Tabaahi Song ಟ್ರೆಂಡಿಂಗ್‌ನಲ್ಲಿ ನಂ.1: ಯಶ್ ಸ್ವ್ಯಾಗ್ ಜೊತೆ ಯೋಗರಾಜ್ ಭಟ್ ಮ್ಯಾಜಿಕ್ ಏನು?

Published : Jul 09, 2026, 10:31 PM IST
Yogaraj Bhat

ಸಾರಾಂಶ

Toxic Tabaahi Song: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ 'ಟಾಕ್ಸಿಕ್' ಚಿತ್ರದ ಮೊದಲ ವಿಡಿಯೊ ಹಾಡು 'ತಬಾಹಿ' ಬಿಡುಗಡೆಯಾದ ಕ್ಷಣದಿಂದಲೇ ಸಾಮಾಜಿಕ ಜಾಲತಾಣಗಳಲ್ಲಿ ಸಂಚಲನ ಮೂಡಿಸಿದೆ.

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ 'ಟಾಕ್ಸಿಕ್' ಚಿತ್ರದ ಮೊದಲ ವಿಡಿಯೊ ಹಾಡು 'ತಬಾಹಿ' ಬಿಡುಗಡೆಯಾದ ಕ್ಷಣದಿಂದಲೇ ಸಾಮಾಜಿಕ ಜಾಲತಾಣಗಳಲ್ಲಿ ಸಂಚಲನ ಮೂಡಿಸಿದೆ. ಜುಲೈ 8ರಂದು ಬಿಡುಗಡೆಯಾದ ಈ ಹಾಡು ಕೇವಲ 24 ಗಂಟೆಗಳಲ್ಲೇ 1.8 ಕೋಟಿ ವೀಕ್ಷಣೆ ದಾಖಲಿಸಿ ಚಿತ್ರದ ಮೇಲಿನ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದೆ. ಹಾಡಿನ ಅದ್ಧೂರಿ ದೃಶ್ಯಗಳು, ಸಂಗೀತ ಮತ್ತು ಸಾಹಿತ್ಯಕ್ಕೆ ಸಿನಿಪ್ರಿಯರಿಂದ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ವಿಶೇಷವಾಗಿ, 'ತಬಾಹಿ' ಹಾಡಿನ ಸಾಹಿತ್ಯವನ್ನು ಖ್ಯಾತ ನಿರ್ದೇಶಕ ಹಾಗೂ ಗೀತರಚನೆಕಾರ ಯೋಗರಾಜ್ ಭಟ್ ಬರೆದಿರುವುದು ಅಭಿಮಾನಿಗಳ ಗಮನ ಸೆಳೆದಿದೆ. ವಿಶಾಲ್ ಮಿಶ್ರಾ ಸಂಗೀತ ಸಂಯೋಜಿಸಿರುವ ಈ ಹಾಡು ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಟ್ರೆಂಡಿಂಗ್ ಪಟ್ಟಿಗೆ ಎಂಟ್ರಿ ಕೊಟ್ಟಿದ್ದು, 'ಅಸಾಧಾರಣ ಸಾಹಿತ್ಯ', 'ಹೃದಯ ಮುಟ್ಟುವ ಸಾಲುಗಳು', 'ಭಟ್ಟರು ಮತ್ತೊಮ್ಮೆ ಮ್ಯಾಜಿಕ್ ಮಾಡಿದ್ದಾರೆ' ಎಂಬಂತಹ ಪ್ರತಿಕ್ರಿಯೆಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದು ಬರುತ್ತಿವೆ.

ಹಾಡಿನ ಸಾಹಿತ್ಯವನ್ನು ಯೋಗರಾಜ್ ಭಟ್ ತಮ್ಮ ಅಧಿಕೃತ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಆ ಪೋಸ್ಟ್‌ಗೆ ಸಾವಿರಾರು ಅಭಿಮಾನಿಗಳು ಮೆಚ್ಚುಗೆಯ ಕಾಮೆಂಟ್‌ಗಳನ್ನು ಮಾಡಿದ್ದು, 'ಅದೇನ್ ಬರೀತೀರ ಭಟ್ರೆ ನಿಮಗೆ ನೀವೇ ಸಾಟಿ', 'ಕೊರೆದಾ ಉಗುರ ಕವಿತೆ ಮಧುರಾ', 'ಹೃದಯಕ್ಕೆ ಮುಟ್ಟುವ ಸಾಲುಗಳು ಸರ್' ಎಂದು ಹೊಗಳುತ್ತಿದ್ದಾರೆ.

