ಚಂದ್ರಯಾನ-3ಗೆ ಕೌಂಟ್‌ಡೌನ್‌: ನೌಕೆಯ ಮಾಡೆಲ್ ಜೊತೆ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಇಸ್ರೋ ಸಿಬ್ಬಂದಿ

Published : Jul 13, 2023, 07:53 AM IST
ಚಂದ್ರಯಾನ-3ಗೆ ಕೌಂಟ್‌ಡೌನ್‌:  ನೌಕೆಯ ಮಾಡೆಲ್ ಜೊತೆ  ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಇಸ್ರೋ ಸಿಬ್ಬಂದಿ

ಸಾರಾಂಶ

ಚಂದ್ರಯಾನ-3ಗೆ ಇಂದು ಮಧ್ಯಾಹ್ನ ಒಂದು ಗಂಟೆಯಿಂದ ಕೌಂಟ್‌ಡೌನ್‌ ಶುರುವಾಗಲಿದೆ. ಈ ಮಧ್ಯೆ ಚಂದ್ರಯಾನ-3 ಉಪಗ್ರಹ ನೌಕೆಯ ಪ್ರತಿಕೃತಿ ಜೊತೆ ಇಸ್ರೋ ಸಿಬ್ಬಂದಿ ತಿರುಪತಿ ತಿಮ್ಮಪ್ಪನ ಸನ್ನಿಧಾನಕ್ಕೆ ಭೇಟಿ ನೀಡಿದ್ದು, ಅಲ್ಲಿ ಈ  ಯೋಜನೆಯ ಯಶಸ್ಸಿಗಾಗಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.

ಆಂಧ್ರಪ್ರದೇಶ: ಚಂದ್ರಯಾನ-3ಗೆ ಇಂದು ಮಧ್ಯಾಹ್ನ ಒಂದು ಗಂಟೆಯಿಂದ ಕೌಂಟ್‌ಡೌನ್‌ ಶುರುವಾಗಲಿದೆ. ಈ ಮಧ್ಯೆ ಚಂದ್ರಯಾನ-3 ಉಪಗ್ರಹ ನೌಕೆಯ ಪ್ರತಿಕೃತಿ ಜೊತೆ ಇಸ್ರೋ ಸಿಬ್ಬಂದಿ ತಿರುಪತಿ ತಿಮ್ಮಪ್ಪನ ಸನ್ನಿಧಾನಕ್ಕೆ ಭೇಟಿ ನೀಡಿದ್ದು, ಅಲ್ಲಿ ಈ  ಯೋಜನೆಯ ಯಶಸ್ಸಿಗಾಗಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಆಂಧ್ರಪ್ರದೇಶದ ತಿರುಪತಿಯಲ್ಲಿರುವ ಬಾಲಾಜಿಯ ದೇಗುಲಕ್ಕೆ ಆಗಮಿಸಿದ ಇಸ್ರೋ ವಿಜ್ಞಾನಿಗಳ ತಂಡ ಮಿನಿಯೇಚರ್ ಮಾಡೆಲ್ ಜೊತೆ ತಿರುಪತಿ ತಿಮ್ಮಪ್ಪನ ದರ್ಶನ ಪಡೆದರು.

ಚಂದ್ರಯಾನ ಉಡ್ಡಯನಕ್ಕೆ ಕೌಂಟ್‌ಡೌನ್‌ :

ಶ್ರೀಹರಿಕೋಟಾ: ಇಸ್ರೋದ ಮಹತ್ವಾಕಾಂಕ್ಷಿ ಯೋಜನೆಯಾದ ಚಂದ್ರಯಾನ-3 ಯೋಜನೆಗೆ 1 ದಿನವಷ್ಟೇ ಬಾಕಿ ಇದ್ದು, 25 ಗಂಟೆ 30 ನಿಮಿಷಗಳ ಕೌಂಟ್‌ಡೌನ್‌ ಇಂದು ಮಧ್ಯಾಹ್ನ 1 ಗಂಟೆಗೆ ಆರಂಭವಾಗಲಿದೆ. ಇದಕ್ಕೆ ಸಂಬಂಧಿಸಿದಂತೆ ಬುಧವಾರ ಸಿದ್ಧತಾ ಪರಿಶೀಲನೆಯನ್ನು ಇಸ್ರೋ ಮುಗಿಸಿದ್ದು, ಉಡ್ಡಯನಕ್ಕೆ ಅನುಮತಿ ನೀಡಿದೆ.

