
ಡರ್ಬನ್(ಜ.31): ಭಾರತ ವಿರುದ್ಧ 6 ಪಂದ್ಯಗಳ ಏಕದಿನ ಸರಣಿ ಆರಂಭಕ್ಕೂ ಮೊದಲೇ ದಕ್ಷಿಣ ಆಫ್ರಿಕಾಕ್ಕೆ ಹಿನ್ನಡೆ ಉಂಟಾಗಿದೆ. ಕೈಬೆರಳಿನ ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಹಿರಿಯ ಬ್ಯಾಟ್ಸ್'ಮನ್ ಎಬಿ ಡಿವಿಲಿಯರ್ಸ್ ಮೊದಲ 3 ಏಕದಿನ ಪಂದ್ಯಗಳಿಂದ ಹೊರಬಿದ್ದಿದ್ದಾರೆ.
ಫೆ.1ಕ್ಕೆ ಇಲ್ಲಿ ಮೊದಲ ಪಂದ್ಯ ನಡೆಯಲಿದ್ದು, ಫೆ.4ರಂದು ಸೆಂಚೂರಿಯನ್, ಫೆ.7ರಂದು ಕೇಪ್'ಟೌನ್'ನಲ್ಲಿ ಕ್ರಮವಾಗಿ 2 ಹಾಗೂ 3ನೇ ಪಂದ್ಯ ನಡೆಯಲಿದೆ. ಭಾರತ ವಿರುದ್ಧ 3ನೇ ಟೆಸ್ಟ್ ವೇಳೆ ಬಲ ತೋರು ಬೆರಳಿನ ಗಾಯಕ್ಕೆ ತುತ್ತಾದ ಎಬಿಡಿಗೆ 2 ವಾರಗಳ ವಿಶ್ರಾಂತಿ ಸೂಚಿಸಲಾಗಿದೆ. 4ನೇ ಪಂದ್ಯದ ವೇಳೆ ಡಿವಿಲಿಯರ್ಸ್ ಚೇತರಿಸಿಕೊಳ್ಳಲಿದ್ದು, ಆಯ್ಕೆಗೆ ಲಭ್ಯರಿರಲಿದ್ದಾರೆ ಎಂದು ದ.ಆಫ್ರಿಕಾ ಕ್ರಿಕೆಟ್ ಹೇಳಿದೆ.
ಇತ್ತೀಚೆಗಷ್ಟೇ ಅಂತರಾಷ್ಟ್ರೀಯ ವರ್ಷದ ಏಕದಿನ ಕ್ರಿಕೆಟಿಗ ಎನ್ನುವ ಗೌರವಕ್ಕೆ ಪಾತ್ರರಾಗಿದ್ದ ಎಬಿಡಿ, ಭಾರತ ವಿರುದ್ಧದ ಮೊದಲ 3 ಪಂದ್ಯಗಳಿಂದ ಹೊರಬಿದ್ದಿರುವ ಆಫ್ರಿಕಾ ತಂಡಕ್ಕೆ ದೊಡ್ಡ ಆಘಾತವೆನಿಸಿದೆ. ಎಬಿಡಿ ಭಾರತ ವಿರುದ್ದ 52ರ ಸರಾಸರಿಯಲ್ಲಿ 1295 ರನ್ ಬಾರಿಸಿದ್ದಾರೆ. ಇದರಲ್ಲಿ 6 ಶತಕಗಳು ಒಳಗೊಂಡಿವೆ. ಇನ್ನು ಭಾರತ ವಿರುದ್ಧ ಇತ್ತೀಚೆಗಷ್ಟೇ ಮುಕ್ತಾಯವಾದ 3 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಆಫ್ರಿಕಾ ಪರ(211 ರನ್) ಗರಿಷ್ಠ ರನ್ ದಾಖಲಿಸಿದ ಆಟಗಾರ ಕೂಡ ಎನಿಸಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.