
ಮುಂಬೈ(ಜ.25): 2018ನೇ ಸಾಲಿನ ಐಪಿಎಲ್'ಗೆ ವೇದಿಕೆ ಸಿದ್ಧಗೊಳ್ಳುತ್ತಿದ್ದು, ಸಿದ್ಧತೆಗಳು ಭರ್ಜರಿಯಾಗಿ ಸಾಗಿವೆ. ಈ ವರ್ಷ ಒಂದೇ ಒಂದು ಉದ್ಘಾಟನಾ ಸಮಾರಂಭವನ್ನು ಅದ್ಧೂರಿಯಾಗಿ ನಡೆಸಲು ಬಿಸಿಸಿಐ ನಿರ್ಧರಿಸಿದೆ.
2017ರಲ್ಲಿ ಎಲ್ಲಾ 8 ತಂಡಗಳ ತವರು ಮೈದಾನದಲ್ಲಿ ಉದ್ಘಾಟನಾ ಸಮಾರಂಭವನ್ನು ನಡೆಸಲಾಗಿತ್ತು. ಆದರೆ, ಈ ಬಾರಿ ಐಪಿಎಲ್ ಹೊಸ ರೂಪದಲ್ಲಿ ಅಭಿಮಾನಿಗಳ ಮುಂದೆ ಬರಲಿದ್ದು, ಏ.6ರಂದು ಮುಂಬೈನಲ್ಲಿ ನಡೆಯಲಿರುವ ಉದ್ಘಾಟನಾ ಸಮಾರಂಭವನ್ನು ಹಿಂದಿನ ಆವೃತ್ತಿಗಳಿಗಿಂತ ಅದ್ಧೂರಿಯಾಗಿ ನಡೆಸಲು ಬಿಸಿಸಿಐ ನಿರ್ಧರಿಸಿದೆ. ಅದಕ್ಕಾಗಿ ಬರೋಬ್ಬರಿ ₹50 ಕೋಟಿ ಬಜೆಟ್ ಮೀಸಲಿಡುವುದಾಗಿ ಹೇಳಿದೆ.
ಈ ಹಿಂದಿನ ಆವೃತ್ತಿ ಸಂದರ್ಭದಲ್ಲಿ ಬಿಸಿಸಿಐ ಉದ್ಘಾಟನಾ ಸಮಾರಂಭಗಳಿಗೆ ₹30 ಕೋಟಿ ನಿಗದಿ ಪಡಿಸಿತ್ತು. 8 ಫ್ರಾಂಚೈಸಿಗಳ ತವರಿನಲ್ಲಿ ಉದ್ಘಾಟನಾ ಸಮಾರಂಭ ನಡೆಸಲು ತಲಾ ₹3.5 ಕೋಟಿ ನೀಡಲಾಗಿತ್ತು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆಯುವ ಸಲುವಾಗಿ 8 ಸ್ಥಳಗಳಲ್ಲಿ ಉದ್ಘಾಟನಾ ಕಾರ್ಯಕ್ರಮಗಳನ್ನು ನಡೆಸಲಾಗಿತ್ತು. ಆದರೆ, ಈ ಬಾರಿ ಮೊತ್ತವನ್ನು ₹50 ಕೋಟಿಗೆ ಏರಿಕೆ ಮಾಡಿರುವುದು ಆಶ್ಚರ್ಯಕ್ಕೆ ಕಾರಣವಾಗಿದೆ.
ಜ.27, 28ರಂದು ಆಟಗಾರರ ಹರಾಜು ಪ್ರಕ್ರಿಯೆ ನಡೆಯಲಿದ್ದು, 8 ತಂಡಗಳ ಪೈಕಿ 4 ತಂಡಗಳ ಬಳಿ ಆಟಗಾರರನ್ನು ಖರೀದಿಸಿ, ತಂಡ ರಚಿಸಿಕೊಳ್ಳುವುದಕ್ಕೇ ₹50 ಕೋಟಿ ಹಣವಿಲ್ಲ, ಹೀಗಿರುವಾಗ ಉದ್ಘಾಟನೆಗೆ ಬಿಸಿಸಿಐ ₹50 ಕೋಟಿ ಖರ್ಚು ಮಾಡುತ್ತಿರುವುದು ಚರ್ಚೆಗೆ ದಾರಿ ಮಾಡಿಕೊಟ್ಟಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.