ಚಂದ್ರಯಾನ-3 ಉಡ್ಡಯನದ ಪೂರ್ವಾಭ್ಯಾಸ ಯಶಸ್ವಿ: ನಭಕ್ಕೆ ನೆಗೆಯಲು ಇನ್ನೆರಡೇ ದಿನ ಬಾಕಿ

ಶುಕ್ರವಾರ ಮಧ್ಯಾಹ್ನ 2 ಗಂಟೆ 35 ನಿಮಿಷ 17 ಸೆಕೆಂಡ್‌ಗೆ ಚಂದ್ರಯಾನ ನೌಕೆಯನ್ನು ಹೊತ್ತ ರಾಕೆಟ್‌ ಶ್ರೀಹರಿಕೋಟಾದಿಂದ ಉಡಾವಣೆಗೊಳ್ಳಲಿದೆ. ಈ ಉಡಾವಣೆಗೆ ದೇಶೀಯವಾಗಿ ನಿರ್ಮಾಣ ಮಾಡಲಾದ ಲಾಂಚಿಂಗ್‌ ವಾಹನ ಬಳಸಲಾಗುತ್ತಿದ್ದು, ಲ್ಯಾಂಡರ್‌ ಮತ್ತು ರೋವರ್‌ಗಳನ್ನು ಸಹ ದೇಶೀಯವಾಗಿ ತಯಾರಿಸಲಾಗಿದೆ. ಲ್ಯಾಂಡರ್‌ ಆಗಸ್ಟ್‌ನಲ್ಲಿ ಚಂದ್ರನ ಮೇಲೆ ಇಳಿಯಲಿದೆ. ಈ ಉಡಾವಣೆಯನ್ನು ಇಸ್ರೋದ ಅಧಿಕೃತ ಯೂಟ್ಯೂಬ್‌ ಚಾನಲ್‌ನಲ್ಲಿ ವೀಕ್ಷಿಸಬಹುದು ಎಂದು ಇಸ್ರೋ ಹೇಳಿದೆ.

ಇದು ಚಂದ್ರಯಾನ-2 ಯೋಜನೆಯ ಮುಂದುವರೆದ ಭಾಗವಾದ ಕಾರಣ ಈ ಯೋಜನೆಯ ಆರ್ಬಿಟರನ್ನು ಕೈಬಿಡಲಾಗಿದೆ. ಚಂದ್ರನ ದಕ್ಷಿಣ ಧ್ರುವದಲ್ಲಿ ನೌಕೆಯನ್ನು ಇಳಿಸಲು ಇಸ್ರೋ ಸಿದ್ಧತೆ ನಡೆಸಿದ್ದು, ಈ ಬಾರಿ ಸಕಲ ಪೂರ್ವ ತಯಾರಿಯೊಂದಿಗೆ ನೌಕೆಯನ್ನು ಸಿದ್ಧಪಡಿಸಲಾಗಿದೆ.

ಈ ಬಾರಿ ಚಂದ್ರಯಾನದಲ್ಲಿ ಫೇಲ್ಯೂರ್‌ ಆಧರಿತ ವಿನ್ಯಾಸ: 2019ರ ಸೋಲಿನಿಂದ ಎಚ್ಚೆತ್ತು ಇಸ್ರೋ ಲ್ಯಾಂಡರ್‌ ನಿರ್ಮಾಣ

 

PREV

ಸ್ಮಾರ್ಟ್‌ಫೋನ್‌ಗಳು ಮತ್ತು AI ನಿಂದ ಸೈಬರ್‌ ಭದ್ರತೆ ಮತ್ತು ವಿಜ್ಞಾನದ ಪ್ರಗತಿಯವರೆಗೆ ಇತ್ತೀಚಿನ ಟೆಕ್ನಾಲಜಿ (Technology News in Kannada) ಬಗ್ಗೆ ನಿರಂತರವಾದ ಅಪ್‌ಡೇಟ್‌. ಡಿಜಿಟಲ್ ಟ್ರೆಂಡ್‌ಗಳ ಕುರಿತು ತಜ್ಞರ ಮಾತುಗಳು, ವಿವರವಾದ ಮಾಹಿತಿ ಮತ್ತು ಬ್ರೇಕಿಂಗ್ ನ್ಯೂಸ್‌ ಸಿಗುವ ಏಕೈಕ ತಾಣ ಏಷ್ಯಾನೆಟ್‌ ಸುವರ್ಣ ನ್ಯೂಸ್‌. ಹೊಸ ಗ್ಯಾಜೆಟ್‌ ರಿಲೀಸ್‌ ಆಯ್ತಾ? ಹೊಸ ಸ್ಟಾರ್ಟ್‌ಅಪ್‌ಗಳು ಬಂದಿದ್ಯಾ? ಭವಿಷ್ಯವನ್ನು ಬದಲಿಸುವ ಟೆಕ್‌ ಪಾಲಿಸಿ ಯಾವುದು? ಇವುಗಳ ಇಂಚಿಂಚೂ ಮಾಹಿತಿ ಸಿಗಲಿದೆ. ಟೆಕ್‌ ಎಕ್ಸ್‌ಪ್ಲೇನರ್ಸ್‌ ಹಾಗೂ ಗ್ಯಾಜೆಟ್‌ ಡೆಮೋ ವಿಡಿಯೋಗಳು ಕೂಡ ನೀವು ಕಾಣಬಹುದು.

Read more Articles on
click me!

Recommended Stories

Human Evolution: ಮನುಷ್ಯರಲ್ಲಿ ಮಹಿಳೆಯರಿಗೆ ಶಾಶ್ವತ ಸ್ತನಗಳಿರುವುದೇಕೆ? ವಿಜ್ಞಾನಿಗಳು ಬಿಚ್ಚಿಟ್ಟ ವಿಕಾಸದ ರಹಸ್ಯ!
Toxic Boss: ನಿಮ್ಮ ಬಾಸ್ ಸೈಕೋಪಾತ್ ಇರಬಹುದಾ? ಈ 4 ಗುಣಗಳಿದ್ರೆ ಹುಷಾರ್ ಅಂತಾರೆ ತಜ್ಞರು!