ವಿಕ್ರಾಂತ್ ರೋಣ; ಕಿಚ್ಚನ ಸಿನಿಮಾ ಮೊದಲ ದಿನ ಗಳಿಸಿದ್ದೆಷ್ಟು? ಸಂಪೂರ್ಣ ಕಲೆಕ್ಷನ್ ಮಾಹಿತಿ

Published : Jul 29, 2022, 10:31 AM ISTUpdated : Jul 29, 2022, 10:38 AM IST
ವಿಕ್ರಾಂತ್ ರೋಣ; ಕಿಚ್ಚನ ಸಿನಿಮಾ ಮೊದಲ ದಿನ ಗಳಿಸಿದ್ದೆಷ್ಟು? ಸಂಪೂರ್ಣ ಕಲೆಕ್ಷನ್ ಮಾಹಿತಿ

ಸಾರಾಂಶ

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಟನೆಯ ವಿಕ್ರಾಂತ್ ರೋಣ ವಿಶ್ವದಾದ್ಯಂತ ರಿಲೀಸ್ ಆಗಿದ್ದು ಹೌಸ ಫುಲ್ ಪ್ರದರ್ಶನ ಕಾಣುತ್ತಿದೆ. ಜುಲೈ 28ರಂದು ಅದ್ದೂರಿಯಾಗಿ ತೆರೆಗೆ ಬಂದ ಸಿನಿಮಾಗೆ ಪ್ರೇಕ್ಷಕರು ಫಿದಾ ಆಗಿದ್ದಾರೆ. ಬಾಕ್ಸ್ ಆಫೀಸ್ ನಲ್ಲೂ ಭರ್ಜರಿ ಕಲೆಕ್ಷನ್ ಮಾಡಿದೆ. ವಿಕ್ರಾಂತ್ ರೋಣ ಕರ್ನಾಟಕದಲ್ಲಿ ಹೊಸ ದಾಖಲೆಯ ಕಲೆಕ್ಷನ್ ಮಾಡಿದೆ. 

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಟನೆಯ ವಿಕ್ರಾಂತ್ ರೋಣ ವಿಶ್ವದಾದ್ಯಂತ ರಿಲೀಸ್ ಆಗಿದ್ದು ಹೌಸ ಫುಲ್ ಪ್ರದರ್ಶನ ಕಾಣುತ್ತಿದೆ. ಜುಲೈ 28ರಂದು ಅದ್ದೂರಿಯಾಗಿ ತೆರೆಗೆ ಬಂದ ಸಿನಿಮಾಗೆ ಪ್ರೇಕ್ಷಕರು ಫಿದಾ ಆಗಿದ್ದಾರೆ. ಬಾಕ್ಸ್ ಆಫೀಸ್ ನಲ್ಲೂ ಭರ್ಜರಿ ಕಲೆಕ್ಷನ್ ಮಾಡಿದೆ. ವಿಕ್ರಾಂತ್ ರೋಣ ಕರ್ನಾಟಕದಲ್ಲಿ ಹೊಸ ದಾಖಲೆಯ ಕಲೆಕ್ಷನ್ ಮಾಡಿದೆ. 

ಕರ್ನಾಟಕದ ಕಲೆಕ್ಷನ್ ವರದಿ

ಕರ್ನಾಟಕದಲ್ಲಿ ವಿಕ್ರಾಂತ್ ರೋಣ ಸಿನಿಮಾ 325 ಸಿಂಗಲ್ ಸ್ಕ್ರೀನ್ ಹಾಗೂ 65 ಮಲ್ಟಿಫ್ಲೆಕ್ಸ್ ಸೇರಿದಂತೆ ಒಟ್ಟು 2500 ಪ್ರದರ್ಶನಗಳನ್ನು ಕಂಡಿದೆ.
ಬೆಂಗಳೂರಿನಲ್ಲೆ ಸುಮಾರು 1200 ಶೋ ಆಗಿದೆ. ಬಹುತೇಕ ಚಿತ್ರಮಂದಿರಗಳು ಹೌಸ್ ಫುಲ್ ಆಗಿತ್ತು. ಈ ಲೆಕ್ಕಚಾರದ ಆಧಾರದ ಮೇಲೆ ಕರ್ನಾಟಕದಲ್ಲಿ ವಿಕ್ರಾಂತ್ ರೋಣ ಬರೋಬ್ಬರಿ 18 ರಿಂದ 21 ಕೋಟಿ ಕಲೆಕ್ಷನ್ ಮಾಡಿದೆ ಎಂದು ಸಿನಿ ಪಂಡಿತರು ಲೆಕ್ಕಾಚಾರವಾಗಿದೆ. 

