ಆಷಾಢ ಶುಕ್ರವಾರ ಚಾಮುಂಡಿ ಬೆಟ್ಟಕ್ಕೆ ವಿಜಯಲಕ್ಷ್ಮಿ ದರ್ಶನ್ ಭೇಟಿ: ವಿಶೇಷ ಪೂಜೆ ಸಲ್ಲಿಕೆ

Published : Jul 17, 2026, 05:37 PM IST
Vijayalakshmi Darshan

ಸಾರಾಂಶ

ಆಷಾಢ ಮಾಸದ ಮೊದಲ ಶುಕ್ರವಾರದ ಅಂಗವಾಗಿ ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ದರ್ಶನ್ ಅವರು ಶುಕ್ರವಾರ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ನಾಡದೇವಿ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದರು.

ಮೈಸೂರು (ಜು.17): ಆಷಾಢ ಮಾಸದ ಮೊದಲ ಶುಕ್ರವಾರದ ಅಂಗವಾಗಿ ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ದರ್ಶನ್ ಅವರು ಶುಕ್ರವಾರ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ನಾಡದೇವಿ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದರು. ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಕುಟುಂಬದ ಕ್ಷೇಮಕ್ಕಾಗಿ ಪ್ರಾರ್ಥನೆ ಸಲ್ಲಿಸಿದರು. ಈ ವೇಳೆ ದರ್ಶನ್ ಅವರ ಅಕ್ಕನ ಮಗ ಚಂದನ್ ಸಹ ಜೊತೆಯಲ್ಲಿದ್ದರು.

ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗಿನಿಂದಲೇ ಭಕ್ತರ ದಟ್ಟಣೆ ಕಂಡುಬಂದಿತು. ದೇವಸ್ಥಾನವನ್ನು ನಾನಾ ಬಗೆಯ ಹೂಗಳಿಂದ ಅಲಂಕರಿಸಲಾಗಿದ್ದು, ವಿಶೇಷ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವು. ನಾಗಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸಿದ ತಾಯಿ ಚಾಮುಂಡೇಶ್ವರಿಯ ದರ್ಶನಕ್ಕಾಗಿ ರಾಜ್ಯದ ವಿವಿಧ ಭಾಗಗಳಿಂದ ಸಾವಿರಾರು ಭಕ್ತರು ಆಗಮಿಸಿದ್ದರು.

ಇದೇ ಸಂದರ್ಭದಲ್ಲಿ ವಿಜಯಲಕ್ಷ್ಮಿ ದರ್ಶನ್ ಅವರ ದೇವಸ್ಥಾನ ಭೇಟಿ ಗಮನ ಸೆಳೆದಿದೆ. ಅವರು ದೇವಿಯ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿ, ದೇವರ ಆಶೀರ್ವಾದ ಪಡೆದರು. ಇನ್ನು, ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ನಟ ದರ್ಶನ್ ಕಾನೂನು ಹೋರಾಟ ಎದುರಿಸುತ್ತಿದ್ದಾರೆ. ಈ ಪ್ರಕರಣದ ಬೆಳವಣಿಗೆಗಳ ನಡುವೆಯೇ ವಿಜಯಲಕ್ಷ್ಮಿ ದರ್ಶನ್ ಅವರ ಚಾಮುಂಡಿ ಬೆಟ್ಟ ಭೇಟಿ ಸಾರ್ವಜನಿಕರ ಗಮನ ಸೆಳೆದಿದೆ.

ಚಾಮುಂಡಿ ಬೆಟ್ಟದಲ್ಲಿ ಭಕ್ತಿ ಸಂಭ್ರಮ

ಇನ್ನು ಆಷಾಢದ ಮೊದಲ ಶುಕ್ರವಾರಕ್ಕೆ ಸಾಂಸ್ಕೃತಿಕ ನಗರಿ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಭಕ್ತಿ ಸಂಭ್ರಮ ಮನೆಮಾಡಿತ್ತು. ಮುಂಜಾನೆಯಿಂದಲೇ ನಾಡ ದೇವತೆ ಚಾಮುಂಡೇಶ್ವರಿ ದೇವಿ ದರ್ಶನಕ್ಕೆ ಭಕ್ತಸಾಗರವೇ ಹರಿದುಬಂದಿತ್ತು. ರಾಜಕಾರಣಿಗಳು, ಗಣ್ಯರು, ಸೆಲೆಬ್ರಿಟಿಗಳು ತಾಯಿಯ ಸನ್ನಿಧಿಗೆ ಬಂದು ವಿಶೇಷ ಪೂಜೆ ಸಲ್ಲಿಸಿದರು.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ಕನ್ನಡ ಚಿತ್ರರಂಗಕ್ಕೆ ಮತ್ತೊಂದು ದುಃಖದ ಸುದ್ದಿ: ಹಿರಿಯ ನಟಿ ಶೈಲಜಾ ಶ್ರೀಶೈಲನ್ ಇನ್ನಿಲ್ಲ!
ಅಕ್ಕ ಸಮ್ಮೇಳನ 2026ರಲ್ಲಿ ‘ಸಿನಿಗನ್ನಡ ಚಲನಚಿತ್ರೋತ್ಸವ’: ಅತ್ಯುತ್ತಮ ಕನ್ನಡ ಚಿತ್ರಕ್ಕೆ ₹1 ಲಕ್ಷ ಬಹುಮಾನ