
ಬೆಂಗಳೂರು (ಜ.23): ಇಸ್ರೋದ ಮಹತ್ವಾಕಾಂಕ್ಷಿ ಯೋಜನೆಯಾದ ಮಾನವರಹಿತ ಗಗನಯಾನ ಮಿಷನ್‌ನ ಕ್ರ್ಯೂ (ಸಿಬ್ಬಂದಿ) ಮಾಡ್ಯೂಲ್ ಅನ್ನು ಇಲ್ಲಿನ ಎಲ್‌ಪಿಎಸ್‌ನಿಂದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರಕ್ಕೆ ರವಾನಿಸಲಾಗಿದೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಇಸ್ರೋ, ‘ಲಿಕ್ವಿಡ್ ಪ್ರೊಪಲ್ಷನ್ ಸಿಸ್ಟಮ್ ಏಕೀಕರಣವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ನಂತರ, ಮೊದಲ ಸಿಬ್ಬಂದಿರಹಿತ ಗಗನಯಾನ ಯೋಜನೆಯ ಭಾಗವಾಗಿ ಇದನ್ನು ಕಳಿಸಲಾಗಿದೆ’ ಎಂದು ಮಾಹಿತಿ ನೀಡಿದೆ.
ಅಂತೆಯೇ, ವಿಕ್ರಂ ಸಾರಾಭಾಯಿ ಬಾಹ್ಯಾಕಾಶ ಕೇಂದ್ರದಲ್ಲಿ ವಿನ್ಯಾಸಗೊಳಿಸಲಾದ, ಕ್ರ್ಯೂ ಮಾಡ್ಯೂಲ್ ಎಂತಹ ಪರಿಸ್ಥಿತಿಯಲ್ಲೂ ನೇರವಾಗಿ, ಸ್ಥಿರವಾಗಿರುವಂತೆ ನೋಡಿಕೊಳ್ಳುವ ಸಿಎಂಯುಎಸ್ ಅನ್ನೂ ಸಿಬ್ಬಂದಿ ಮಾಡ್ಯೂಲ್‌ಗೆ ಜೋಡಿಸಲಾಗಿದೆ. ಫೆಬ್ರವರಿಯಲ್ಲಿ ಇದರ ಪರೀಕ್ಷೆ ನಡೆಯಲಿದೆ. ಗಗನಯಾನವು ಮಾನವರನ್ನು ಬಾಹ್ಯಾಕಾಶಕ್ಕೆ ಕರೆದೊಯ್ಯುವ ಯೋಜನೆಯಾದರೂ, ಮೊದಲಿ ಪ್ರಾಯೋಗಿಕವಾಗಿ ಮನುಷ್ಯರ ಜಾಗದಲ್ಲಿ ಮಾನವಾಕೃತಿಗಳನ್ನಿರಿಸಿ ಕಳಿಸಲಾಗುವುದು. ಇದು ಯಶಸ್ವಿಯಾದರೆ, ನಂತರ ಗಗನಯಾತ್ರಿಗಳನ್ನು ಕರೆದೊಯ್ಯಲಾಗುವುದು.
ಮೋದಿ ಮೆಚ್ಚುಗೆ: ಅಮೆರಿಕದ ಸ್ಪೇಸ್ ಎಕ್ಸ್ ಸಂಸ್ಥೆಯ ರಾಕೆಟ್ ಮೂಲಕ ಬಾಹ್ಯಾಕಾಶಕ್ಕೆ ಉಪಗ್ರಹಗಳನ್ನು ಹಾರಿಬಿಟ್ಟ ಬೆಂಗಳೂರು ಮೂಲಕ ಪಿಕ್ಸೆಲ್ ಕಂಪನಿಯ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಮನ್ ಕೀ ಬಾತ್‌ನಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮಾತನಾಡಿದ ಅವರು, ‘ಬೆಂಗಳೂರು ಮೂಲದ ಭಾರತದ ಸ್ಪೇಸ್ ಟೆಕ್ ಸ್ಟಾರ್ಟ್‌ಅಪ್ ಸಂಸ್ಥೆಯಾದ ಪಿಕ್ಸೆಲ್ ದೇಶದ ಮೊದಲ ಖಾಸಗಿ ಉಪಗ್ರಹಗಳ ನಕ್ಷತ್ರಪುಂಜ(ಸಮೂಹ) ‘ಫೈಲ್‌ಪ್ಲೈ’ ಅನ್ನು ಯಶಸ್ವಿಯಾಗಿ ಗಗನದಲ್ಲಿ ಕೂರಿಸಿದೆ ಎಂದು ಹೇಳಲು ನಾನು ಹೆಮ್ಮೆ ಪಡುತ್ತೇನೆ. ಇದು ವಿಶ್ವದ ಪ್ರಮುಖ ಹೈರೆಸಲ್ಯೂಷನ್ ಹೈಪರ್‌ಸ್ಪೆಕ್ಟ್ರಲ್ ಉಪಗ್ರಹ ನಕ್ಷತ್ರಪುಂಜವಾಗಿದೆ.
