Dhananjay: ಮೋಡ ಕವಿದ ವಾತಾವರಣದಲ್ಲೇ 'ತೋತಾಪುರಿ' ತಿಂದು ಮೊಡವೆ ಬಂತು!

Suvarna News   | Asianet News
Published : Nov 25, 2021, 11:35 AM IST
Dhananjay: ಮೋಡ ಕವಿದ ವಾತಾವರಣದಲ್ಲೇ 'ತೋತಾಪುರಿ' ತಿಂದು ಮೊಡವೆ ಬಂತು!

ಸಾರಾಂಶ

ಧನಂಜಯ್ ತೋತಾಪುರಿ ಚಿತ್ರದಲ್ಲಿ ನಾರಾಯಣ್ ಪಿಳ್ಳೈ ಆಗಿ ಕಾಣಿಸಿಕೊಳ್ಳುತ್ತಿದ್ದು, ಮೋಡ ಕವಿದ ವಾತಾವರಣದಲ್ಲೇ ಮೊಡವೆ ಬರಬೇಕೇ..? ಥತ್ತೇರಿಕೆ..! ಎಂಬ ಬರಹವಿರುವ ಪೋಸ್ಟರ್‌ನ್ನು ಫೇಸ್‌ಬುಕ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ. 

ಡಾಲಿ ಧನಂಜಯ್ (Dhananjay) 'ಟಗರು' (Tagaru) ಚಿತ್ರದ ನಂತರ ಕನ್ನಡ ಚಿತ್ರರಂಗದಲ್ಲಿ ಸಖತ್ ಬ್ಯುಸಿಯಾಗಿದ್ದು, ಸಾಲು ಸಾಲು ಚಿತ್ರಗಳು ಅವರ ಕೈಯಲ್ಲಿವೆ. ನಿನ್ನೆಯಷ್ಟೇ ಅವರ ಹೊಸ ಚಿತ್ರ 'ಒನ್ಸ್ ಅಪಾನ್ ಎ ಟೈಮ್ ಇನ್ ಜಮಾಲಿಗುಡ್ಡ' (Once Upon a Time in Jamaligudda) ಟೈಟಲ್ ಪೋಸ್ಟರ್ ಬಿಡುಗಡೆಯಾಗಿತ್ತು. ಇದೀಗ ಅವರು ಪ್ರಮುಖ ಪಾತ್ರದಲ್ಲಿ ನಟಿಸಿರುವ 'ತೋತಾಪುರಿ' (Totapuri) ಚಿತ್ರದ ಸ್ಪೆಷಲ್ ಪೋಸ್ಟರ್‌ವೊಂದು ಬಿಡುಗಡೆಯಾಗಿದೆ. ಈ ಬಗ್ಗೆ ಧನಂಜಯ್ ತಮ್ಮ ಫೇಸ್‌ಬುಕ್‌ (FaceBook) ಖಾತೆಯಲ್ಲಿ ಚಿತ್ರದ ಪೋಸ್ಟರ್‌ನ್ನು ಹಂಚಿಕೊಂಡಿದ್ದಾರೆ. 

'ನೀರ್‌ದೋಸೆ' (Neer Dose) ಚಿತ್ರದ ಮೂಲಕ ಯಶಸ್ಸು ಕಂಡ ನಿರ್ದೇಶಕ ವಿಜಯ್​ ಪ್ರಸಾದ್ (Vijay Prasad) ಹಾಗೂ ನವರಸ ನಾಯಕ ಜಗ್ಗೇಶ್ (Jaggesh) ಅಭಿನಯದ 'ತೋತಾಪುರಿ' ಚಿತ್ರದಲ್ಲಿ ಧನಂಜಯ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಆ ಪಾತ್ರ ಇದೀಗ ರಿವೀಲ್ ಆಗಿದೆ. ಹೌದು! ಧನಂಜಯ್ 'ತೋತಾಪುರಿ' ಚಿತ್ರದಲ್ಲಿ 'ನಾರಾಯಣ್ ಪಿಳ್ಳೈ' ಆಗಿ ಕಾಣಿಸಿಕೊಳ್ಳುತ್ತಿದ್ದು, ಮೋಡ ಕವಿದ ವಾತಾವರಣದಲ್ಲೇ 'ಮೊಡವೆ' ಬರಬೇಕೇ..? ಥತ್ತೇರಿಕೆ..! ಎಂಬ ಬರಹವಿರುವ ಪೋಸ್ಟರ್‌ನ್ನು ಫೇಸ್‌ಬುಕ್ ಖಾತೆಯಲ್ಲಿ ಧನಂಜಯ್ ಶೇರ್ ಮಾಡಿಕೊಂಡಿದ್ದಾರೆ. 