ಹೊರ ರಾಜ್ಯದಲ್ಲಿ ವಿಕ್ರಾಂತ್ ರೋಣ ಗಳಿಕೆ

ಇನ್ನು ಬೇರೆ ಬೇರೆ ರಾಜ್ಯಗಳಲ್ಲಿಯೂ ವಿಕ್ರಾಂತ್ ರೋಣ ಉತ್ತಮ ಗಳಿಕೆ ಮಾಡಿರುವ ವರದಿಯಾಗಿದೆ.  ಉತ್ತರ ಭಾರತದಲ್ಲಿ ಒಟ್ಟು 690 ಸ್ಕ್ರೀನ್‌ ಗಳಲ್ಲಿ ವಿಕ್ರಾಂತ್ ರೋಣ ಅಬ್ಬರಿಸಿದೆ. ಸುಮಾರು 2500ಕ್ಕೂ ಹೆಚ್ಚು ಪ್ರದರ್ಶನ ಕಂಡಿದೆ. ಬಾಲಿವುಡ್‌ನಲ್ಲಿ ಕಿಚ್ಚನ ಸಿನಿಮಾ ಬರೋಬ್ಬರಿ 8 ರಿಂದ 10 ಕೋಟಿ ಕಲೆಕ್ಷನ್ ಮಾಡಿದೆ ಎಂದು ಅಂದಾಜಿಸಲಾಗಿದೆ. ಆಂಧ್ರ ಪ್ರದೇಶ ಮತ್ತು ತೆಲಂಗಾಣದಲ್ಲಿ 350 ಸ್ಕ್ರೀನ್ ಗಳಲ್ಲಿ ವಿಕ್ರಾಂತ್ ರೋಣ ಸಿನಿಮಾ ರಿಲೀಸ್ ಆಗಿದ್ದು 7 ರಿಂದ 8 ಕೋಟಿ ವಹಿವಾಟು ಮಾಡಿದೆ ಎನ್ನಲಾಗಿದೆ. ತಮಿಳು ನಾಡಿನಲ್ಲಿ 180 ಸ್ಕ್ರೀನ್ಸ್ ಗಳಲ್ಲಿ ತೆರೆಕಂಡ ಕಿಚ್ಚನ ಸಿನಿಮಾ 1 ರಿಂದ 2  ಕೋಟಿ ಕಲೆಕ್ಷನ್ ಮಾಡಲಾಗಿದೆ ಎನ್ನಲಾಗುತ್ತಿದೆ.

ಕಲೆಕ್ಷನ್ ವಿಚಾರದಲ್ಲಿ ಕೇರಳದಲ್ಲೂ ಭರ್ಜರಿ ಕಮಾಯಿ ಮಾಡಿದೆ ಎನ್ನಲಾಗಿದೆ. 110 ಸ್ಕ್ರೀನ್ ಗಳಲ್ಲಿ‌ ಪ್ರದರ್ಶನ ಕಂಡಿರುವ ವಿಕ್ರಾಂತ್ ರೋಣ ಉತ್ತಮ ಓಪನಿಂಗ್ ಪಡೆದು ಕೊಂಡಿದೆ.

Vikranth Rona: ಸಿನಿಮಾ ನೋಡಲು ಬಂದವರು ಸಿನಿಮಾ ಸ್ಟೈಲಲ್ಲಿ ಹೊಡೆದಾಡಿ ಆಸ್ಪತ್ರೆ ಸೇರಿದ್ರು..!

