
ಶಿವಮೊಗ್ಗ [ಅ. 19] : SBI ಬ್ಯಾಂಕ್ ಮ್ಯಾನೇಜರ್ ಆತ್ಮಹತ್ಯೆಗೆ ಶರಣಾದ ಘಟನೆ ಶಿವಮೊಗ್ಗ ಜಿಲ್ಲೆಯ ಜೋಗದಲ್ಲಿ ನಡೆದಿದೆ.
ಜೋಗ್ ಫಾಲ್ಸ್ SBI ಬ್ರಾಂಚ್ ಮ್ಯಾನೇಜರ್ ಅನಿಲ್ ಕುಮಾರ್ [35] ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ.
ಕೆಲಸದ ಒತ್ತಡವೇ ಆತ್ಮಹತ್ಯೆಗೆ ಕಾರಣ ಎನ್ನಲಾಗಿದೆ. ಕಳೆದ ಎರಡು ದಿನಗಳಿಂದ ರಜೆಯಲ್ಲಿದ್ದು, ಇಂದು ಬೆಳಗ್ಗೆ ಬ್ಯಾಂಕಿಗೆ ಬಂದು ಬಾಗಿಲು ತೆಗೆದು, ಬಳಿಕ ಮನೆಗೆ ವಾಪಸಾಗಿದ್ದರು.
ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ಮನೆಯಲ್ಲಿದ್ದ ಪತ್ನಿಯನ್ನು ಹೊರಗೆ ಕಳಿಸಿ, ಅವರು ತೆರಳುತ್ತಿದ್ದಂತೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಬಗ್ಗೆ ಜೋಗ್ ಫಾಲ್ಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಪರಿಶೀಲನೆ ನಡೆಸಿದ್ದಾರೆ.