ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ ಹೇಳಿ ಅಭಿಮಾನಿಗಳಿಗೆ ಆಘಾತ ನೀಡಿರುವ ಎಬಿ ಡಿವಿಲಿಯರ್ಸ್ ಇದೀಗ ಸಿಹಿ ಸುದ್ದಿ ನೀಡಿದ್ದಾರೆ. ಶೀಘ್ರದಲ್ಲೇ ಬೆಂಗಳೂರಿಗೆ ಬರಲಿರುವ ಡಿವಿಲಿಯರ್ಸ್ ನೀಡಿರುವ ಸುದ್ದಿ ಏನು? ಇಲ್ಲಿದೆ ವಿವರ.
ಲಂಡನ್(ಫೆ.26): ದಕ್ಷಿಣ ಆಫ್ರಿಕಾದ ಮಾಜಿ ಕ್ರಿಕೆಟಿಗ ಎಬಿ ಡಿವಿಲಿಯರ್ಸ್ ಇನ್ನೂ 3 ವರ್ಷ ಸ್ಪರ್ಧಾತ್ಮಕ ಕ್ರಿಕೆಟ್‌ನಲ್ಲಿ ಮುಂದುವರಿಯುವುದಾಗಿ ತಿಳಿಸಿದ್ದಾರೆ. ಅಂ.ರಾ.ಕ್ರಿಕೆಟ್‌ನಿಂದ ನಿವೃತ್ತಿ ಪಡೆದಿರುವ ಡಿವಿಲಿಯರ್ಸ್, ವಿಶ್ವದ ಹಲವು ಟಿ20 ಲೀಗ್‌ನಲ್ಲಿ ಆಡುತ್ತಿದ್ದಾರೆ. ಸೋಮವಾರ ಅವರು ಇಂಗ್ಲೆಂಡ್ ಕೌಂಟಿ ತಂಡ ಮಿಡ್ಲ್‌ಸೆಕ್ಸ್ ಜತೆ ಒಪ್ಪಂದಕ್ಕೆ ಸಹಿ ಹಾಕಿದರು.
ಇದನ್ನೂ ಓದಿ: ವೈರಲ್ ಆಯ್ತು ಎಬಿ ಡಿವಿಲಿಯರ್ಸ್ ಸ್ವಿಚ್ ಹಿಟ್ ಸಿಕ್ಸ್!
undefined
ಮುಂಬರುವ ಟಿ20 ಬ್ಲಾಸ್ಟ್ ಟೂರ್ನಿಯಲ್ಲಿ ಅವರು ಪಾಲ್ಗೊಳ್ಳಲಿದ್ದು ಮೊದಲ 7 ಪಂದ್ಯಗಳನ್ನು ಆಡಲಿದ್ದಾರೆ. ಜು.18ರಿಂದ ಸೆ.21ರ ವರೆಗೂ ಟಿ20 ಬ್ಲಾಸ್ಟ್ ಟೂರ್ನಿ ನಡೆಯಲಿದೆ. ಸದ್ಯ ಪಾಕಿಸ್ತಾನ ಸೂಪರ್ ಲೀಗ್ ಟಿ20 ಟೂರ್ನಿಯಲ್ಲಿ ಎಬಿ ಡಿವಿಲಿಯರ್ಸ್ ಭಾಗವಹಿಸಿದ್ದಾರೆ.
ಇದನ್ನೂ ಓದಿ: ಐಪಿಎಲ್ ಉದ್ಘಾಟನಾ ಸಮಾರಂಭ ರದ್ದು - ಭಾರತೀಯರ ಹೃದಯ ಗೆದ್ದ ಬಿಸಿಸಿಐ!
ಶೀಘ್ರದಲ್ಲೇ ಭಾರತಕ್ಕೆ ಆಗಮಿಸಲಿರುವ ಎಬಿ ಡಿವಿಲಿಯರ್ಸ್ ಐಪಿಎಲ್ ಟೂರ್ನಿಯಲ್ಲಿ ಪಾಲ್ಗೊಳ್ಳಲಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸ್ಟಾರ್ ಕ್ರಿಕೆಟಿಗನಾಗಿರುವ ಎಬಿಡಿ, 12ನೇ ಆವೃತ್ತಿಯಲ್ಲಿ ಅಬ್ಬರಿಸೋ ವಿಶ್ವಾಸದಲ್ಲಿದ್ದಾರೆ.