ಭಾರತದಲ್ಲಿ ಒಟ್ಟು ಕಲೆಕ್ಷನ್ 

ಓವರ್ ಸೀಸ್ ಕಲೆಕ್ಷನ್ ಕೂಡ ಉತ್ತಮವಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.  ವಿದೇಶಗಳಲ್ಲೂ ತೆರೆ ಕಂಡಿರುವ ವಿಕ್ರಾಂತ್ ರೋಣ ಸಿನಿಮಾ ಉತ್ತಮ  ಕಲೆಕ್ಷನ್ ಮಾಡಿದೆ. ಭಾರತದಲ್ಲಿ ವಿಕ್ರಾಂತ್ ರೋಣ ಒಟ್ಟು 35 ಕೋಟಿ ರೂಪಾಯಿಗೂ ಅಧಿಕ ಹಣ ಗಳಿಸಿರುವ ಸಾಧ್ಯತೆ ಇದೆ. ಕಲೆಕ್ಷನ್ ವಿಚಾರವಾಗಿ ಸಿನಿಮಾತಂಡದ ಕಡೆಯಿಂದ ಇನ್ನು ಅಧಿಕೃತ ಮಾಹಿತಿ ಬಹಿರಂಗವಾಗಿಲ್ಲ. ಆದರೆ ಮೊದಲ ದಿನ ಭರ್ಜರಿ ಓಪನಿಂಗ್ ಪಡೆದು ಹೌಸ್ ಫುಲ್ ಪ್ರದರ್ಶನ ಕಾಣಉತ್ತಿರುವ ವಿಕ್ರಾಂತ್ ರೋಣ ಕೋಟಿ ಕೋಟಿ ಬಾಚಿಕೊಂಡಿರುವುದರಲ್ಲಿ ಯಾವುದೇ ಅನುಮಾನವಿಲ್ಲ. 

ವಿಕ್ರಾಂತ್ ರೋಣ ಚಿತ್ರದಲ್ಲಿ ಸುದೀಪ್ ಬಾಡಿಗಾರ್ಡ್‌ ನಟನೆ; ಏನಂದ್ರು ಬಾಸ್‌?

ವಿಕ್ರಾಂತ್ ರೋಣ ಸಿನಿಮಾ ಬಗ್ಗೆ

ಅನೂಪ್ ಭಂಡಾರಿ ಸಾರಥ್ಯದಲ್ಲಿ ಮೂಡಿಬಂದಿರುವ ವಿಕ್ರಾಂತ್ ರೋಣ 3ಡಿಯಲ್ಲಿ ರಿಲೀಸ್ ಆಗಿದೆ. ಪ್ಯಾನ್ ಸಿನಿಮಾದಲ್ಲಿ ನಿರೂಪ್ ಭಂಡಾರಿ, ನೀತಾ ಅಶೋಕ್ ಸೇರಿದಂತೆ ಅನೇಕ ಕಲಾವಿದರು ಬಣ್ಣ ಹಚ್ಚಿದ್ದಾರೆ. ಇನ್ನು ವಿಶೇಷ ಎಂದರೆ ಈ ಸಿನಿಮಾದಲ್ಲಿ ಬಾಲಿವುಡ್ ಸ್ಟಾರ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ನಟಿಸಿದ್ದಾರೆ. ಚಿತ್ರಕ್ಕೆ ಜಾಕ್ ಮಂಜು ಬಂಡವಾಳ ಹೂಡಿಸಿದ್ದಾರೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ಆರ್ಯನ್ ಖಾನ್‌ಗೆ ಝೈದ್ ಖಾನ್ ಸಪೋರ್ಟ್; ಆದ್ರೂ ಪಬ್ಲಿಕ್‌ ಪ್ಲೇಸ್‌ನಲ್ಲಿ 'ಮಿಡ್ಲ್ ಫಿಂಗರ್' ಎತ್ತಿದ್ದು ತಪ್ಪು ಅಂತಿರೋ ನೆಟ್ಟಿಗರು!
ರಿಷಬ್ ಶೆಟ್ಟಿ ದೈವದ ಮುಂದೆ ಅತ್ಬಿಟ್ರಾ? ಅಳಬೇಡ ಅಂತ ಸಂತೈಸಿದ್ದೇಕೆ ಪಂಜುರ್ಲಿ ದೈವ?