
ಮೈಸೂರು[ಸೆ.18]: ಪ್ರವಾಸಿ ದಕ್ಷಿಣ ಆಫ್ರಿಕಾ ‘ಎ’ ವಿರುದ್ಧದ ದ್ವಿತೀಯ ಅನಧಿಕೃತ ಟೆಸ್ಟ್‌ನಲ್ಲಿ ಶುಭ್‌ಮನ್ ಗಿಲ್ ಆಕರ್ಷಕ 92 ರನ್ ನೆರವಿನಿಂದ ಭಾರತ ‘ಎ’ ಉತ್ತಮ ಆರಂಭ ಪಡೆದುಕೊಂಡಿದೆ. ಮೊದಲ ದಿನದಂತ್ಯಕ್ಕೆ ಭಾರತ ‘ಎ’ 3 ವಿಕೆಟ್ ನಷ್ಟಕ್ಕೆ 233 ರನ್ ಕಲೆಹಾಕಿತು.
ರಾಹುಲ್‌ಗೆ ಕೊಕ್, ಗಿಲ್‌ಗೆ ಖುಲಾಯಿಸಿತು ಲಕ್; ಟ್ವಿಟರ್‌ನಲ್ಲಿ ಭರ್ಜರಿ ರೆಸ್ಪಾನ್ಸ್!
ತಿರುವನಂತಪುರಂನಲ್ಲಿ ನಡೆದಿದ್ದ ಅನಧಿಕೃತ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ 90 ರನ್ ಗಳಿಸಿದ್ದ ಗಿಲ್ ಮತ್ತೊಮ್ಮೆ ಶತಕದಂಚಿನಲ್ಲಿ ವಿಕೆಟ್ ಒಪ್ಪಿಸಿದರು. ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡದಲ್ಲಿ ಸ್ಥಾನ ಪಡೆದಿರುವ ಗಿಲ್, ತಮ್ಮ ಮೇಲಿದ್ದ ನಿರೀಕ್ಷೆ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಡಬಲ್ ಸೆಂಚುರಿ ಬಾರಿಸಿ ಗಂಭೀರ್ ದಾಖಲೆ ಮುರಿದ ಶುಭ್‌ಮನ್ ಗಿಲ್
ಇಲ್ಲಿ ಮಂಗಳವಾರ ಆರಂಭಗೊಂಡ ಪಂದ್ಯದಲ್ಲಿ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ‘ಎ’, ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಭಿಮನ್ಯು ಈಶ್ವರನ್ (5)ಹಾಗೂ ಪ್ರಿಯಾಂಕ್ ಪಾಂಚಾಲ್ (6) ಪೆವಿಲಿಯನ್ ಸೇರಿದಾಗ ಭಾರತ ‘ಎ’ ಮೊತ್ತ 2 ವಿಕೆಟ್ ನಷ್ಟಕ್ಕೆ 31 ರನ್.
ಮೈಸೂರಲ್ಲಿ ಭಾರತ-ಆಫ್ರಿಕಾ ‘ಎ’ ಟೆಸ್ಟ್!
137 ಎಸೆತಗಳಲ್ಲಿ 12 ಬೌಂಡರಿ, 1 ಸಿಕ್ಸರ್ ನೆರವಿನಿಂದ ಗಿಲ್ 92 ರನ್ ಗಳಿಸಿದರು. ಈ ಮೂಲಕ ತಂಡಕ್ಕೆ ಚೇತರಿಕೆ ನೀಡಿದರು. ಗಿಲ್ ವಿಕೆಟ್ ಕಳೆದುಕೊಂಡ ಬಳಿಕ ಭಾರತ ‘ಎ’ ತಂಡಕ್ಕೆ ಕರ್ನಾಟಕ ಬ್ಯಾಟ್ಸ್‌ಮನ್ ಕರುಣ್ ನಾಯರ್ ಹಾಗೂ ನಾಯಕ ವೃದ್ಧಿಮಾನ್ ಸಾಹ ಆಸರೆಯಾದರು. ಈ ಜೋಡಿ ಮುರಿಯದ 4ನೇ ವಿಕೆಟ್‌ಗೆ 67 ರನ್ ಕಲೆಹಾಕಿತು. ದಿನದಂತ್ಯಕ್ಕೆ ಕರುಣ್ 78 ಹಾಗೂ ಸಾಹ 36 ರನ್ ಗಳಿಸಿ ಕ್ರೀಸ್ ಕಾಯ್ದುಕೊಂಡರು.
ಸ್ಕೋರ್:
ಭಾರತ ‘ಎ’ 74 ಓವರಲ್ಲಿ 233/3
(ಮೊದಲ ದಿನದಂತ್ಯಕ್ಕೆ)
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.