
ತಮ್ಮದೆ ಶೈಲಿಯ ಮೂಲಕ ಸಿಕ್ಸ್'ರ್ ಮತ್ತು ಬೌಂಡರಿ'ಗಳನ್ನು ಬಾರಿಸುವ ಮೂಲಕ ವಿಶ್ವ ಕ್ರಿಕೆಟ್ ಅಭಿಮಾನಿಗಳಿಗೆ ರಸದೌತಣ ನೀಡುತ್ತಿದ್ದ ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡದ ಸ್ಫೋಟಕ ಬ್ಯಾಟ್ಸ್'ಮೆನ್ ಹಾಗೂ ನಾಯಕ ಎಬಿಡಿ ವಿಲಿಯರ್ಸ್ ನಾಯಕ ಸ್ಥಾನದಿಂದ ಕೆಳಗಿಳಿದಿದ್ದಾರೆ.
ಆದರೆ ಎಲ್ಲ ಮಾದರಿಯ ಕ್ರಿಕೆಟ್'ನಲ್ಲಿ ತನ್ನ ಆಟ ಮುಂದುವರಿಸುವುದಾಗಿ ತಿಳಿಸಿದ್ದಾರೆ. ನಾಯಕ ಸ್ಥಾನದಿಂದ ಕೆಳಗಿಳಿದಿರುವುದು ನಿವೃತ್ತಿ ನೀಡುವ ಸೂಚನೆಯೆ ಎಂಬ ಅನುಮಾನ ಬಹುತೇಕ ಅಭಿಮಾನಿಗಳಲ್ಲಿ ಕಾಡಿದೆ. ಆದರೆ ಇದನ್ನು ನಿರಾಕರಿಸಿರುವ ಎಬಿಡಿ ' ಕಳೆದ 12 ತಿಂಗಳಿಂದ ಈ ಬಗ್ಗೆ ಮಾತುಗಳ ಜೊತೆ ಬರವಣಿಗೆಗಳೂ ಕೇಳಿ ಬರುತ್ತಿವೆ. ಅಲ್ಲದೆ ಈ ರೀತಿಯ ನಿರ್ಧಾರ ಕೈಗೊಳ್ಳಲು ಸೂಕ್ತ ಸಮಯ ಕೂಡ. ಮಾನಸಿಕ ಹಾಗೂ ಭೌತಿಕವಾಗಿ ನನಗೆ ಆಯಾಸವಾಗಿದೆ.
ಕಳೆದ ಒಂದು ವರ್ಷದಿಂದ ಹಾಗೂ ಅದಕ್ಕಿಂತ ಹೆಚ್ಚಾಗಿ ನನಗೆ ನೀಡಿದ ಭದ್ಧತೆಗಳನ್ನು ನಿರ್ವಹಿಸಲು ಪ್ರಯತ್ನಿಸಿದ್ದೇನೆ' ಎಂದು ತಿಳಿಸಿದ್ದಾರೆ. ದಕ್ಷಿಣ ಆಫ್ರಿಕಾ ತಂಡದ ನಾಯಕನಾಗಿದ್ದು ನನ್ನ ಜೀವನದ ಅದ್ಭುತ ಕ್ಷಣ. ತಂಡಕ್ಕಾಗಿ ಇನ್ನಷ್ಟು ಉತ್ತಮವಾಗಿ ಆಟವಾಡಲು ಮುಂದಿನ ದಿನಗಳಲ್ಲಿಯೂ ಮುಂದುವರಿಸಿಕೊಂಡು ಹೋಗುತ್ತೇನೆ' ಎಂದು ಹೇಳಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.