ಹೊಂಬಾಳೆ ಫಿಲಂಸ್‌ 'ಯುವ' ಚಿತ್ರದ 'ಅಪ್ಪುಗೆ' ಹಾಡು ಲಾಂಚ್ ಮಾಡಿದ ಪುನೀತ್ ಪುತ್ರಿ ವಂದಿತಾ

Published : Mar 17, 2024, 07:59 PM ISTUpdated : Mar 18, 2024, 05:15 PM IST
ಹೊಂಬಾಳೆ ಫಿಲಂಸ್‌ 'ಯುವ' ಚಿತ್ರದ 'ಅಪ್ಪುಗೆ' ಹಾಡು ಲಾಂಚ್ ಮಾಡಿದ ಪುನೀತ್ ಪುತ್ರಿ ವಂದಿತಾ

ಸಾರಾಂಶ

ಹಾಡು ಬಿಡುಗಡೆ ಮಾಡಿಕೊಟ್ಟ ವಂದಿತ ಅವರಿಗೆ ಧನ್ಯವಾದ. ಇನ್ನು, ಮಾರ್ಚ್ 21 ರಂದು 'ಯುವ' ಚಿತ್ರದ ಟ್ರೇಲರ್ ಬಿಡುಗಡೆಯಾಗಲಿದೆ. ಮಾರ್ಚ್ 23 ರಂದು ಹೊಸಪೇಟೆಯಲ್ಲಿ ಪ್ರೀ ರಿಲೀಸ್ ಇವೆಂಟ್ ನಡೆಯಲಿದೆ. ಚಿತ್ರ ಮಾರ್ಚ್ 29ಕ್ಕೆ ತೆರೆಗೆ ಬರಲಿದೆ..

ಹೊಂಬಾಳೆ ಫಿಲಂಸ್ ಲಾಂಛನಲ್ಲಿ ವಿಜಯ್ ಕಿರಗಂದೂರ್ ಅವರು ನಿರ್ಮಿಸಿರುವ, ಸಂತೋಷ್ ಆನಂದರಾಮ್ ನಿರ್ದೇಶನದ ಹಾಗೂ ಯುವ ರಾಜಕುಮಾರ್ ನಾಯಕನಾಗಿ ನಟಿಸಿರುವ "ಯುವ" ಚಿತ್ರದ "ಅಪ್ಪುಗೆ" ಹಾಡು ಇತ್ತೀಚಿಗೆ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಪುನೀತ್ ರಾಜಕುಮಾರ್ ಅವರ ದ್ವಿತೀಯ ಪುತ್ರಿ ವಂದಿತ ಈ ಹಾಡನ್ನು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.      

'ಯವ' ಕೌಟುಂಬಿಕ ಹಾಗೂ ಆಕ್ಷನ್ ಕಥಾಹಂದರ ಹೊಂದಿರುವ ಸಿನಿಮಾ. ತಂದೆ - ಮಗನ ಬಾಂಧವ್ಯದ ಚಿತ್ರವೂ ಹೌದು. ಒಂದು ಕುಟುಂಬಕ್ಕಾಗಿ ಅಪ್ಪ ಏನೆಲ್ಲಾ ಮಾಡುತ್ತಾನೆ. ಆದರೆ ಆತ ಯಾರಿಂದಲೂ ಏನನ್ನು ನಿರೀಕ್ಷಿಸುವುದಿಲ್ಲ. ಕುಟುಂಬದಲ್ಲಿ ಅಪ್ಪನ ಪಾತ್ರ ಬಹಳ ದೊಡ್ಡದು. ಅಂತಹ ಅಪ್ಪನ ಗುಣಗಳನ್ನು ವರ್ಣಿಸುವ ನಮ್ಮ ಚಿತ್ರದ 'ಅಪ್ಪುಗೆ' ಹಾಡು ಬಿಡುಗಡೆಯಾಗಿದೆ. ಈ ಹಾಡನ್ನು ನಾನೇ ಬರೆದಿದ್ದೇನೆ. ವಿಜಯ್ ಪ್ರಕಾಶ್ ಹಾಡಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ. ಅಪ್ಪನ ಕುರಿತಾದ ಹಾಡಾಗಿರುವುದರಿಂದ ಈ ಹಾಡನ್ನು ವಂದಿತ ಅವರಿಂದ ಬಿಡುಗಡೆ ಮಾಡಿಸೋಣ ಅಂದುಕೊಂಡೆವು‌. 

