
ಟ್ರಿನಿಡಾಡ್(ಆ.11): ವೆಸ್ಟ್ ಇಂಡೀಸ್ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ನಾಯಕ ವಿರಾಟ್ ಕೊಹ್ಲಿ ಸೆಂಚುರಿ ಹಾಗೂ ಶ್ರೇಯಸ್ ಅಯ್ಯರ್ ಹಾಫ್ ಸೆಂಚುರಿ ನೆರವಿನಿಂದ ಟೀಂ ಇಂಡಿಯಾ ವಿಕೆಟ್ 7 ನಷ್ಟಕ್ಕೆ 279 ರನ್ ಸಿಡಿಸಿದೆ. ಆರಂಭಿಕರ ವೈಫಲ್ಯದ ಹೊರತಾಗಿಯೂ ಟೀಂ ಇಂಡಿಯಾ ವಿಂಡೀಸ್ ವಿರುದ್ಧ ಉತ್ತಮ ಮೊತ್ತ ಪೇರಿಸಿದೆ. ಈ ಮಹತ್ವದ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಗೆಲುವಿಗೆ 280 ರನ್ ಸಿಡಿಸಬೇಕಿದೆ.
ಟೀಂ ಇಂಡಿಯಾಗೆ ಆರಂಭಿಕರು ಆಸರೆಯಾಗಲಿಲ್ಲ. ಆದರೆ ನಾಯಕ ವಿರಾಟ್ ಕೊಹ್ಲಿ ಹಾಗೂ ಶ್ರೇಯಸ್ ಅಯ್ಯರ್ ಹೋರಾಟ ನೆರವಾಯಿತು. ಕೊಹ್ಲಿ 42ನೇ ಶತಕ ಪೂರೈಸಿದರು. ಕೊಹ್ಲಿ 120 ರನ್ ಸಿಡಿಸಿ ಔಟಾದರು. ಸಿಕ್ಕ ಅವಕಾಶದಲ್ಲಿ ಶ್ರೇಯಸ್ ಅಯ್ಯರ್ ತಮ್ಮ ಸಾಮರ್ಥ್ಯ ಸಾಬೀತು ಪಡಿಸಿದರು. ಇಷ್ಟು ದಿನ ಟೀಂ ಇಂಡಿಯಾದಲ್ಲಿ ಆಡಲು ಕಾಯುತ್ತಿದ್ದ ಅಯ್ಯರ್, ಭರ್ಜರಿ ಹಾಫ್ ಸೆಂಚುರಿ ಬಾರಿಸಿದರು.
ಕೊಹ್ಲಿ ಹಾಗೂ ಶ್ರೇಯಸ್ ಅಯ್ಯರ್ ಹೊರತು ಪಡಿಸಿದರೆ ಇತರರಿಂದ ಹೆಚ್ಚಿನ ರನ್ ಹರಿದು ಬರಲಿಲ್ಲ. ಶ್ರೇಯಸ್ ಅಯ್ಯರ್ 71 ರನ್ ಸಿಡಿಸಿ ಔಟಾದರು. ಕೇದಾರ್ ಜಾಧವ್ 16 ರನ್ ಸಿಡಿಸಿ ಔಟಾದರು. ರವೀಂದ್ರ ಜಡೇಜಾ ಅಜೇಯ 16 ರನ್ ಸಿಡಿಸಿದರು. ಈ ಮೂಲಕ ಟೀಂ ಇಂಡಿಯಾ 7 ವಿಕೆಟ್ ನಷ್ಟಕ್ಕೆ 279 ರನ್ ಸಿಡಿಸಿತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.