
ನಟ ದರ್ಶನ್ ಅವರ ಮುಂದಿನ ಚಿತ್ರಕ್ಕೆ ಯಾರ ನಿರ್ದೇಶನ ಎನ್ನುವ ಕುತೂಹಲಕ್ಕೆ ತೆರೆ ಬಿದ್ದಿದೆ. ವಿ. ಹರಿಕೃಷ್ಣ ನಿರ್ದೇಶನದ, ಶೈಲಜಾ ನಾಗ್ ನಿರ್ಮಾಣದ ಚಿತ್ರವೇ ಚಾಲೆಂಜಿಂಗ್ ಸ್ಟಾರ್ ನಟನೆಯ ಮುಂದಿನ ಸಿನಿಮಾ ಎಂಬುದು ಅಧಿಕೃತವಾಗಿದೆ.
ಈ ಬಗ್ಗೆ ನಿರ್ಮಾಪಕಿ ಶೈಲಜಾ ನಾಗ್ ಅವರೇ ಟ್ವೀಟ್ ಮಾಡಿದ್ದು, ‘ಸದ್ಯದಲ್ಲೇ ಡಿ55 ಸಿನಿಮಾ ಸೆಟ್ಟೇರಲಿದೆ. ಆ ನಿಟ್ಟಿನಲ್ಲಿ ತಯಾರಿಗಳು ನಡೆಯುತ್ತಿವೆ’ ಎಂದಿದ್ದಾರೆ. ‘ಯಜಮಾನ’ ಜೋಡಿ ಮತ್ತೆ ಜತೆಯಾಗುತ್ತಿರುವುದಕ್ಕೆ ಡಿ ಬಾಸ್ ಅಭಿಮಾನಿಗಳಲ್ಲಿ ಕ್ರೇಜ್ ಹೆಚ್ಚಾಗಿದೆ.
600 ಮಂದಿ ಸಹ ಕಲಾವಿದರಿಗೆ ದಿನಸಿ ಕಿಟ್ ವಿತರಿಸಿದ ವಿಜಯ್
ಇದು ದರ್ಶನ್ ಅವರ 55ನೇ ಸಿನಿಮಾ. ಆಗಸ್‌ಟ್ ತಿಂಗಳಿಂದ ದರ್ಶನ್ ಅವರು ಸಿನಿಮಾ ಶೂಟಿಂಗ್ ಕೆಲಸಗಳಿಗೆ ಜತೆಯಾಗಲಿದ್ದಾರೆ. ಆ ನಿಟ್ಟಿನಲ್ಲಿ ಅವರೂ ಕೂಡ ತಯಾರಿ ಮಾಡಿಕೊಳ್ಳುತ್ತಿದ್ದಾರಂತೆ. ಆ ಮೂಲಕ ದರ್ಶನ್ ಅವರ ಮುಂದಿನ ಚಿತ್ರಕ್ಕೆ ತರುಣ್ ಸುಧೀರ್ ಅವರೇ ನಿರ್ದೇಶನ ಮಾಡಲಿದ್ದಾರೆಯೇ ಎನ್ನುವ ಅನುಮಾನಗಳಿಗೂ ತೆರೆ ಬಿದ್ದಿದೆ.
ಸದ್ಯಕ್ಕೆ ತರುಣ್ ಸುಧೀರ್ ಅವರು ‘ಸಿಂಧೂರ ಲಕ್ಷ್ಮಣ’ ಕತೆ ಹಾಗೂ ಚಿತ್ರಕಥೆಯಲ್ಲಿ ಬ್ಯುಸಿ ಆಗಿದ್ದಾರೆ. ಶೈಲಜಾ ನಾಗ್ ನಿರ್ಮಾಣದ ಸಿನಿಮಾ ಮುಗಿಯುತ್ತಿರುವಂತೆಯೇ ಉಮಾಪತಿ ನಿರ್ಮಾಣ, ತರುಣ್ ಸುಧೀರ್ ಅವರ ನಿರ್ದೇಶನದ ಸಿನಿಮಾ ಸೆಟ್ಟೇರಲಿದೆ. ಈ ಚಿತ್ರದ ನಂತರ ಮಿಲನ ಪ್ರಕಾಶ್ ನಿರ್ದೇಶನದ ಚಿತ್ರಕ್ಕೆ ದರ್ಶನ್ ಅವರು ಜತೆಯಾಗಲಿದ್ದಾರೆ.
ಎರಡು ಕಮರ್ಷಿಯಲ್ ಹಾಗೂ ಒಂದು ಐತಿಹಾಸಿಕ ಚಿತ್ರದ ನಂತರ ಮತ್ತೆ ಕಮರ್ಷಿಯಲ್ ಚಿತ್ರಕ್ಕೆ ಮರಳಲಿದ್ದು, ಈ ಚಿತ್ರಕ್ಕೆ ಉಮಾಪತಿ ಅವರಿಗೇ ಕಾಲ್‌ಶೀಟ್ ಕೊಟ್ಟಿದ್ದಾರೆ ಚಾಲೆಂಜಿಂಗ್ ಸ್ಟಾರ್. ಈ ಚಿತ್ರಗಳ ನಡುವೆ ರಾಕ್‌ಲೈನ್ ವೆಂಕಟೇಶ್ ನಿರ್ಮಾಣದ ಚಿತ್ರಗಳು ಯಾವಾಗ ಟೇಕಪ್ ಆಗುತ್ತವೆ ಎಂಬುದು ಮುಂದಿನ ದಿನಗಳಲ್ಲಿ ಗೊತ್ತಾಗಬೇಕಿ
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.