ಸಲಾರ್ ಪ್ರಮೋದ್‌-ಪೃಥ್ವಿ ಅಂಬಾರ್ 'ಭುವನಂ ಗಗನಂ' ಟೀಸರ್ ಲಾಂಚ್, ಆಕ್ಷನ್ ಪ್ರಿನ್ಸ್ ಸಾಥ್!

ಹಾಡು ಬಿಡುಗಡೆ ಮಾಡಿಕೊಟ್ಟ ವಂದಿತ ಅವರಿಗೆ ಧನ್ಯವಾದ. ಇನ್ನು, ಮಾರ್ಚ್ 21 ರಂದು 'ಯುವ' ಚಿತ್ರದ ಟ್ರೇಲರ್ ಬಿಡುಗಡೆಯಾಗಲಿದೆ. ಮಾರ್ಚ್ 23 ರಂದು ಹೊಸಪೇಟೆಯಲ್ಲಿ ಪ್ರೀ ರಿಲೀಸ್ ಇವೆಂಟ್ ನಡೆಯಲಿದೆ. ಚಿತ್ರ ಮಾರ್ಚ್ 29ಕ್ಕೆ ತೆರೆಗೆ ಬರಲಿದೆ' ಎಂದು ನಿರ್ದೇಶಕ ಸಂತೋಷ್ ಆನಂದರಾಮ್ ತಿಳಿಸಿದರು. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಎರಡು ಹಾಡುಗಳು ಎಲ್ಲರ ಮೆಚ್ಚುಗೆ ಪಡೆದುಕೊಂಡಿದೆ. "ಅಪ್ಪುಗೆ" ಮೂರನೇ ಹಾಡಾಗಿ ಬಿಡುಗಡೆಯಾಗಿದೆ. ಅಪ್ಪ - ಮಗನ ಸಂಬಂಧದ ಈ ಹಾಡು ತುಂಬಾ ಚೆನ್ನಾಗಿದೆ. ಈ ಹಾಡು ಕೇಳಿದಾಗಲ್ಲೆಲ್ಲಾ ನನಗೆ ನಮ್ಮ ತಂದೆ ನೆನಪಾಗುತ್ತಾರೆ ಎಂದು ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಭಾವುಕರಾದರು.  

ಕನ್ನಡ ಚಿತ್ರರಂಗದ 'ಮರ್ಯಾದೆ ಪ್ರಶ್ನೆ' ಬಗ್ಗೆ ಯಾರೂ ಮಾತಾಡಿರ್ಲಿಲ್ಲ; ಎಂಥ ಉತ್ತರ ಸಿಕ್ತು ನೋಡಿ!

