
ಇಂದೋರ್(ಅ.09): ಭಾರತ-ನ್ಯೂಜಿಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಸುಭದ್ರ ಸ್ಥಿತಿಯಲ್ಲಿದ್ದು, ನಿನ್ನೆ ನಾಯಕ ಕೊಹ್ಲಿ ಶತಕ ಸಿಡಸಿದರೆ, ಅವರನ್ನೇ ಹಿಂಬಾಲಿಸಿದ ಅಜಿಂಕ್ಯಾ ರಹಾನೆ ಸಹ ಇಂದು ಶತಕ ದಾಖಲಿಸಿದ್ದಾರೆ.
ಇಂದೋರ್'ನಲ್ಲಿ ನಡೆಯುತ್ತಿರುವ ಭಾರತ-ನ್ಯೂಜಿಲೆಂಡ್ ನಡುವಿನ 3ನೇ ಟೆಸ್ಟ್ ಪಂದ್ಯ ಮೊದಲ ದಿನದಂತ್ಯಕ್ಕೆ ಟೀಮ್ ಇಂಡಿಯಾ 3 ವಿಕೆಟ್ ಕಳೆದುಕೊಂಡು 267 ರನ್ ಗಳಿಸಿತ್ತು, ವಿರಾಟ್ 103 ಮತ್ತು ರಹಾನೆ 79 ರನ್ಗಳಿಸಿ ಇಂದು ಬ್ಯಾಟಿಂಗ್ ಮುಂದುವರೆಸಿದರು.
ಇಂದು ಪಂದ್ಯ ಆರಂಭವಾಗುತ್ತಿದ್ದಂತೆ ರಹಾನೆ ಶತಕ ದಾಖಲಿಸಿ ಸಂಭ್ರಮಿಸಿದರು. ಇದು ಅಜಿಂಕ್ಯಾ ರಹಾನೆ 8ನೇ ಟೆಸ್ಟ್ ಶತಕವಾಗಿದ್ದು, ಸದ್ಯ ನಾಯಕ ಕೊಹ್ಲಿಯೊಂದಿಗೆ ಸೇರಿ ಬೃಹತ್ ಇನ್ನಿಂಗ್ಸ್ ಕಟ್ಟುತ್ತಿದ್ದಾರೆ.
ಸದ್ಯದ ವರದಿ ಬಂದಾಗ ರಹಾನೆ 103 ರನ್ ಗಳಿಸಿದರೆ, ನಾಯಕ ಕೊಹ್ಲಿ 126 ರನ್ ಗಳಿಸಿ ಕಿವೀಸ್ ಬೌಲರ್ ಗಳ ಕಿವಿ ಹಿಂಡುತ್ತಿದ್ದಾರೆ. ಭಾರತ ತಂಡ 315 ಕ್ಕೆ 3 ವಿಕೆಟ್ ಕಳೆದುಕೊಂಡಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.