
ಮುಂಬೈ(ನ.19): 2019ರ ಐಪಿಎಲ್ ಟೂರ್ನಿಗೆ ಸಿದ್ಧತೆ ಆರಂಭಿಸಿರುವ ಫ್ರಾಂಚೈಸಿಗಳು ಈಗಾಗಲೇ ತಂಡದಲ್ಲಿ ಕೆಲ ಬದಲಾವಣೆ ಮಾಡಿದೆ. ಇದೀಗ ಮುಂದಿನ ತಿಂಗಳು ನಡೆಯಲಿರುವ ಐಪಿಎಲ್ ಹರಾಜಿನ ಮೇಲೆ ಕಣ್ಣಿಟ್ಟಿದೆ. ಈ ಬಾರಿ ಮೂವರು ವಿದೇಶಿ ಆಟಗಾರರು ಗರಿಷ್ಠ ಮೊತ್ತಕ್ಕೆ ಹರಜಾಗೋ ಸಾಧ್ಯತೆ ಇದೆ.
1 ಸ್ಯಾಮ್ ಕುರ್ರನ್
ಇತ್ತೀಚೆಗಿ ಭಾರತ ಪ್ರವಾಸದಲ್ಲಿ ಇಂಗ್ಲೆಂಡ್ ಕ್ರಿಕೆಟಿಗ ಸ್ಯಾಮ್ ಕುರ್ರನ್ ಅತ್ಯುತ್ತಮ ಪ್ರದರ್ಶನ ನೀಡಿ ಮಿಂಚಿದ್ದರು. 4 ಪಂದ್ಯದಿಂದ ಈ ಇಂಗ್ಲೆಂಡ್ ವೇಗಿ 11 ವಿಕೆಟ್ ಕಬಳಿಸಿದರು. ಇಷ್ಟೇ ಅಲ್ಲ 7 ಇನ್ನಿಂಗ್ಸ್‌ನಿಂದ 272 ರನ್ ಸಿಡಿಸಿದ್ದರು. ಆಲ್ರೌಂಡರ್ ಪ್ರದರ್ಶನ ನೀಡಿರುವ ಕುರ್ರನ್ ಈ ಬಾರಿಯ ಐಪಿಎಲ್ ಹರಾಜಿನಲ್ಲಿ ಗರಿಷ್ಠ ಮೊತ್ತಕ್ಕೆ ಹರಾಜಾಗೋದರಲ್ಲಿ ಯಾವುದೇ ಅನುಮಾನವಿಲ್ಲ.
2 ಲ್ಯೂಕ್ ರೊಂಚಿ
ನ್ಯೂಜಿಲೆಂಡ್ ಮಾಜಿ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಲ್ಯೂಕ್ ರೊಂಚಿ ಈ ಬಾರಿಯ ಐಪಿಎಲ್ ಹರಾಜಿನಲ್ಲಿ ಗರಿಷ್ಠ ಮೊತ್ತಕ್ಕೆ ಸೇಲಾಗೋ ಸಾಧ್ಯತೆ ಇದೆ. ಪಾಕಿಸ್ತಾನ ಸೂಪರ್ ಲೀಗ್ ಟೂರ್ನಿಯಲ್ಲಿ ಸರಣಿ ಶ್ರೇಷ್ಠ ಪ್ರದರ್ಶ ನೀಡಿರುವ ಲ್ಯೂಕ್ ರೊಂಚಿ, ಕೆರೆಬಿಯನ್ ಪ್ರಿಮಿಯರ್ ಲೀಗ್ ಟೂರ್ನಿಯಲ್ಲೂ ಮಿಂಚಿದ್ದರು.
3 ಶಿಮ್ರೊನ್ ಹೆಟ್ಮೆಯರ್
ಟಿ20 ಕ್ರಿಕೆಟ್‌ಗೆ ಹೆಸರುವಾಸಿಯಾಗಿರುವ ವೆಸ್ಟ್ ಇಂಡೀಸ್ ಕ್ರಿಕೆಟಿಗರು ಹಾರ್ಡ್ ಹಿಟ್ಟಿಂಗ್ ಬ್ಯಾಟಿಂಗ್ ಮೂಲಕವೇ ಎದುರಾಳಿಗೆ ನಡುಕು ಹುಟ್ಟಿಸುತ್ತಾರೆ. ಇತ್ತೀಚೆಗಿನ ಭಾರತ ಪ್ರವಾಸದಲ್ಲಿ ವೆಸ್ಟ್ ಇಂಡೀಸ್ ಕಳಪೆ ಪ್ರದರ್ಶನ ನೀಡಿದರೂ, ಶಿಮ್ರೊನ್ ಹೆಟ್ಮೆಯರ್ ಅಬ್ಬರಿಸಿದ್ದರು. ಮೊದಲ ಏಕದಿನ ಪಂದ್ಯದಲ್ಲಿ 106 ರನ್ ಸಿಡಿಸಿದರೆ, ದ್ವಿತೀಯ ಪಂದ್ಯದಲ್ಲಿ 94 ರನ್ ಬಾರಿಸಿದ್ದರು. ಸ್ಫೋಟಕ ಬ್ಯಾಟ್ಸ್‌ಮನ್ ಆಗಿ ಗುರುತಿಸಿಕೊಂಡಿರುವ ಶಿಮ್ರೊನ್, ಈ ಬಾರಿಯ ಐಪಿಎಲ್ ಹರಾಜಿನಲ್ಲಿ ಗರಿಷ್ಠ ಮೊತ್ತಕ್ಕೆ ಸೇಲಾಗೋ ಸಾಧ್ಯತೆ ಹೆಚ್ಚಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.