'ಈ ಚಿತ್ರದ ಕಥೆಗೂ ಹಾಗೂ ನನ್ನ ಜೀವನದ ಕಥೆಗೂ ಸುಮಾರು ವಿಷಯಗಳು ಹೋಲುತ್ತದೆ ಎಂದು ಮಾತು ಆರಂಭಿಸಿದ ನಾಯಕ ಯುವ ರಾಜಕುಮಾರ್, ತಂದೆ - ಮಗನ ಸಂಬಂಧ ಬೇರೆ ರೀತಿಯದೆ ಸಂಬಂಧ. ತಂದೆಯ ಜವಾಬ್ದಾರಿ ನಮಗೆ ಅರ್ಥವಾಗುವುದೇ ಇಲ್ಲ.  ನಾವು ದುಡಿಯುವುದಕ್ಕೆ ಶುರು ಮಾಡಿದಾಗ ನಮಗೆ ತಂದೆಯ ಜವಾಬ್ದಾರಿ ತಿಳಿಯುತ್ತಾ ಹೋಗುತ್ತದೆ. ಈ ಚಿತ್ರದಲ್ಲಿ ಅಚ್ಯುತಕುಮಾರ್ ಅವರು ನನ್ನ ತಂದೆ ಪಾತ್ರ ಮಾಡಿದ್ದಾರೆ‌. ಅವರೊಂದಿಗೆ ಕೆಲವು ಸನ್ನಿವೇಶಗಳಲ್ಲಿ ನಟಿಸಬೇಕಾದರೆ ನನಗೆ ನಮ್ಮ ಅಪ್ಪ ಕಣ್ಣ ಮುಂದೆ ಬರುತ್ತಿದ್ದರು. ಅಂತಹ ಅಪ್ಪ - ಮಗನ ನಡುವಿನ ಸಂಬಂಧವನ್ನು ಬಣ್ಣಿಸುವ ಈ 'ಅಪ್ಪುಗೆ' ಹಾಡು ಎಲ್ಲರ ಮನಸ್ಸಿಗೂ ಹತ್ತಿರವಾಗುತ್ತದೆ' ಎಂದರು.

ಸ್ಟಾರ್ ನಟಿ ಸಿನಿಮಾ ನಟನೆಗೂ ಮೊದಲು ಯಾಕೆ ನೆಲದ ಮೇಲಿನ ವಾಂತಿ ಒರೆಸಿದ್ದರು, ಕಸ ಗುಡಿಸಿದ್ದರು?

'ಯುವ' ಚಿತ್ರದ ಆಡಿಯೋ ಹಕ್ಕನ್ನು ನಮ್ಮ ಆನಂದ್ ಆಡಿಯೋ ಸಂಸ್ಥೆಗೆ ನೀಡಿರುವುದಕ್ಕೆ ಹೊಂಬಾಳೆ ಫಿಲಂಸ್ ಸಂಸ್ಥೆಗೆ ಧನ್ಯವಾದ ತಿಳಿಸುತ್ತೇನೆ. ನಮ್ಮ ಸಂಸ್ಥೆ ಆರಂಭವಾಗಿ 25 ವರ್ಷಗಳಾಗುತ್ತಿದೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ಆನಂದ್ ಆಡಿಯೋ ಶ್ಯಾಮ್. ಛಾಯಾಗ್ರಾಹಕ ಶ್ರೀಶ ಕುದುವಳ್ಳಿ, ಸಂಕಲನಕಾರ ಆಶಿಕ್ ಕುಸುಗೊಳ್ಳಿ ಹಾಗೂ ಕಾರ್ಯಕಾರಿ ನಿರ್ಮಾಪಕ ಯೋಗಿ ಜಿ ರಾಜ್ ಸೇರಿದಂತೆ ಚಿತ್ರತಂಡದ ಅನೇಕ ಸದಸ್ಯರು ಹಾಡು ಬಿಡುಗಡೆ ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಬಾಹುಬಲಿ ಸಿನಿಮಾದ ಮಹಾ ಸೀಕ್ರೆಟ್ ಹೇಳಿಬಿಟ್ರು ರಾಣಾ ದಗ್ಗುಬಾಟಿ; ರಾಜಮೌಳಿ ಸುಮ್ಮನಿರ್ತಾರಾ?

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

700 ಅಭಿಮಾನಿಗಳಿಗೆ ಯಶ್ ಯಾಕೆ ಪ್ರತ್ಯೇಕ ಸೆಲ್ಫಿ ಕೊಟ್ಟರು? ಕಾರಣ ಕೇಳಿದ್ರೆ ಮನಸ್ಸು ಕರಗುತ್ತೆ!
ಜ್ಯೇಷ್ಠವರ್ಧನ್ ಗ್ರಾಂಡ್ ಎಂಟ್ರಿ.. ವಿಷ್ಣುವರ್ಧನ್ ಮೊಮ್ಮಗ, ಅನಿರುದ್ದ್ ಮಗನ ಸಿನಿಮಾ ಶೀಘ್ರದಲ್ಲೇ ಶುರು!