ಮುಂಬೈನಲ್ಲಿ ಡಬ್ಲ್ಯುಡಬ್ಲ್ಯುಇ ಚಾಂಪಿಯನ್ ಜಾನ್ ಸೀನಾ ಮತ್ತು ನಟ ಯಶ್ ಒಟ್ಟಿಗೆ ಕಾಣಿಸಿಕೊಂಡಿದ್ದು ಈ ಹಿನ್ನೆಲೆಯಲ್ಲಿ ಟಾಕ್ಸಿಕ್ ಸಿನಿಮಾದಲ್ಲಿ ಜಾನ್ ಸೀನಾ ನಟಿಸಲಿದ್ದಾರೆ ಎಂಬ ಸುದ್ದಿ ಹರಡಿದೆ.
ಶ್ರೀಮಂತ ಉದ್ಯಮಿ ಮುಕೇಶ್ ಅಂಬಾನಿ ಪುತ್ರ ಅನಂತ್ ಅಂಬಾನಿ ಮದುವೆಯಲ್ಲಿ ‘ರಾಕಿಂಗ್ ಸ್ಟಾರ್’ ಯಶ್ ಹೊಸ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ರಾಧಿಕಾ ಪಂಡಿತ್ ಕೂಡ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು, ಸಾಂಪ್ರದಾಯಿಕ ಉಡುಗೆಯಲ್ಲಿ ಇಬ್ಬರು ಮಿಂಚಿದರು. ಯಶ್ ಅವರು ತನ್ನ ಉದ್ದನೆಯ ಕೂದಲಿಗೆ ಕತ್ತರಿ ಪ್ರಯೋಗ ಮಾಡಿದ್ದು, ಹೊಸ ಲುಕ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಕೆಜಿಎಫ್ ಸಿನಿಮಾ ಬಳಿಕ ಯಶ್ ಮೊದಲ ಬಾರಿಗೆ ಬೇರೆ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ‘ಟಾಕ್ಸಿಕ್’ ಸಿನಿಮಾಗಾಗಿ ಯಶ್ ಈ ಲುಕ್ ಮಾಡಿಸಿಕೊಂಡಿದ್ದಾರೆ ಎನ್ನಲಾಗಿದೆ. ಇದೇ ಸಂದರ್ಭದಲ್ಲಿ ಅವರೊಂದಿಗೆ ಡಬ್ಲ್ಯುಡಬ್ಲ್ಯುಇ ಚಾಂಪಿಯನ್ ಜಾನ್ ಸೀನಾ ಕೂಡ ಇದ್ದರು. ಈ ಹಿನ್ನೆಲೆಯಲ್ಲಿ ಟಾಕ್ಸಿಕ್ ಸಿನಿಮಾದಲ್ಲಿ ಜಾನ್ ಸೀನಾ ನಟಿಸಲಿದ್ದಾರೆ ಎಂಬ ಸುದ್ದಿಯೂ ಹರಡಿದೆ.
ಜಾನ್ ಸೀನಾ ಟಾಕ್ಸಿಕ್ ಸಿನಿಮಾದಲ್ಲಿ ವಿಲನ್ ಪಾತ್ರದಲ್ಲಿ ಮಿಂಚಲಿದ್ದಾರೆ ಎಂದು ಸುದ್ದಿ ಹಬ್ಬಿದೆ. ಜಾನ್ ಸೀನಾ ಯಶ್ ಜತೆ ಮುಂಬೈನಲ್ಲಿ ಕಾಣಿಸಿಕೊಂಡ ನಂತರ ಈ ವಿಷ್ಯ ವೈರಲ್ ಆಗ್ತಿದೆ.
ದೇಶದ ಅತ್ಯಂತ ದುಬಾರಿ ಮದುವೆ ಎನಿಸಿಕೊಂಡ ಬಿಲಿಯನೇರ್ ಉದ್ಯಮಿ ಮುಕೇಶ್ ಅಂಬಾನಿ ಮಗ ಅನಂತ್ ಅಂಬಾನಿ- ರಾಧಿಕಾ ಮರ್ಚೆಂಟ್ ವಿವಾಹ ಕಾರ್ಯಕ್ರಮದಲ್ಲಿ ಪ್ರಸ್ತುತ ಕರ್ನಾಟಕದಿಂದ ಯಶ್ ಕುಟುಂಬ ಮಾತ್ರ ಭಾಗವಹಿಸಿರುವ ಮಾಹಿತಿ ಬಂದಿದೆ.
ರಜನಿಕಾಂತ್, ಅಮಿತಾಬ್ ಬಚ್ಚನ್, ಯಶ್, ರಣಬೀರ್ ಕಪೂರ್, ಸಲ್ಮಾನ್ ಖಾನ್, ಶಾರುಖ್ ಖಾನ್ ಎಲ್ಲರೂ ಕುಟುಂಬ ಸಮೇತ ಬಂದು ಮದುವೆಯಲ್ಲಿ ಪಾಲ್ಗೊಂಡಿದ್ದರು. ವಿಶೇಷ ಎಂದರೆ ಎಲ್ಲರೂ ಮನಸ್ಸು ಬಿಚ್ಚಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಅದರಲ್ಲೂ ರಜನಿಕಾಂತ್ ಮತ್ತು ಅನಿಲ್ ಕಪೂರ್ ಡಾನ್ಸ್ ಮಾಡಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಅಂಥಾ ಮೇರು ನಟರು ಅಂಬಾನಿ ಕುಟುಂಬದ ಮೇಲೆ ಇಟ್ಟಿರುವ ಪ್ರೀತಿಗೆ ಆ ಸನ್ನಿವೇಶ ಸಾಕ್ಷಿಯಂತಿತ್ತು. ಆಸಕ್ತಿಕರ ವಿಚಾರವೆಂದರೆ ಅನಂತ್ ಭಾಯಿ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ಈ ಮದುವೆ ನಡೆಸುವ ಮೂಲಕ ಮುಕೇಶ್ ಅಂಬಾನಿ ತಮ್ಮ ಪ್ರತಿಷ್ಠೆ ಮತ್ತು ಜಾಗತಿಕ ಸಂಬಂಧವನ್ನು ಸಾರಿದ್ದಾರೆ.