INDvWI 2ನೇ ಏಕದಿನ: ಟಾಸ್ ಗೆದ್ದ ಭಾರತ ಬ್ಯಾಟಿಂಗ್

Published : Aug 11, 2019, 06:33 PM ISTUpdated : Aug 11, 2019, 06:53 PM IST
INDvWI 2ನೇ ಏಕದಿನ: ಟಾಸ್ ಗೆದ್ದ ಭಾರತ ಬ್ಯಾಟಿಂಗ್

ಸಾರಾಂಶ

ವೆಸ್ಟ್ ಇಂಡೀಸ್ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ದ್ವಿತೀಯ ಪಂದ್ಯಕ್ಕೆ ಟೀಂ ಇಂಡಿಯಾ ಹಾಗೂ ವಿಂಡೀಸ್ ತಂಡದ ಬದಲಾವಣೆ ಏನು? ಇಲ್ಲಿದೆ ವಿವರ. 

ಟ್ರಿನಿಡಾಡ್(ಆ.11): ಭಾರತ ಹಾಗೂ ವೆಸ್ಟ್ ಇಂಡೀಸ್ ವಿರುದ್ದ ಏಕದಿನ ಸರಣಿಯ ಮೊದಲ ಪಂದ್ಯ ಫಲಿತಾಂಶ ಕಾಣದೇ ರದ್ದಾಗಿದೆ. ಹೀಗಾಗಿ 2ನೇ ಏಕದಿನ ಪಂದ್ಯ  ತೀವ್ರ ಮಹತ್ವ ಪಡೆದುಕೊಂಡಿದೆ. ವಿಂಡೀಸ್ ವಿರುದ್ದ ಟಾಸ್ ಗೆದ್ದಿರುವ ಟೀಂ ಇಂಡಿಯಾ ಬ್ಯಾಟಿಂಗ್ ಆಯ್ಕೆ ಮಾಡಿದೆ. ಟೀಂ ಇಂಡಿಯಾದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಮೊದಲ ಪಂದ್ಯದಲ್ಲಿ ಕಣಕ್ಕಿಳಿದ ತಂಡವೇ 2ನೇ ಪಂದ್ಯದಲ್ಲೂ ಆಡುತ್ತಿದೆ.\

 

ಮೊದಲ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತ್ತು. ವಿಂಡೀಸ್ ತಂಡ 13 ಓವರ್‌ಗಳಲ್ಲಿ 1 ವಿಕೆಟ್ ನಷ್ಟಕ್ಕೆ 54 ರನ್ ಸಿಡಿಸಿತ್ತು. ಈ ವೇಳೆ ಸುರಿದ ಮಳೆಯಿಂದಾಗಿ ಪಂದ್ಯ ಫಲಿತಾಂಶ ಕಾಣದೇ ರದ್ದಾಯಿತು. ಏಕದಿನ ಸರಣಿಗೂ ಮೊದಲು ನಡೆದ ಟಿ20 ಸರಣಿಯಲ್ಲಿ ಟೀಂ ಇಂಡಿಯಾ 3-0 ಅಂತರದಿಂದ ಸರಣಿ ಗೆದ್ದಕೊಂಡಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಹೆಸರು ಸರ್ವಜ್ಞ: ಹಿರಿಯ ಆಟಗಾರನ ಸೋಲಿಸಿ ಜಾಗತಿಕ ಚೆಸ್ ಶ್ರೇಯಾಂಕ ಪ್ರವೇಶಿಸಿದ 3 ವರ್ಷದ ಪೋರ
ನಾನು ಮೋಸ ಮಾಡಿಲ್ಲ, ಗಾಸಿಪ್‌ ನಂಬಬೇಡಿ ಎಂದ Palash Muchhal; ಮದುವೆ ಕ್ಯಾನ್ಸಲ್‌ ಎಂದ Smriti Mandhana