ಆರ್ಮುಗಂ ರವಿಶಂಕರ್ ಪುತ್ರನಿಗೆ ಶಿವಣ್ಣ ಸಾಥ್; ಅದ್ವೇ ಕನಸು 'ಸುಬ್ರಹ್ಮಣ್ಯ' ಫಸ್ಟ್ ಲುಕ್ ರಿಲೀಸ್

By Shriram Bhat  |  First Published Sep 8, 2024, 3:28 PM IST

ಪ್ಯಾನ್ ಇಂಡಿಯಾ ಮಟ್ಟದಲ್ಲಿ ಈ ಸಿನಿಮಾ ನಿರ್ಮಾಣ ಆಗುತ್ತಿದೆ. ಮಾಲಾಶ್ರೀ ಅಭಿನಯದ 'ದುರ್ಗಿ' ಸಿನಿಮಾಗೆ ನಿರ್ದೇಶನ ಮಾಡಿ ಸೈ ಎನಿಸಿಕೊಂಡಿದ್ದ ರವಿಶಂಕರ್​ ಅವರು ಈಗ ಮಗನ ಸಿನಿಮಾಗಾಗಿ ಮತ್ತೆ ನಿರ್ದೇಶನ ಮಾಡುತ್ತಿದ್ದಾರೆ. ಈ ಮೂಲಕ ಬರೋಬ್ಬರಿ 2 ದಶಕದ ಬಳಿಕ..


ಪ್ರೀ-ಲುಕ್ ಮೂಲಕ ಗಮನ ಸೆಳೆದಿದ್ದ ಖ್ಯಾತ ಖಳನಟ ಪಿ ರವಿಶಂಕರ್​ (Ravi Shankar) ಅವರ ಪುತ್ರ ಅದ್ವೈ (Adhvey) ಅಭಿನಯದ ಮೊದಲ ಸಿನಿಮಾ 'ಸುಬ್ರಹ್ಮಣ್ಯ' ಫಸ್ಟ್ ಲುಕ್ ರಿಲೀಸ್ ಆಗಿದೆ. ಗಣೇಶ ಚತುರ್ಥಿಯ ಶುಭ ದಿನವಾದ ಇಂದು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಫಸ್ಟ್ ಲುಕ್ ರಿವೀಲ್ ಮಾಡಿ ಇಡೀ ತಂಡಕ್ಕೆ ಶುಭ ಹಾರೈಸಿದ್ದಾರೆ. ಸುಬ್ರಹ್ಮಣ್ಯ (Subrahmanya) ಚಿತ್ರವು ಪ್ಯಾನ್ ಇಂಡಿಯಾ ಚಿತ್ರವಾಗಿದ್ದು, ಹಲವು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. 

ಉದ್ದನೆಯ ಕೂದಲು ಬಿಟ್ಟು ವಿನ್ಯಾಸಗೊಳಿಸಲಾದ ಉಡುಪಿನಲ್ಲಿ ಸುಂದರವಾಗಿ ಹಾಗೂ ಸೊಗಸಾಗಿ ಅದ್ವೈ ಕಾಣಿಸಿಕೊಂಡಿದ್ದಾರೆ. ಕಾಡು, ನಿಗೂಢ ಪ್ರವೇಶ ದ್ವಾರ, ಅದ್ವೈನನ್ನು ಬೆನ್ನಟ್ಟಿರುವ ತಂಡ ಫಸ್ಟ್ ಲುಕ್ ಪೋಸ್ಟರ್ ನಲ್ಲಿ ಗಮನಸೆಳೆಯುತ್ತಿದೆ. ಸೋಷಿಯೋ-ಫ್ಯಾಂಟಸಿ ಅಡ್ವೆಂಚರ್ಸ್ ಶೈಲಿಯ ಸುಬ್ರಹ್ಮಣ್ಯ ಸಿನಿಮಾದ 60% ಕೆಲಸ ಪೂರ್ಣಗೊಂಡಿದ್ದು, ಮುಂಬೈನ ರೆಡ್ ಚಿಲ್ಲಸ್ ಸ್ಟುಡಿಯೋದಲ್ಲಿ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. 

