INDvWI 3ನೇ ಏಕದಿನ: ಟಾಸ್ ಗೆದ್ದ ವೆಸ್ಟ್ ಇಂಡೀಸ್ ಬ್ಯಾಟಿಂಗ್- 1 ಬದಲಾವಣೆ!

By Web DeskFirst Published Aug 14, 2019, 6:34 PM IST
Highlights

ಭಾರತ ಹಾಗೂ ವೆಸ್ಟ್ ಇಂಡೀಸ್ ತಂಡಕ್ಕೆ ಇದು ಮಹತ್ವದ ಪಂದ್ಯ. ಕಾರಣ 3ನೇ ಹಾಗೂ ಅಂತಿಮ ಏಕದಿನ ಪಂದ್ಯ ಟೀಂ ಇಂಡಿಯಾಗೆ ಸರಣಿ ಗೆಲುವಿನ ತವಕವಾದರೆ, ವಿಂಡೀಸ್‌ಗೆ ಸರಣಿ ಸಮಬಲ ಮಾಡಿಕೊಳ್ಳೋ ಲೆಕ್ಕಾಚಾರದಲ್ಲಿದೆ. ಅಂತಿಮ ಪಂದ್ಯದಲ್ಲಿ ಟಾಸ್ ಗೆದ್ದ ವೆಸ್ಟ್ ಇಂಡೀಸ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. 

ಟ್ರಿನಿಡಾಡ್(ಆ.14): ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿರುವ ಟೀಂ ಇಂಡಿಯಾ ಇದೀಗ 3ನೇ ಹಾಗೂ ಅಂತಿಮ ಪಂದ್ಯಕ್ಕೆ ಸಜ್ಜಾಗಿದೆ. ಸರಣಿ ಸಮಬಲದ ವಿಶ್ವಾಸದಲ್ಲಿರುವ ಟೀಂ ಇಂಡಿಯಾ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಟೀಂ ಇಂಡಿಯಾದಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ಕುಲ್ದೀಪ್ ಯಾದವ್ ಬದಲು ಯಜುವೇಂದ್ರ ಚಹಾಲ್ ತಂಡ ಸೇರಿಕೊಂಡಿದ್ದಾರೆ.

ಮೊದಲ ಏಕದಿನ ಪಂದ್ಯ ಮಳೆಯಿಂದ ರದ್ದಾಗಿದೆ. 2ನೇ ಪಂದ್ಯಕ್ಕೂ ಮಳೆ ಅಡ್ಡಿಯಾಗಿತ್ತು. ಆದರೆ ದಿಟ್ಟ ಹೋರಾಟ ನೀಡಿದ ಟೀಂ ಇಂಡಿಯಾ ಡಕ್ವರ್ತ್ ನಿಯಮದ ಪ್ರಕಾರ 59 ರನ್ ಗೆಲುವು ಸಾಧಿಸಿತು. ಇದೀಗ 3ನೇ ಹಾಗೂ ಅಂತಿಮ ಪಂದ್ಯದಲ್ಲಿ ವಿಂಡೀಸ್ ತಂಡಕ್ಕೆ ಸರಣಿ ಸಮಬಲ ಮಾಡಿಕೊಳ್ಳೋ ತವಕದಲ್ಲಿದ್ದರೆ, ಭಾರತ ಸರಣಿ ಗೆಲುವಿಗೆ ಹೊಂಚು ಹಾಕಿದೆ.

click me!