2nd PUC ಪರೀಕ್ಷೆ: ಆಗುಂಬೆ ಘಾಟ್ ರಸ್ತೆ ಸಂಚಾರ ನಿಷೇಧ ದಿನಾಂಕ ಮುಂದೂಡಿಕೆ

Published : Feb 28, 2019, 06:13 PM IST
2nd PUC ಪರೀಕ್ಷೆ: ಆಗುಂಬೆ ಘಾಟ್ ರಸ್ತೆ ಸಂಚಾರ ನಿಷೇಧ ದಿನಾಂಕ ಮುಂದೂಡಿಕೆ

ಸಾರಾಂಶ

ಮಾರ್ಚ್ 1ರಿಂದ ಮಾ. 31ರವರೆಗೆ ಆಗುಂಬೆ ಘಾಟ್ ರಸ್ತೆ ಸಂಚಾರ ನಿಷೇಧ ದಿನಾಂಕವನ್ನು ಮುಂದೂಡಲಾಗಿದೆ. ರ್ಚ್ 1ರಿಂದ ಮಾ. 31ರವರೆಗೆ ಬದಲಿಗೆ ಮಾರ್ಚ್ 19ರಿಂದ  ಒಂದು ತಿಂಗಳು ಕಾಲ ಘಾಟ್ ರಸ್ತೆ ಬಂದ್ ಆಗಲಿ ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಶಿವಮೊಗ್ಗ, [ಫೆ.28]: ದ್ವಿತೀಯ ಪಿಯುಸಿ ಪರೀಕ್ಷೆ ಹಿನ್ನೆಲೆಯಲ್ಲಿ ಆಗುಂಬೆ ಘಾಟ್ ರಸ್ತೆ ಸಂಚಾರ ನಿಷೇಧ ದಿನಾಂಕವನ್ನು ಮುಂದೂಡಲಾಗಿದೆ.

 ಮಾರ್ಚ್ 19ರ ನಂತರ ಒಂದು ತಿಂಗಳು ರಸ್ತೆ ಸಂಚಾರಕ್ಕೆ ನಿಷೇಧ ಹೇರಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಎ.ದಯಾನಂದ ತಿಳಿಸಿದ್ದಾರೆ.

1 ತಿಂಗಳು ಆಗುಂಬೆ ಘಾಟ್ ರಸ್ತೆ ಸಂಚಾರ ಬಂದ್, ಬದಲಿ ಮಾರ್ಗ ವ್ಯವಸ್ಥೆ

ದುರಸ್ತಿ ಹಿನ್ನೆಲೆಯಲ್ಲಿ ಈ ಹಿಂದೆ ಮಾರ್ಚ್ 1ರಿಂದ ಮಾ. 31ರವರೆಗೆ ಆಗುಂಬೆ ಘಾಟ್ ರಸ್ತೆ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಅವರು ಆದೇಶಿಸಿದ್ದರು. 

ಆದರೆ ದ್ವಿತೀಯ ಪಿಯುಸಿ ಪರೀಕ್ಷೆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸಂಚಾರ ನಿಷೇಧ ದಿನಾಂಕವನ್ನು ಮುಂದೂಡಿ ಜಿಲ್ಲಾಧಿಕಾರಿ  ಕೆ.ಎ.ದಯಾನಂದ ಆದೇಶ ಹೊರಡಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ಮಾರ್ಚ್ 19ರಿಂದ ದುರಸ್ತಿ ಕಾರ್ಯವನ್ನು ಆರಂಭಿಸಲು ಎಲ್ಲಾ ಸಿದ್ಧತೆಗಳನ್ನು ನಡೆಸುವಂತೆ ಗುತ್ತಿಗೆದಾರರಿಗೆ ಕೆ.ಎ.ದಯಾನಂದ ಸೂಚಿಸಿದ್ದಾರೆ.

PREV
click me!

Recommended Stories

CM Siddaramaiahಗೆ ಈಶ್ವರಪ್ಪ ವಾರ್ನಿಂಗ್: ಭಗವದ್ಗೀತೆ ಓದಲಿ, ತಾಕತ್ತಿದ್ದರೆ ಕುರಾನ್ ಬಗ್ಗೆ ಮಾತನಾಡಲಿ
ಅಡಕೆ ಬೆಳೆಗಾರರ ನೆರವಿಗೆ ಕೇಂದ್ರ ತುರ್ತಾಗಿ ಮಧ್ಯಪ್ರವೇಶಿಸಲಿ: ಸಂಸದ ಬಿ.ವೈ.ರಾಘವೇಂದ್ರ