ಏಷ್ಯನ್ ಗೇಮ್ಸ್‌ಗೆ ಭಾರತದ 524 ಸ್ಪರ್ಧಿಗಳು

Published : Jul 04, 2018, 10:06 AM ISTUpdated : Jul 04, 2018, 10:07 AM IST
ಏಷ್ಯನ್ ಗೇಮ್ಸ್‌ಗೆ  ಭಾರತದ 524 ಸ್ಪರ್ಧಿಗಳು

ಸಾರಾಂಶ

ಕ್ರೀಡಾಕೂಟದಲ್ಲಿ ಭಾರತ 36 ವಿಭಾಗಗಳಲ್ಲಿ ಸ್ಪರ್ಧೆ  277 ಪುರುಷರು ಮತ್ತು 247 ಮಹಿಳಾ ಅಥ್ಲೀಟ್‌ಗಳು

ನವದೆಹಲಿ: ಇಂಡೋನೇಷ್ಯಾದ ಜಕಾರ್ತದಲ್ಲಿ ಆಗಸ್ಟ್ 18 ರಿಂದ ಸೆಪ್ಟೆಂಬರ್ 2 ರವರೆಗೆ ನಡೆಯಲಿರುವ ಏಷ್ಯನ್ ಗೇಮ್ಸ್‌ಗಾಗಿ ಭಾರತ ಒಲಿಂಪಿಕ್ ಸಂಸ್ಥೆ(ಐಒಎ)ಯು 524 ಅಥ್ಲೀಟ್‌ಗಳ ಪಟ್ಟಿ ಪ್ರಕಟಿಸಿದೆ. 

ಕೂಟದಲ್ಲಿ ಭಾರತ 36 ವಿಭಾಗಗಳಲ್ಲಿ ಸ್ಪರ್ಧಿಸಲಿದ್ದು, 277 ಪುರುಷರು ಮತ್ತು 247 ಮಹಿಳಾ ಅಥ್ಲೀಟ್‌ಗಳಿದ್ದಾರೆ. 

ಓಟಗಾರ್ತಿ ಟಿಂಟು ಲುಕಾ, ಏಷ್ಯನ್ ಗೇಮ್ಸ್‌ಗೆ ಆಯ್ಕೆಯಾಗಲು ಮತ್ತೊಂದು ಅವಕಾಶ ದೊರೆತಿದೆ. ಭಾರತ ಅಥ್ಲೆಟಿಕ್ಸ್ ಸಂಸ್ಥೆ ಒಟ್ಟು 51 ಅಥ್ಲೀಟ್‌ಗಳ ಪಟ್ಟಿ ಸಲ್ಲಿಸಿದ್ದು, ಅದರಲ್ಲಿ ಟ್ರ್ಯಾಕ್ ಮತ್ತು ಫೀಲ್ಡ್ ಸೇರಿದಂತೆ ಒಟ್ಟು 11 ಅಥ್ಲೀಟ್‌ಗಳಿಗೆ ಮತ್ತೆ ಆಯ್ಕೆ ಟ್ರಯಲ್ಸ್‌ಗೆ ಕರೆಯಲಾಗಿದೆ. 

2014ರ ಏಷ್ಯನ್ ಗೇಮ್ಸ್‌ನಲ್ಲಿ ಟಿಂಟು ಬೆಳ್ಳಿ ಜಯಿಸಿದ್ದರು.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಂಜು ಸ್ಯಾಮ್ಸನ್ ನನ್ನ ಅಣ್ಣನಿದ್ದಂತೆ; ಇಬ್ಬರ ಪೈಪೋಟಿ ಬಗ್ಗೆ ಮನಬಿಚ್ಚಿ ಮಾತಾಡಿದ ಜಿತೇಶ್ ಶರ್ಮಾ
ದಕ್ಷಿಣ ಆಫ್ರಿಕಾ ಎದುರು ಗೆದ್ದರೂ ನಿಂತಿಲ್ಲ ಚಿಂತೆ: 2ನೇ ಟಿ20ಗೆ ಭಾರತ ತಂಡದಲ್ಲಿ ಬದಲಾವಣೆ?