475 ಕಿ.ಮೀ ಎತ್ತರದ ಬಾಹ್ಯಾಕಾಶದಲ್ಲಿ ಡಾಕಿಂಗ್ ಪ್ರಕ್ರಿಯೆಗೆ ಇಸ್ರೋ ಮತ್ತಷ್ಟು ಸನಿಹ
ಈ ಸಾಧನೆ ಭಾರತವನ್ನು ಆಧುನಿಕ ಬಾಹ್ಯಾಕಾಶ ತಂತ್ರಜ್ಞಾನ ಕ್ಷೇತ್ರದ ನಾಯಕನನ್ನಾಗಿ ಮಾಡಿದ್ದಷ್ಟೇ ಅಲ್ಲದೆ, ದೇಶವನ್ನು ಬಾಹ್ಯಾಕಾಶ ಕ್ಷೇತ್ರದಲ್ಲಿ ಆತ್ಮನಿರ್ಭರತೆಯೆಡೆಗೆ ಕೊಂಡೊಯ್ಯುವಲ್ಲಿ ಬಹುದೊಡ್ಡ ಹೆಜ್ಜೆ ಇಟ್ಟಿದೆ’ ಎಂದು ತಿಳಿಸಿದರು. ಇದು ಖಾಸಗಿ ಬಾಹ್ಯಾಕಾಶ ಕ್ಷೇತ್ರದಲ್ಲಿ ಬೆಳೆಯುತ್ತಿರುವ ದೇಶದ ಸಾಮರ್ಥ್ಯ ಮತ್ತು ಆವಿಷ್ಕಾರಗಳ ಹೆಜ್ಜೆಗುರುತಾಗಿದೆ. ಈ ಸಾಧನೆಗಾಗಿ ನಾನು ಪಿಕ್ಸೆಲ್, ಇಸ್ರೋ ಮತ್ತು ಐಎನ್-ಎಸ್‌ಪಿಎಸಿಇಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಮೋದಿ ಹೇಳಿದರು. ಪಿಕ್ಸೆಲ್ ಸಂಸ್ಥೆಯು ಒಟ್ಟು 18 ಉಪಗ್ರಹಗಳ ಸಮೂಹವನ್ನು ಬಾಹ್ಯಾಕಾಶದಲ್ಲಿ ಕೂರಿಸಿ ಅತ್ಯಾಧುನಿಕ ರೀತಿಯಲ್ಲಿ ಹವಾಮಾನ ಮತ್ತು ಭೂಮಿಯ ವಾತಾವರಣದ ಕರಾರುವಕ್ಕಾದ ಮಾಹಿತಿಯನ್ನು ಸಂಗ್ರಹಿಸುವ ಗುರಿ ಹೊಂದಿದೆ.
ಸ್ಮಾರ್ಟ್‌ಫೋನ್‌ಗಳು ಮತ್ತು AI ನಿಂದ ಸೈಬರ್ ಭದ್ರತೆ ಮತ್ತು ವಿಜ್ಞಾನದ ಪ್ರಗತಿಯವರೆಗೆ ಇತ್ತೀಚಿನ ಟೆಕ್ನಾಲಜಿ (Technology News in Kannada) ಬಗ್ಗೆ ನಿರಂತರವಾದ ಅಪ್‌ಡೇಟ್. ಡಿಜಿಟಲ್ ಟ್ರೆಂಡ್‌ಗಳ ಕುರಿತು ತಜ್ಞರ ಮಾತುಗಳು, ವಿವರವಾದ ಮಾಹಿತಿ ಮತ್ತು ಬ್ರೇಕಿಂಗ್ ನ್ಯೂಸ್ ಸಿಗುವ ಏಕೈಕ ತಾಣ ಏಷ್ಯಾನೆಟ್ ಸುವರ್ಣ ನ್ಯೂಸ್. ಹೊಸ ಗ್ಯಾಜೆಟ್ ರಿಲೀಸ್ ಆಯ್ತಾ? ಹೊಸ ಸ್ಟಾರ್ಟ್‌ಅಪ್‌ಗಳು ಬಂದಿದ್ಯಾ? ಭವಿಷ್ಯವನ್ನು ಬದಲಿಸುವ ಟೆಕ್ ಪಾಲಿಸಿ ಯಾವುದು? ಇವುಗಳ ಇಂಚಿಂಚೂ ಮಾಹಿತಿ ಸಿಗಲಿದೆ. ಟೆಕ್ ಎಕ್ಸ್‌ಪ್ಲೇನರ್ಸ್ ಹಾಗೂ ಗ್ಯಾಜೆಟ್ ಡೆಮೋ ವಿಡಿಯೋಗಳು ಕೂಡ ನೀವು ಕಾಣಬಹುದು.