Tap to resize

Latest Videos

'ಬಿಲ್ಲ ರಂಗ ಭಾಷ'ದಲ್ಲಿ ಸುದೀಪ್ ಪಾತ್ರ ಏಂಥದ್ದು? ನಿರ್ದೇಶಕ ಅನೂಪ್ ಭಂಡಾರಿ ಬಿಚ್ಚಿಟ್ಟ ಸೀಕ್ರೆಟ್ ನೋಡಿ!

ಬೆಂಗಳೂರು, ಮುಂಬೈ, ಹೈದರಾಬಾದ್ ಮತ್ತು ಚೆನ್ನೈನ ಹಲವಾರು ಪ್ರತಿಷ್ಠಿತ ಸ್ಟುಡಿಯೋಗಳಲ್ಲಿ ಗ್ರಾಫಿಕ್ಸ್​ ಕೆಲಸಗಳು ನಡೆಯುತ್ತಿವೆ.
'ಎಸ್.ಜಿ ಮೂವೀ ಮೇಕರ್ಸ್’ ಸಂಸ್ಥೆಯ ಮೂಲಕ ತಿರುಮಲ ರೆಡ್ಡಿ ಹಾಗೂ ಅನಿಲ್ ಕಡಿಯಾಲ ಅವರು ನಿರ್ಮಾಣ ಮಾಡುತ್ತಿದ್ದಾರೆ. ಪ್ರವೀಣಾ ಕಡಿಯಾಲ ಮತ್ತು ರಮಾ ಲಕ್ಷ್ಮೀ ಪ್ರಸ್ತುತಪಡಿಸುತ್ತಿದ್ದಾರೆ. ರವಿ ಬಸ್ರೂರ್ ಅವರು ಈ ಸಿನಿಮಾಗೆ ಸಂಗೀತ ನೀಡುತ್ತಿದ್ದಾರೆ. 

ಸುಬ್ರಹ್ಮಣ್ಯ ಸಿನಿಮಾಗೆ ವಿಘ್ನೇಶ್ ರಾಜ್ ಅವರು ಛಾಯಾಗ್ರಹಣ ಮಾಡುತ್ತಿದ್ದಾರೆ. ವಿಜಯ್ ಎಂ. ಕುಮಾರ್ ಸಂಕಲನದ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಈ ಸಿನಿಮಾ ನಿರ್ಮಾಣ ಆಗುತ್ತಿದೆ. ಮಾಲಾಶ್ರೀ ಅಭಿನಯದ 'ದುರ್ಗಿ' ಸಿನಿಮಾಗೆ ನಿರ್ದೇಶನ ಮಾಡಿ ಸೈ ಎನಿಸಿಕೊಂಡಿದ್ದ ರವಿಶಂಕರ್​ ಅವರು ಈಗ ಮಗನ ಸಿನಿಮಾಗಾಗಿ ಮತ್ತೆ ನಿರ್ದೇಶನ ಮಾಡುತ್ತಿದ್ದಾರೆ. ಈ ಮೂಲಕ ಬರೋಬ್ಬರಿ 2 ದಶಕದ ಬಳಿಕ ಅವರು ಡೈರೆಕ್ಟರ್​ ಕ್ಯಾಪ್​ ಧರಿಸಿದ್ದಾರೆ. ಈ ಚಿತ್ರವು ಬಿಗ್ ಬಜೆಟ್ ಹಾಗೂ ಅದ್ದೂರಿ ಮೇಕಿಂಗ್ ಮೂಲಕ ತೆರೆಗೆ ಬರಲಿದೆ ಎಂದು ಚಿತ್ರತಂಡ ಹೇಳಿದೆ.

ಅಘೋರಿ ಪಾತ್ರಕ್ಕಾಗಿ ವಿಭೂತಿ ಬಳಿದುಕೊಂಡಿದ್ದಕ್ಕೆ ರಾಧಿಕಾ ಕುಮಾರಸ್ವಾಮಿಗೆ ಏನಾಗಿತ್ತು ಗೊತ್ತಾ?

click me!