
ಕೋರಾ(ಆ.04): ಇತ್ತೀಚೆಗಿನ ದಿನಗಳಲ್ಲಿ ವಯಸ್ಸಿನ ಭೇದವಿಲ್ಲದೇ ಹೃದಯಾಘಾತದ ಘಟನೆಗಳು ವರದಿಯಾಗುತ್ತಲೇ ಇವೆ. ಇದೀಗ ಈ ಪಟ್ಟಿಗೆ ಹೊಸ ಸೇರ್ಪಡೆಯಾಗಿದೆ. ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಪ್ರೌಢಶಾಲಾ ವಿದ್ಯಾರ್ಥಿಯೊಬ್ಬ ಪ್ರಶಸ್ತಿ ಸ್ವೀಕರಿಸುವ ಮುನ್ನವೇ ಹೃದಯಾಘಾತಕ್ಕೆ ಒಳಗಾದ ಆಘಾತಕಾರಿ ಘಟನೆ ನಡೆದಿದೆ. 15 ವರ್ಷದ ಭೀಮಾಶಂಕರ್, ಹೃದಾಯಾಘಾತದಿಂದ ಕೊನೆಯುಸಿರೆಳೆದ ದುರ್ದೈವಿಯಾಗಿದ್ದಾರೆ.
ಹೌದು, ಯಾದಗಿರಿ ಜಿಲ್ಲೆಯ ಸುರಪುರ ಮೂಲದ ಭೀಮಾಶಂಕರ್, ತುಮಕೂರು ತಾಲೂಕಿನ ಬೆಳದರ ಸರ್ಕಾರಿ ಪ್ರೌಢಶಾಲೆಯಲ್ಲಿ 10 ನೇ ತರಗತಿ ವಿದ್ಯಾರ್ಥಿಯಾಗಿದ್ದ. ಇಂದು ಚಿಕ್ಕತೊಟ್ಟಿಲು ಕೆರೆ ಬಳಿ ನಡೆಯುತ್ತಿದ್ದ ಹೋಬಳಿ ಮಟ್ಟದ ಪ್ರೌಢಾಶಾಲ ಕ್ರೀಡಾಕೂಟದಲ್ಲಿ ಭೀಮಾಶಂಕರ್ ಭಾಗಿಯಾಗಿದ್ದ. ತುಮಕೂರು ತಾಲ್ಲೂಕಿನ ಚಿಕ್ಕತೊಟ್ಟಿಲು ಕೆರೆ ಬಳಿ ಘಟನೆ ನಡೆದಿದೆ.
ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಭೀಮಾಶಂಕರ್ ಬಾಲಕರ ರಿಲೇ ಸ್ಪರ್ಧೆಯಲ್ಲಿ ಭಾಗವಹಿಸಿ, ದ್ವಿತೀಯ ಸ್ಥಾನ ಪಡೆದಿದ್ದರು. ಆದರೆ ದುರಾದೃಷ್ಟವಶಾತ್, ಪ್ರಶಸ್ತಿ ಸ್ವೀಕರಿಸುವ ಮುನ್ನವೇ ಭೀಮಾಶಂಕರ್ ಹೃದಾಯಾಘಾತಕ್ಕೆ ಒಳಗಾಗಿದ್ದಾರೆ. ಕೂಡಲೇ ಸ್ಥಳೀಯರು ಭೀಮಾಶಂಕರ್‌ನನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ತುಮಕೂರಿನ ಶ್ರೀದೇವಿ ಆಸ್ಪತ್ರೆಯ ವೈದ್ಯರು ಭೀಮಾಶಂಕರ್ ಮೃತಪಟ್ಟಿರುವ ಮಾಹಿತಿಯನ್ನು ಖಚಿತಪಡಿಸಿದ್ದಾರೆ.
ಸದ್ಯ ತುಮಕೂರಿನ ಶ್ರೀದೇವಿ ಆಸ್ಪತ್ರೆಯಲ್ಲಿ ಭೀಮಾಶಂಕರ್ ಅವರ ಮೃತದೇಹವಿದ್ದು, ಇಂದು ತುಮಕೂರು ಜಿಲ್ಲಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಯಲಿದೆ. ಈ ಘಟನೆಯ ಸಂಬಂಧ ಕೋರಾ ಪೊಲೀಸರು ಸ್ಥಳಕ್ಕೆ ಆಗಮಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕರ್ನಲ್ ಗಿರೀಶ ನಾಯ್ಕ ಅಂತ್ಯಸಂಸ್ಕಾರ
ಸಿದ್ದಾಪುರ: ಹೃದಯಾಘಾತದಿಂದ ನಿಧನರಾಗಿದ್ದ ತಾಲೂಕಿನ ಮನಮನೆಗೆಯ ಕರ್ನಲ್ ಗಿರೀಶ ನಾಯ್ಕ ಅವರ ಅಂತ್ಯಸಂಸ್ಕಾರ ಬುಧವಾರ ತಡರಾತ್ರಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು.
ತಾಲೂಕು ಆಡಳಿತದ ವತಿಯಿಂದ ಅಂತಿಮ ನಮನ ಸಲ್ಲಿಸಲಾಯಿತು. ಮೂರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ ಪಾರ್ಥಿವ ಶರೀರಕ್ಕೆ ಗೌರವ ಸಲ್ಲಿಸಿ ಅಂತಿಮ ವಿಧಿ-ವಿಧಾನ ನೆರವೇರಿಸಲಾಯಿತು. ಪುಣೆಯಿಂದ ಪಾರ್ಥಿವ ಶರೀರವನ್ನು ಮನಮನೆಗೆ ತರುತ್ತಿದ್ದಂತೆ ಶಾಸಕ ಭೀಮಣ್ಣ ನಾಯ್ಕ ಸ್ಥಳಕ್ಕೆ ಆಗಮಿಸಿ ಅಂತಿಮ ದರ್ಶನ ಪಡೆದು ಗೌರವ ನಮನ ಸಲ್ಲಿಸಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಈ ವೇಳೆ ತಹಸೀಲ್ದಾರ್ ಎಂ.ಆರ್. ಕುಲಕರ್ಣಿ, ತಾಪಂ ಇಒ ದೇವರಾಜ ಹಿತ್ಲಕೊಪ್ಪ, ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಸಂತ ನಾಯ್ಕ, ಮಾಜಿ ಅಧ್ಯಕ್ಷ ಕೆ.ಜಿ. ನಾಗರಾಜ ಇದ್ದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.