
ಬೆಂಗಳೂರು(ಮೇ.09): ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್ ಬ್ಯಾಟ್ಸ್'ಮನ್ ಎಬಿ ಡಿವಿಲಿಯರ್ಸ್ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಪಾಲ್ಗೊಳ್ಳಲು ಐಪಿಎಲ್ ಮಧ್ಯದಲ್ಲೇ ತೊರೆದು ತವರಿಗೆ ಮರಳಿದ್ದಾರೆ.
ದಕ್ಷಿಣ ಆಫ್ರಿಕಾ ಏಕದಿನ ತಂಡದ ನಾಯಕರಾಗಿರುವ ಎಬಿ ಡಿವಿಲಿಯರ್ಸ್ ಇಂಗ್ಲೆಂಡ್ ವಿರುದ್ಧ ಮೂರು ಏಕದಿನ ಪಂದ್ಯಗಳ ಸರಣಿಯಲ್ಲಿ ತಂಡವನ್ನು ಮುನ್ನಡೆಸಲಿದ್ದು, ಚಾಂಪಿಯನ್ಸ್ ಟ್ರೋಫಿಗೂ ಮುನ್ನ ಅಲ್ಲಿನ ವಾತಾವರಣಕ್ಕೆ ಹೊಂದಿಕೊಳ್ಳಲು ಅವಕಾಶ ಸಿಕ್ಕಂತಾಗಿದೆ.
ಈ ಬಾರಿಯ ಐಪಿಎಲ್ ಎಬಿಡಿ ಪಾಲಿಗೆ ಅಷ್ಟೇನೂ ಸಂತೋಷದಾಯಕವಾಗಿರಲಿಲ್ಲ. ಎಬಿಡಿ ತಾವಾಡಿದ 9 ಪಂದ್ಯಗಳಲ್ಲಿ ಕೇವಲ ಒಂದು ಅರ್ಧಶತಕದೊಂದಿಗೆ 216ರನ್'ಗಳನ್ನಷ್ಟೇ ಬಾರಿಸಿದ್ದಾರೆ.
2017ರ ಐಪಿಎಲ್ ನಿಜಕ್ಕೂ ಬೇಸರ ಉಂಟುಮಾಡಿದ್ದರೆ, ಚಾಂಪಿಯನ್ಸ್ ಟ್ರೋಫಿಗೂ ಮುನ್ನ ನನ್ನ ಕುಟುಂಬ ಹಾಗೂ ತಂಡವನ್ನು ಸೇರಿಕೊಳ್ಳುತ್ತಿರುವುದು ಸಾಕಷ್ಟು ಸಂತೋಷವನ್ನು ನೀಡುತ್ತಿದೆ ಎಂದು ಎಬಿಡಿ ಟ್ವೀಟ್ ಮಾಡಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.