
ವಾಷಿಂಗ್ಟನ್(ಮಾ.30): ಮಂಗಳ ಗ್ರಹದ ಅಧ್ಯಯನಕ್ಕೆ ನಿರ್ಮಿಸಲಾಗಿರುವ ನಾಸಾದ ವಿಶೇಷ ಹೆಲಿಕಾಪ್ಟರ್ ನ ಪ್ರಯೋಗಾರ್ಥ ಪರೀಕ್ಷೆ ಯಶಸ್ವಿಯಾಗಿದೆ.
4 ಪೌಂಡ್(1.8 ಕೆಜಿ) ತೂಕವಿರುವ ಈ ವಿಶೇಷ ಹೆಲಿಕಾಪ್ಟರ್‌ನ್ನು ಅತ್ಯಾಧುನಿಕ ತಂತ್ರಜ್ಞಾನದ ಸಹಾಯದಿಂದ ನಿರ್ಮಿಸಲಾಗಿದ್ದು, ಮಂಗಳ ಗ್ರಹದ ಮೇಲೆ ಕರ್ತವ್ಯ ನಿರ್ವಹಿಸಲು ಸಜ್ಜಾಗಿದೆ ಎಂದು ನಾಸಾ ತಿಳಿಸಿದೆ.
ರಾತ್ರಿ ವೇಳೆಯಲ್ಲಿ ಮಂಗಳ ಗ್ರಹದಲ್ಲಿ -90 ಡಿಗ್ರಿ ಸೆಲ್ಸಿಯಸ್ ಗಿಂತಲೂ ಹಚ್ಚು ಶೀತ ವಾತಾವರಣ ಇರುತ್ತದೆ. ಇಂತಹ ವಾತಾವರಣದಲ್ಲೂ ಈ ಹೆಲಿಕಾಪ್ಟರ್ ಕಾರ್ಯನಿರ್ವಹಿಸುವ ಸಾಮರ್ಥ್ಯ ಹೊಂದಿದೆ ಎಂದು ನಾಸಾ ತಿಳಿಸಿದೆ.
ಮಾರ್ಸ್ ಹೆಲಿಕಾಪ್ಟರ್‌ನ ಮಾದರಿಯ ಪ್ರಯೋಗಾರ್ಥ ಪರೀಕ್ಷೆ ಯಶಸ್ವಿಯಾಗಿದ್ದು, ಒಟ್ಟು 75 ನಿಮಿಷಗಳ ಹಾರಾಟ ಯಶಸ್ವಿಯಾಗಿದೆ ಎಂದು ನಾಸಾ ಸ್ಪಷ್ಟಪಡಿಸಿದೆ.
ಸ್ಮಾರ್ಟ್‌ಫೋನ್‌ಗಳು ಮತ್ತು AI ನಿಂದ ಸೈಬರ್ ಭದ್ರತೆ ಮತ್ತು ವಿಜ್ಞಾನದ ಪ್ರಗತಿಯವರೆಗೆ ಇತ್ತೀಚಿನ ಟೆಕ್ನಾಲಜಿ (Technology News in Kannada) ಬಗ್ಗೆ ನಿರಂತರವಾದ ಅಪ್‌ಡೇಟ್. ಡಿಜಿಟಲ್ ಟ್ರೆಂಡ್‌ಗಳ ಕುರಿತು ತಜ್ಞರ ಮಾತುಗಳು, ವಿವರವಾದ ಮಾಹಿತಿ ಮತ್ತು ಬ್ರೇಕಿಂಗ್ ನ್ಯೂಸ್ ಸಿಗುವ ಏಕೈಕ ತಾಣ ಏಷ್ಯಾನೆಟ್ ಸುವರ್ಣ ನ್ಯೂಸ್. ಹೊಸ ಗ್ಯಾಜೆಟ್ ರಿಲೀಸ್ ಆಯ್ತಾ? ಹೊಸ ಸ್ಟಾರ್ಟ್‌ಅಪ್‌ಗಳು ಬಂದಿದ್ಯಾ? ಭವಿಷ್ಯವನ್ನು ಬದಲಿಸುವ ಟೆಕ್ ಪಾಲಿಸಿ ಯಾವುದು? ಇವುಗಳ ಇಂಚಿಂಚೂ ಮಾಹಿತಿ ಸಿಗಲಿದೆ. ಟೆಕ್ ಎಕ್ಸ್‌ಪ್ಲೇನರ್ಸ್ ಹಾಗೂ ಗ್ಯಾಜೆಟ್ ಡೆಮೋ ವಿಡಿಯೋಗಳು ಕೂಡ ನೀವು ಕಾಣಬಹುದು.