ವಿಕ್ರಾಂತ್ ರೋಣ ನಿರ್ಮಾಪಕ, ಸುದೀಪ್ ಆಪ್ತ ಜಾಕ್ ಮಂಜು ಆಸ್ಪತ್ರೆಗೆ ದಾಖಲು

Published : Jun 14, 2022, 10:13 AM ISTUpdated : Jun 14, 2022, 10:39 AM IST
ವಿಕ್ರಾಂತ್ ರೋಣ ನಿರ್ಮಾಪಕ, ಸುದೀಪ್ ಆಪ್ತ ಜಾಕ್ ಮಂಜು ಆಸ್ಪತ್ರೆಗೆ ದಾಖಲು

ಸಾರಾಂಶ

ಸ್ಯಾಂಡಲ್ ವುಡ್‌ನ ಖ್ಯಾತ ನಿರ್ಮಾಪಕ, ಕಿಚ್ಚ ಸುದೀಪ್ ಆಪ್ತ ಜಾಕ್ ಮಂಜು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಾರ್ಯಕ್ರಮವೊಂದಕ್ಕೆ ಹೋಗಿದ್ದ ನಿರ್ಮಾಪಕ ಜಾಕ್ ಮಂಜು ಎಡವಿ ಬಿದ್ದು ಕಾಲು ಮುರಿದುಕೊಂಡ ಹಿನ್ನಲೇ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬನ್ನೇರುಘಟ್ಟ ಬಳಿ ಇರೋ ಅಪೋಲೋ ಆಸ್ಪತ್ರೆಗೆ ಜಾಕ್ ಮಂಜು ದಾಖಲಾಗಿದ್ದು ಚಿಕಿತ್ಸೆ ಪಡೆಯಿತ್ತಿದ್ದಾರೆ.

ಸ್ಯಾಂಡಲ್ ವುಡ್‌ನ ಖ್ಯಾತ ನಿರ್ಮಾಪಕ, ಕಿಚ್ಚ ಸುದೀಪ್ ಆಪ್ತ ಜಾಕ್ ಮಂಜು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಾರ್ಯಕ್ರಮವೊಂದಕ್ಕೆ ಹೋಗಿದ್ದ ನಿರ್ಮಾಪಕ ಜಾಕ್ ಮಂಜು ಎಡವಿ ಬಿದ್ದು ಕಾಲು ಮುರಿದುಕೊಂಡ ಹಿನ್ನಲೇ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬನ್ನೇರುಘಟ್ಟ ಬಳಿ ಇರೋ ಅಪೋಲೋ ಆಸ್ಪತ್ರೆಗೆ ಜಾಕ್ ಮಂಜು ದಾಖಲಾಗಿದ್ದು ಚಿಕಿತ್ಸೆ ಪಡೆಯಿತ್ತಿದ್ದಾರೆ. ಅಂದಹಾಗೆ ಕಳೆದ ಎರಡು ದಿನಗಳ ಹಿಂದೆಯೇ ಜಾಕ್ ಮಂಜು ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿದೆ.   

ಜಾಕ್ ಮಂಜು ಕಳೆದ 20 ದಿನಗಳ ಹಿಂದೆಯೇ ಎಡವಿ ಬಿದ್ದು ಕಾಲು ಮುರಿದುಕೊಂಡಿದ್ದರು ಎನ್ನಲಾಗಿದೆ. ಆಗ‌ ಕಾಲಿಗೆ ಚಿಕಿತ್ಸೆಯನ್ನು ಪಡೆಯುತ್ತಿದ್ದರು, ಆದರೆ 20 ದಿನಗಳ ಬಳಿಕ ಕಾಲಿನಲ್ಲಿ ರಕ್ತ ಹೆಪ್ಪುಗಟ್ಟಿ ಊತ ಬಂದ ಪರಿಣಾಮ ಆಸ್ಪತ್ರೆಗೆ ದಾಖಲಾಗಿದ್ದಾರೆ. ಎರಡು ದಿನಗಳಿಂದ  ಆಸ್ಪತ್ರೆಯಲ್ಲಿರುವ ಜಾಕ್ ಮಂಜು ಕಾಲಿಗೆ ಸರ್ಜರಿ ಮಾಡಲಾಗಿದ್ದು ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.  ಜಾಕ್ ಮಂಜು ಕಳೆದ ಕೆಲವು ದಿನಗಳಿಂದ ಬಹುನಿರೀಕ್ಷೆಯ ವಿಕ್ರಾಂತ್ ರೋಣ ಸಿನಿಮಾದ ಪ್ರಮೋಷನ್‌ನಲ್ಲಿ ಬ್ಯುಸಿಯಾಗಿದ್ದರು. ದೇಶದಾದ್ಯಂತ ಸಂಚರಿಸುತ್ತಿದ್ದರು. ಆದರೀಗ ದಿಢೀರ್ ಆಸ್ಪತ್ರೆ ದಾಖಲಾದ ವಿಚಾರ ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ. 

