ಆಗಾಗ್ಗೆ ಹೇಳುತ್ತಿದ್ದಿರಿ. ಬಾಲ್ಯದ ಆ ತುಂಟತನ ಅದು ನಿಮ್ಮಲ್ಲಿ ಕೊನೆವರೆಗೂ ಇತ್ತು. ಹಾಗಾಗಿ ನಿಮ್ಮ ಹುಟ್ಟುಹಬ್ಬ ಅದೊಂದು ಸಡಗರವಾಗಿರುತ್ತಿತ್ತು. ಅದು ನಮಗಷ್ಟೇ ಅಲ್ಲ, ಅಭಿಮಾನಿಗಳ ಪಾಲಿಗೆ ನಿಜವಾದ ಹಬ್ಬ. ಭೌತಿಕವಾಗಿ ನಮ್ಮೊಂದಿಗೆ ನೀವು ಇದ್ದಿದ್ದರೆ, ಇಂದು 71ನೇ ವರ್ಷದ ಹುಟ್ಟುಹಬ್ಬವನ್ನೂ ಅಭಿಮಾನಿಗಳ ಜೊತೆಯಾಗಿ ಮತ್ತಷ್ಟು ಅದ್ಧೂರಿಯಾಗಿ ಆಚರಿಸುತ್ತಿದ್ದೆವು. ಮನೆ ಮುಂದೆ ಜನಸಾಗರ, ನಿಮ್ಮ ಆರ್ಭಟ, ಹಾಸ್ಯ ಪ್ರಜ್ಞೆಯ ಮಾತು, ರಾತ್ರಿ ಇಡೀ ಕಾಯುತ್ತಾ ನಿಂತಿದ್ದ ಅಭಿಮಾನಿಗಳ ಘೋಷಣೆ ಇನ್ನೂ ಹಾಗೆಯೇ ಇದೆ. ಇವತ್ತೂ ಕೂಡ ಅವೆಲ್ಲವೂ ನಿಮಗೆ ಶುಭಾಶಯ ಹೇಳುತ್ತಿವೆ. ಹ್ಯಾಪಿ ಬರ್ತಡೇ ಮೈ ಅಂಬಿ. ಜತೆಗಿರದ ಜೀವ ಎಂದೆಂದಿಗೂ ಜೀವಂತ' ಎಂದು ಭಾವುಕ ವಿಶ್ ಮಾಡಿದ್ದಾರೆ.
ಅಂಬರೀಶ್‌ಗೊಂದು ಸ್ಮಾರಕ ನಿರ್ಮಿಸಲಿಲ್ಲ: ಎಚ್‌ಡಿಕೆ ವಿರುದ್ಧ ಸುಮಲತಾ ವಾಗ್ದಾಳಿ
ಸುಮಲತಾ ಮತ್ತು ಅಂಬರೀಶ್ ಇಬ್ಬರೂ ಪ್ರೀತಿಸಿ ಮದುವೆಯಾದವರು. 1991ರಲ್ಲಿ ಅಂಬರೀಶ್ ಜೊತೆ ದಾಂಪತ್ಯಕ್ಕೆ ಕಾಲಿಟ್ಟರು. ಇಬ್ಬರೂ ಸಂತೋಷದ ಜೀವನ ನಡೆಸಿದರು. ಆದರೆ ವಿಧಿಯಾಟ ಬೇರೆಯಾಗಿತ್ತು 2018ರಲ್ಲಿ ಅಂಬರೀಶ್ ಕೊನೆಯುಸಿರೆಳೆದರು. ಅಂಬರೀಶ್ ನಿಧನ ಹೊಂದಿ 4 ವರ್ಷಗಳು ಕಳೆದಿವೆ. ಆದರೆ ಅಭಿಮಾನಿಗಳ ಹೃದಯದಲ್ಲಿ ಇನ್ನೂ ಜೀವಂತವಾಗಿದ್ದಾರೆ. ಅದ್ಭುತ ಸಿನಿಮಾಗಳ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಿದ್ದಾರೆ. ಅಂಬಿ ಇಲ್ಲ ಎನ್ನುವ ಬೇಸರದ ನಡುವೆಯೂ ಅಭಿಮಾನಿಗಳು ನೆಚ್ಚಿನ ನಟನ ಹುಟ್ಟುಹಬ್ಬ ಆಚರಿಸುತ್ತಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.