ದಸರಾ ಮೆರವಣಿಗೆ ವೇಳೆ ಹೃದಯಾಘಾತದಿಂದ ಸಾವು

By Kannadaprabha News  |  First Published Oct 9, 2019, 1:10 PM IST

ದಸರಾ ಉತ್ಸವ ಮೆರವಣಿಗೆ ಸಂದರ್ಭದಲ್ಲಿ ಹೃದಯಾಘಾತದಿಂದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ನಡೆಯಿತು.


ತೀರ್ಥಹಳ್ಳಿ (ಅ.09): ದಸರಾ ಉತ್ಸವ ಮೆರವಣಿಗೆ ಸಂದರ್ಭದಲ್ಲಿ ಹೃದಯಾಘಾತದಿಂದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಮಂಗಳವಾರ ನಡೆಯಿತು. 

ಇಲ್ಲಿನ ಕಿರಣ್‌ ಸ್ಟುಡಿಯೋ ಮಾಲೀಕರಾದ ಸಂಜೀವ ಶೆಟ್ಟಿ(67) ನಿಧನರಾದವರು. ತೀರ್ಥಹಳ್ಳಿ ಪಟ್ಟಣದಲ್ಲಿ ಹಮ್ಮಿಕೊಳ್ಳಲಾಗಿದ್ದ ದಸರಾ ಉತ್ಸವ, ಮೆರವಣಿಗೆ ಸಂದರ್ಭದಲ್ಲಿ ಭಾಗವಹಿಸಿದ್ದ ಸಂಜೀವ ಶೆಟ್ಟಿರಥಬೀದಿಯಲ್ಲಿ ಮೆರವಣಿಗೆ ಸಾಗಿದ್ದಾಗ ಮಾರ್ಗ ಮಧ್ಯದಲ್ಲಿ ಹೃದಯಾಘಾತದಿಂದ ಕುಸಿದು ಬಿದ್ದರು. 

Tap to resize

Latest Videos

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ತಕ್ಷಣವೇ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಫಲಕಾರಿಯಾಗದೆ ಮೃತಪಟ್ಟರು. ಸಂಜೀವ ಶೆಟ್ಟರು ವಿವಿಧ ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿದ್ದರು. ಫೋಟೋಗ್ರಫಿಯಲ್ಲೂ ಪಳಗಿದ್ದ ಅವರು ಜನಾನುರಾಗಿಯಾಗಿದ್ದರು. ಶಾಸಕ ಆರಗ ಜ್ಞಾನೇಂದ್ರ, ಆರ್‌.ಎಂ. ಮಂಜುನಾಥ ಗೌಡ ಮತ್ತು ದಸರಾ ಉತ್ಸವ ಸಮಿತಿ ಮುಖಂಡರು ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

click me!