ಯಶ್-ಕಿಯಾರಾ ಜೋಡಿಯ ಬೋಲ್ಡ್ ಅವತಾರ ಚರ್ಚೆಗೆ

'ತಬಾಹಿ' ವಿಡಿಯೊದ ಮತ್ತೊಂದು ಪ್ರಮುಖ ಆಕರ್ಷಣೆ ಯಶ್ ಹಾಗೂ ಕಿಯಾರಾ ಅಡ್ವಾಣಿ ಅವರ ಹೊಸ ಲುಕ್. ಇದೇ ಮೊದಲ ಬಾರಿಗೆ ಈ ಜೋಡಿ ಬೋಲ್ಡ್ ಹಾಗೂ ಸ್ಟೈಲಿಷ್ ಅವತಾರದಲ್ಲಿ ಕಾಣಿಸಿಕೊಂಡಿದ್ದು, ಇಬ್ಬರ ಕೆಮಿಸ್ಟ್ರಿ ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ. ಲಿರಿಕಲ್ ಹಾಡಿನಲ್ಲೇ ಗಮನ ಸೆಳೆದಿದ್ದ 'ತಬಾಹಿ', ಈಗ ವಿಡಿಯೊ ರೂಪದಲ್ಲಿ ಬಿಡುಗಡೆಯಾಗಿ ಚಿತ್ರದ ಬಗ್ಗೆ ಚರ್ಚೆಯನ್ನು ಮತ್ತಷ್ಟು ಹೆಚ್ಚಿಸಿದೆ.

ಪ್ಯಾನ್ ಇಂಡಿಯಾ ಮಟ್ಟದಲ್ಲಿ 'ಟಾಕ್ಸಿಕ್'

ರಾಷ್ಟ್ರಪ್ರಶಸ್ತಿ ವಿಜೇತೆ ಗೀತು ಮೋಹನ್‌ದಾಸ್ ನಿರ್ದೇಶನದ 'ಟಾಕ್ಸಿಕ್' ಚಿತ್ರದಲ್ಲಿ ಯಶ್ ದ್ವಿಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅವರೊಂದಿಗೆ ನಯನತಾರಾ, ಕಿಯಾರಾ ಅಡ್ವಾಣಿ, ಹುಮಾ ಖುರೇಷಿ, ತಾರಾ ಸುತಾರಿಯಾ ಹಾಗೂ ರುಕ್ಮಿಣಿ ವಸಂತ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. KVN ಪ್ರೊಡಕ್ಷನ್ಸ್ ಮತ್ತು Monster Mind Creations ಬ್ಯಾನರ್‌ಗಳಡಿ ನಿರ್ಮಾಣವಾಗಿರುವ ಈ ಚಿತ್ರಕ್ಕೆ ರವಿ ಬಸ್ರೂರು ಸಂಗೀತ ನೀಡಿದ್ದು, ರಾಷ್ಟ್ರಪ್ರಶಸ್ತಿ ವಿಜೇತ ರಾಜೀವ್ ರವಿ ಛಾಯಾಗ್ರಹಣ ನಿರ್ವಹಿಸಿದ್ದಾರೆ.

ಬಹುನಿರೀಕ್ಷಿತ 'ಟಾಕ್ಸಿಕ್' ಸಿನಿಮಾ ಆಗಸ್ಟ್ 26ರಂದು ವಿಶ್ವಾದ್ಯಂತ ಬಿಡುಗಡೆಯಾಗಲಿದ್ದು, ಕನ್ನಡ ಹಾಗೂ ಇಂಗ್ಲಿಷ್‌ನಲ್ಲಿ ಚಿತ್ರೀಕರಣಗೊಂಡಿರುವ ಈ ಚಿತ್ರವು ಹಿಂದಿ, ತಮಿಳು, ತೆಲುಗು ಸೇರಿದಂತೆ ಹಲವು ಭಾಷೆಗಳಲ್ಲಿ ಡಬ್ ಆಗಿ ಬಿಡುಗಡೆಯಾಗಲಿದೆ. 'ತಬಾಹಿ' ಹಾಡಿಗೆ ಸಿಕ್ಕಿರುವ ಭರ್ಜರಿ ಪ್ರತಿಕ್ರಿಯೆ ಚಿತ್ರದ ಮೇಲಿನ ನಿರೀಕ್ಷೆಯನ್ನು ಇನ್ನಷ್ಟು ಎತ್ತರಕ್ಕೇರಿಸಿದೆ.
 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ನನ್ನ ಬಯೋಪಿಕ್ ಬಂದ್ರೆ 'ಕಾಂತಾರ ನಟ ರಿಷಬ್ ಶೆಟ್ಟಿ'ಯೇ ನಟನೆ ಮಾಡಬೇಕು; ಬಲವಾದ ಕಾರಣ ಕೊಟ್ಟ ಆರ್ಯವರ್ಧನ್ ಗುರೂಜಿ!
'ಕರಾವಳಿ' ಡಬ್ಬಿಂಗ್ ವಿವಾದ: ನಿರ್ದೇಶಕ ಗುರುದತ್‌ಗೆ ಪ್ರಶ್ನೆಗಳ ಸುರಿಮಳೆಗೈದ ಪನ್ನಗಾಭರಣ