
ಸ್ಯಾಂಡವುಲ್‌ನಲ್ಲಿ 2020ರಲ್ಲಿ 'ದಿಯಾ' ಎನ್ನುವ ಸಿನಿಮಾ ಬಂದಿತ್ತು. ಈ ಚಿತ್ರದ ನಾಯಕ ಪೃಥ್ವಿ ಅಂಬಾರ್ ಅದ್ಭುತವಾಗಿಯೇ ಅಭಿನಯಿಸಿದ್ದರು. ಇದೀಗ ಅಂತಹದ್ದೇ ಪ್ರೇಮಕಥೆಯನ್ನು ಹೊತ್ತುಬಂದಿರುವ ಜೂನಿ (Juni)ಕ್ಯಾರೆಕ್ಟರ್ ಟೀಸರ್ ಅನಾವರಣಗೊಂಡಿದೆ. ಈ ಜೂನಿ ಕ್ಯಾರೆಕ್ಟರ್ ಟೀಸರ್ (Juni Character Teaser)ನೋಡಿದರೆ ಹೆಚ್ಚುಕಡಿಮೆ ದಿಯಾ ಸಿನಿಮಾ ಫ್ಲೇವರ್ ಕೊಡುತ್ತಿದೆ. ಚೇಫ್ ಅವತಾರದಲ್ಲಿ ನಟ ಪೃಥ್ವಿ ಅಂಬಾರ್ (Pruthvi Ambaar)ಕಾಣಿಸಿಕೊಂಡಿದ್ದಾರೆ.
ಟೀಸರ್ ಸಖತ್ ಇಂಪ್ರೆಸಿವ್ ಆಗಿದೆ ಎನ್ನಲಾಗುತ್ತಿದೆ. 'ಜನ್ನಿ' ಎಂಬ ಕಿರುಚಿತ್ರ ನಿರ್ದೇಶಿಸಿದ್ದ ವೈಭವ್ ಮಹಾದೇವ್ (Vaibhav Mahadev)'ಜೂನಿ' ಸಿನಿಮಾ ಮೂಲಕ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಡುತ್ತಿದ್ದಾರೆ. ಪ್ರಾಗ್ ಫಿಲ್ಮ್ ಸ್ಕೂಲ್ ನಲ್ಲಿ ನಿರ್ದೇಶಕರ ಕೋರ್ಸ್ ಮುಗಿಸಿರುವ ಅವರೀಗ ಈ ಚಿತ್ರಕ್ಕೆ ಕಥೆ ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ವಿಭಿನ್ನ ಟೈಟಲ್ ಜೂನಿ ಸಿನಿಮಾದಲ್ಲಿ ನಾಯಕಿಯಾಗಿ ರಿಷಿಕಾ ನಾಯ್ಕ್ (Rishika Naik) ನಟಿಸಿದ್ದಾರೆ.
ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ; ಕನ್ನಡ ಹನುಮಾನ ಚಾಲೀಸ ಉಡುಗೊರೆ!
‘ಜೂನಿ’ ರೋಮ್ಯಾಂಟಿಕ್ ಕಥಾಹಂದರ ಹೊಂದಿರುವ ಸಿನಿಮಾ. ದಿಯಾ ಬಳಿಕ ಪೃಥ್ವಿ ಮತ್ತೊಮ್ಮೆ ರೊಮ್ಯಾಂಟಿಕ್ ಪ್ರೇಮಕಥೆಗೆ ಬಣ್ಣ ಹಚ್ಚಿದ್ದಾರೆ. ಯಾರ ಮೇಲೆ ಪ್ರೀತಿ ಹುಟ್ಟುತ್ತೋ ಅವರ ಮೇಲೆ ಪ್ರೀತಿ ಆಗುತ್ತಾ? ಎಂಬ ಕಥೆಯ ಎಳೆ ಇಟ್ಕೊಂಡು ಚಿತ್ರ ಹೆಣೆಯಲಾಗಿದೆ. ತ್ರಿಶೂಲ ಕ್ರಿಯೇಷನ್ ನಡಿ ಮೋಹನ್ ಕುಮಾರ್ ಎಸ್ ಹಣ ಹಾಕಿದ್ದು, ಶ್ರೇಯಸ್ ವೈ ಎಸ್ ಸಹ ನಿರ್ಮಾಪಕರಾಗಿ ಜವಾಬ್ದಾರಿ ಹೊತ್ತಿದ್ದಾರೆ.
ಎಸ್ ನಾರಾಯಣ್-ಆದಿತ್ಯ ಜುಗಲ್ಬಂದಿ ಟೀಸರ್ ಔಟ್; ಲೇಟ್ ಆದ್ರೂ ಲೇಟೆಸ್ಟ್ ಅಂತಿದೆ ಟೀಮ್!
ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ಮುಗಿಸಿರುವ ‘ಜೂನಿ’ ಫೆಬ್ರವರಿ 9ಕ್ಕೆ ತೆರೆಗೆ ಬರ್ತಿದೆ. ನಕುಲ್ ಅಭ್ಯಂಕರ್ ಸಂಗೀತ ನಿರ್ದೇಶನ ಮಾಡಿದ್ದಾರೆ. ಶಶಾಂಕ್ ನಾರಾಯಣ ಅವರು ಸಂಕಲನದ ಜವಾಬ್ದಾರಿ ನಿಭಾಯಿಸಿದ್ದಾರೆ. ಅಜಿನ್ ಬಿ, ಜಿತಿನ್ ದಾಸ್ ಛಾಯಾಗ್ರಹಣ ಮಾಡಿದ್ದಾರೆ. ನವೀನ್ ಅವರ ಕಲಾ ನಿರ್ದೇಶನ ಈ ಸಿನಿಮಾಗಿದೆ. ಸದ್ಯ ಟೀಸರ್ ಬಿಡುಗಡೆ ಮಾಡಿರುವ ಜೂನಿ ಚಿತ್ರತಂಡ, ಜನರ ಪ್ರತಿಕ್ರಿಯೆ ಹೇಗಿದೆ ಎಂಬುದನ್ನು ನೋಡಲು ಉತ್ಸುಕವಾಗಿದೆ.
'ಮುತ್ತಣ್ಣ'ನ ಮಗನಾಗಲು ಹೊರಟೇಬಿಟ್ರು ಪ್ರಣಮ್; ಹರಸಿ ಕಳುಹಿಸಿದ ಕರುನಾಡ ಡೈನಾಮಿಕ್ ಸ್ಟಾರ್
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.