ಜಾಕ್ ಮಂಜು ಬೇಗ ಗುಣಮುಖರಾಗಿ ವಾಪಾಸ್ ಆಗಲಿ ಎಂದ ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ. ನಿರ್ಮಾಪಕ ಜಾಕ್ ಮಂಜು ಮತ್ತು ಸುದೀಪ್ ಇಬ್ಬರು ಉತ್ತಮ ಸ್ನೇಹಿತರು. ಇಬ್ಬರ ನಡುವೆ ಉತ್ತಮ ಬಾಂಧವ್ಯವಿದೆ. ಸುದೀಪ್ ನಟನೆಯ ಅನೇಕ ಸಿನಿಮಾಗಳಿಗೆ ಜಾಕ್ ಮಂಜು ಬಂಡವಾಳ ಹೂಡಿದ್ದಾರೆ. ಇದೀಗ ಪ್ಯಾನ್ ಇಂಡಿಯಾ ವಿಕ್ರಾಂತ್ ರೋಣ ಸಿನಿಮಾದ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ. 

ಕಿಚ್ಚ ಸುದೀಪ್ ಗೆ ಬ್ಯಾಟ್ ಗಿಫ್ಟ್ ನೀಡಿದ ಜೋಸ್ ಬಟ್ಲರ್!

ವಿಕ್ರಾಂತ್ ರೋಣನನ್ನು ನೋಡಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗುತ್ತಿರುವ ವಿಕ್ರಾಂತ್ ರೋಣ ಸಿನಿಮಾದ ಹಾಡು ಈಗಾಗಲೇ ವೈರಲ್ ಆಗಿದೆ. ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಕಾಣಿಸಿಕೊಂಡಿರುವ ಹಾಡು ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಟೀಸರ್ ಮತ್ತು ಪೋಸ್ಟರ್‌ಗಳ ಮೂಲಕ ಸದ್ದು ಮಾಡುತ್ತಿರುವ ವಿಕ್ರಾಂತ್ ರೋಣನನ್ನು ನೋಡಲು ಅಭಿಮಾನಿಗಳು ತುದಿಗಲಿನಲ್ಲಿ ನಿಂತಿದ್ದಾರೆ. ಈ ನಡುವೆ ನಿರ್ಮಾಪಕ ಜಾಕ್ ಮಂಜು ಆಸ್ಪತ್ರೆ ದಾಖಲಾಗಿರುವುದು ಆಭಾಮಾನಿಗಳ ಆತಂಕಕ್ಕೆ ಕಾರಣವಾಗಿದೆ.

ಗಲ್ಲಿ ಗಲ್ಲಿಯಲ್ಲಿ ರಾ ರಾ ರಕ್ಕಮ್ಮ, ಮಕ್ಕಳಲ್ಲಿಯೂ ಹೆಚ್ಚಾಗಿದೆ ಕ್ರೇಜ್...!

 ವಿಕ್ರಾಂತ್ ರೋಣ ಸಿನಿಮಾ ಜುಲೈ 28ಕ್ಕೆ ರಿಲೀಸ್ ಆಗುತ್ತಿದೆ. ಈಗಾಗಲೇ ಭಾರಿ ನಿರೀಕ್ಷೆ ಮೂಡಿಸಿರುವ ಸಿನಿಮಾ ಹೇಗಿರಲಿದೆ ಎಂದು ಅಭಿಮಾನಿಗಳು ಕಾಯುತ್ತಿದ್ದಾರೆ. ಆದಷ್ಟು ಬೇಗ ಜಾಕ್ ಮಂಜು ಗುಣಮುಖರಾಗಿ ಪಾವಾಸ್ ಆಗಿ ಮತ್ತೆ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಳ್ಳಲಿ ಎಂದು ಅಭಿಮಾನಿಗಳು ಹಾರೈಸುತ್ತಿದ್ದಾರೆ.  

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

Ba Ma Harish Son Ullas Gowda Death: ವಿಜಯನಗರ ನಿವಾಸದಲ್ಲಿ ಅಂತಿಮ ದರ್ಶನ; ಮಧ್ಯಾಹ್ನ 3 ಗಂಟೆಗೆ ಸುಮನಹಳ್ಳಿ ಚಿತಾಗಾರದಲ್ಲಿ ಅಂತ್ಯಕ್ರಿಯೆ
SN Shankar Death: ನಿನ್ನೆ ಸಿನಿಮಾ ಶೂಟಿಂಗ್‌ನಲ್ಲಿ ಭಾಗಿಯಾಗಿದ್ದ 'ಉಲ್ಟಾ ಪಲ್ಟಾ' ಸಿನಿಮಾದ ನಿರ್ದೇಶಕ ಇನ್ನಿಲ್ಲ