ಭಾರತೀಯ ಕ್ರಿಕೆಟ್ ಕಂಡರೆ ಭಯವಾಗ್ತಿದೆ

Published : May 16, 2017, 12:08 PM ISTUpdated : Apr 11, 2018, 12:34 PM IST
ಭಾರತೀಯ ಕ್ರಿಕೆಟ್ ಕಂಡರೆ ಭಯವಾಗ್ತಿದೆ

ಸಾರಾಂಶ

ಐಪಿಎಲ್ 10ನೇ ಆವೃತ್ತಿಯಲ್ಲಿ ರಾಹುಲ್ ತ್ರಿಪಾಠಿ, ನಿತೀಶ್ ರಾಣಾ, ಸಿದ್ದಾರ್ಥ್ ಕೌಲ್, ಕೃನಾಲ್ ಪಾಂಡ್ಯ ಸೇರಿದಂತೆ ಸಾಕಷ್ಟು ಯುವ ಕ್ರಿಕೆಟಿಗರು ಗಮನಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಂಗಳೂರು(ಮೇ.16): ಇಂಡಿಯನ್ ಪ್ರೀಮಿಯರ್ ಲೀಗ್'ನಿಂದಾಗಿ ಯುವ ಪ್ರತಿಭೆಗಳು ಹೊರಹೊಮ್ಮುತ್ತಿದ್ದು,  ಭಾರತ ಕ್ರಿಕೆಟ್ ತಂಡದ ಬೆಳವಣಿಗೆ ಕಂಡರೆ ಭಯವಾಗುತ್ತಿದೆ ಎಂದು ದಕ್ಷಿಣ ಆಫ್ರಿಕಾದ ಖ್ಯಾತ ಆಟಗಾರ ಎಬಿ ಡಿವಿಲಿಯರ್ಸ್ ಅಭಿಪ್ರಾಯಪಟ್ಟಿದ್ದಾರೆ.

ಐಪಿಎಲ್'ನಿಂದಾಗಿ ವರ್ಷದಿಂದ ವರ್ಷಕ್ಕೆ ಭಾರತದಲ್ಲಿ ಹೊಸ ಪ್ರತಿಭೆಗಳು ಬೆಳಕಿಗೆ ಬರುತ್ತಿದ್ದು, ತಮ್ಮ ಸಾಮರ್ಥ್ಯ ಅನಾವರಣ ಮಾಡಲು ಚುಟುಕು ಕ್ರಿಕೆಟ್ ಮಾದರಿ ಸಹಾಯಕವಾಗಿದೆ. ಬೇರೆ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಅತಿ ಹೆಚ್ಚು ಯುವ ಕ್ರಿಕೆಟಿಗರು ಹೊರಹೊಮ್ಮುತ್ತಿದ್ದು, ಒತ್ತಡದ ಸಂದರ್ಭದಲ್ಲೂ ಅತ್ಯುತ್ತಮ ಆಟವಾಡುತ್ತಿದ್ದಾರೆ. ಹೀಗಾಗಿ ಟೀಂ ಇಂಡಿಯಾ ಮುಂದಿನ ದಿನಗಳಲ್ಲಿ ಇನ್ನಷ್ಟು ಬಲಿಷ್ಟವಾಗುವುದರಲ್ಲಿ ಎರಡು ಮಾತಿಲ್ಲ ಎಂದು ಏಕದಿನ ಕ್ರಿಕೆಟ್'ನಲ್ಲಿ ಅತಿವೇಗದ ಶತಕ ದಾಖಲಿಸಿರುವ ಎಬಿಡಿ ಹೇಳಿದ್ದಾರೆ.

ಐಪಿಎಲ್ 10ನೇ ಆವೃತ್ತಿಯಲ್ಲಿ ರಾಹುಲ್ ತ್ರಿಪಾಠಿ, ನಿತೀಶ್ ರಾಣಾ, ಸಿದ್ದಾರ್ಥ್ ಕೌಲ್, ಕೃನಾಲ್ ಪಾಂಡ್ಯ ಸೇರಿದಂತೆ ಸಾಕಷ್ಟು ಯುವ ಕ್ರಿಕೆಟಿಗರು ಗಮನಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ.

ವಿಶ್ವದರ್ಜೆಯ ಕ್ರಿಕೆಟರ್'ಗಳಾದ ವಿರೇಂದ್ರ ಸೆಹ್ವಾಗ್, ಗ್ಲೇನ್ ಮ್ಯಾಕ್ಸ್'ವೆಲ್, ಬ್ರೆಂಡನ್ ಮೆಕ್ಲಮ್, ಲಸಿತ್ ಮಾಲಿಂಗ್ ಅವರಂತಹ ಆಟಗಾರರೊಂದಿಗೆ ಡ್ರೆಸ್ಸಿಂಗ್ ರೂಂ ಹಂಚಿಕೊಳ್ಳುವ ಮೂಲಕ ಈ ಯುವ ಆಟಗಾರರು ಇನ್ನಷ್ಟು ಪ್ರಯೋಜನ ಪಡೆದುಕೊಳ್ಳುತ್ತಿದ್ದಾರೆ. ಇದು ಟೀಂ ಇಂಡಿಯಾ ಪಾಲಿಗೆ ಒಳ್ಳೆಯ ಬೆಳವಣಿಗೆಯಾದರೆ, ಇತರೆ ತಂಡಗಳಿಗೆ ಎಚ್ಚರಿಕೆಯ ಕರೆಗಂಟೆಯಾಗಿದೆ ಎಂದು ಆರ್'ಸಿಬಿ ಸ್ಟಾರ್ ಆಟಗಾರ ಅಭಿಪ್ರಾಯಪಟ್ಟಿದ್ದಾರೆ.

 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಟಿ20 ವಿಶ್ವಕಪ್ ತಂಡದಲ್ಲಿ ಸಂಚಲನ: ಸಂಜು ಸ್ಯಾಮ್ಸನ್ ಸ್ಥಾನಕ್ಕೆ ಕುತ್ತು?
ಕೊಹ್ಲಿ-ರೋಹಿತ್ ಮುಂದಿನ ವಿಜಯ್ ಹಜಾರೆ ಟ್ರೋಫಿ ಮ್ಯಾಚ್ ಆಡೋದು ಯಾವಾಗ? ಲೈವ್ ಸ್ಟ್ರೀಮ್ ಇರುತ್ತಾ?