Dhananjay: ರತ್ನಾಕರನ ಜೊತೆ 'ಜಮಾಲಿಗುಡ್ಡ'ಕ್ಕೆ ಬಂದ ಅದಿತಿ ಪ್ರಭುದೇವ

'ತೋತಾಪುರಿ' ಚಿತ್ರದಲ್ಲಿ ಧನಂಜಯ್ ಮೂರು ಶೇಡ್‌ಗಳಲ್ಲಿ ಕಾಣಿಸಿಕೊಳುತ್ತಿದ್ದು, ಇತ್ತೀಚೆಗಷ್ಟೇ ಚಿತ್ರದ ಡಬ್ಬಿಂಗ್‌ನ್ನು ಮುಗಿಸಿಕೊಟ್ಟಿದ್ದಾರೆ. 'ಸುರೇಶ್ ಆರ್ಟ್ಸ್‌' ಬ್ಯಾನರ್‌ನ ಕೆ.ಎ. ಸುರೇಶ್ (K.A.Sueresh) ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಜಗ್ಗೇಶ್ ನಟನೆಯ 'ಎದ್ದೇಳು ಮಂಜುನಾಥ' (Eddelu Manjunatha), 'ನೀರ್‌ ದೋಸೆ' (Neer Dose) ಸಿನಿಮಾಗಳಿಗೆ ಸಂಗೀತ ಸಂಯೋಜಿಸಿದ್ದ ಅನೂಪ್ ಸೀಳಿನ್ (Anoop Seelin) 'ತೋತಾಪುರಿ'ಗೂ ಸಂಗೀತ ನಿರ್ದೇಶನ ಮಾಡಿದ್ದು, ಹಿನ್ನೆಲೆ ಸಂಗೀತದ ಜವಾಬ್ದಾರಿಯನ್ನೂ ನಿಭಾಯಿಸಿದ್ದಾರೆ. 

ನಿರಂಜನ್ ಬಾಬು ಕ್ಯಾಮರಾ ಕೈ ಚಳಕ, ಸುರೇಶ್ ಅರಸ್ ಸಂಕಲನ ಈ ಚಿತ್ರಕ್ಕಿದ್ದು, ಅದಿತಿ ಪ್ರಭುದೇವ, ಡಾಲಿ ಧನಂಜಯ್, ಸುಮನ್ ರಂಗನಾಥ್, ದತ್ತಣ್ಣ, ವೀಣಾ ಸುಂದರ್, ಹೇಮಾದತ್ ಸೇರಿದಂತೆ ಅನೇಕರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.  ಚಿತ್ರದ ನಾಯಕಿ ಅದಿತಿ ಪ್ರಭುದೇವ (Aditi Prabhudeva) ಮುಸ್ಲಿಂ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಸುಮನ್ ರಂಗನಾಥ್ (Suman Ranganath) ಕ್ರಿಶ್ಚಿಯನ್ ಪಾತ್ರದಲ್ಲಿ ಅಭಿನಯಿಸಿದ್ದಾರೆ. ದತ್ತಣ್ಣ (Dattanna) ಅವರು ಜಗ್ಗೇಶ್ ಅವರ ಮಾವನ ಪಾತ್ರಕ್ಕೆ ಬಣ್ಣ ಹಚ್ಚಿದ್ದು, ಒಟ್ಟಾರೆಯಾಗಿ 'ನೀರ್‌ದೋಸೆ' ಚಿತ್ರತಂಡ ಈ ಚಿತ್ರದ ತಾರಾಬಳಗದಲ್ಲಿದೆ.

ತೋತಾಪುರಿ ಸಿನಿಮಾ ಪ್ಯಾನ್ ಇಂಡಿಯಾವೋ, ಅಲ್ಲವೋ? ನೆಟ್ಟಿಗರು ಕೇಳ್ತಿದ್ದಾರೆ

ಇನ್ನು ಟೈಟಲ್ (Title) ಮೂಲಕವೇ ಕುತೂಹಲ ಹುಟ್ಟಿಸಿರುವ ಈ ಚಿತ್ರ ಎರಡು ಪಾರ್ಟ್‌ಗಳಲ್ಲಿ ತೆರೆಗೆ ಬರುತ್ತಿದೆ. ಈ ಚಿತ್ರದಲ್ಲಿ ಜಗ್ಗೇಶ್ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದು, ನಾವು ನಿಮ್ಮ ಮುಂದೆ ಬರ್ತಿದ್ದೇವೆ ಎಂದು ಚಿತ್ರದ ಪೋಸ್ಟರ್‌ವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಈ ಹಿಂದೆ ಹಂಚಿಕೊಂಡಿದ್ದರು. 'ದೇವ್ರಾಣೆಗೂ ನಮ್ದು ಪ್ಯಾನ್ ಇಂಡಿಯಾ ಸಿನಿಮಾ ಅಲ್ಲ. ನಮ್ದು ಬರೀ ಸಿನಿಮಾ' ಎಂದು ಹೇಳಿರುವ 'ತೋತಾಪುರಿ' ಚಿತ್ರತಂಡ, ಕನ್ನಡ, ಹಿಂದಿ, ತಮಿಳು, ತೆಲುಗು, ಮಲಯಾಳಂ ಭಾಷೆಯಲ್ಲಿ ಟೈಟಲ್ ರಿವೀಲ್ ಮಾಡಿರುವ ಪೋಸ್ಟರನ್ನು ಚಿತ್ರದ ನಾಯಕ ಜಗ್ಗೇಶ್ ತಮ್ಮ ಇನ್‌ಸ್ಟಾಗ್ರಾಮ್‌ (Instagram) ಖಾತೆಯಲ್ಲಿ ಹಂಚಿಕೊಂಡಿದ್ದರು.
 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ಭಾರತೀಯ ಸಂಸ್ಕೃತಿಯನ್ನು ಎತ್ತಿ ಹಿಡಿಯುವ ಸಿನಿಮಾ: ‘45’ ಟ್ರೇಲರ್ ಬಿಡುಗಡೆಗೆ ಕೌಂಟ್‌ಡೌನ್
ಶಾರುಖ್ ಪುತ್ರ ಆರ್ಯನ್ ಖಾನ್ ಕನ್ನಡಿಗರ ಜೊತೆ ಅಸಭ್ಯ ವರ್ತನೆ ಮಾಡಿಲ್ಲ: ಸಚಿವ ಜಮೀರ್ ಪುತ್ರ ಹೇಳಿದ್ದೇನು?