
ನವದೆಹಲಿ(ಜ.28): ಬೀಜಿಂಗ್ ಒಲಿಂಪಿಕ್ ಚಿನ್ನದ ಪದಕ ವಿಜೇತ ಶೂಟರ್ ಅಭಿನವ್ ಬಿಂದ್ರಾ ಕೇಂದ್ರ ಸರ್ಕಾರದ ಟಾರ್ಗೆಟ್ ಒಲಿಂಪಿಕ್ ಪೋಡಿಯಂ (ಟಾಪ್) ಸಮಿತಿಯ ನೂತನ ಅಧ್ಯಕ್ಷರಾಗಿ ನೇಮಕವಾಗಿದ್ದಾರೆ.
ಇದೇ ಸಮಿತಿಯಲ್ಲಿ ಮಾಜಿ ಸ್ಪ್ರಿಂಟರ್ ಪಿ.ಟಿ. ಉಷಾ ಮತ್ತು ಹಿರಿಯ ಬ್ಯಾಡ್ಮಿಂಟನ್ ಆಟಗಾರ ಪ್ರಕಾಶ್ ಪಡುಕೋಣೆ ಕೂಡ ಇದ್ದಾರೆ.
ಇನ್ನು ಸಮಿತಿಯಲ್ಲಿರುವ 10 ಮಂದಿಯ ಪೈಕಿ ಅಂಜಲಿ ಭಾಗವತ್ ಮತ್ತು ಸಿಡ್ನಿ ಕಂಚಿನ ಪದಕ ವಿಜೇತೆ ವೇಟ್'ಲಿಫ್ಟರ್ ಕರ್ಣಂ ಮಲ್ಲೇಶ್ವರಿ ಕೂಡ ಸೇರಿದ್ದಾರೆ.
ಈ ಸಮಿತಿಯು 2020ರ ಟೋಕಿಯೋ ಮತ್ತು 2024ರ ಒಲಿಂಪಿಕ್ ಕೂಟದಲ್ಲಿ ಪದಕ ಗೆಲ್ಲುವಂಥ ಪ್ರತಿಭಾನ್ವಿತ ಅಥ್ಲೀಟ್'ಗಳನ್ನು ಗುರುತು ಹಚ್ಚುವ ಕಾಯಕ ನಡೆಸಲಿದ್ದಾರೆ ಎಂದು ಕೇಂದ್ರ ಕ್ರೀಡಾ ಸಚಿವಾಲಯ ತಿಳಿಸಿದೆ.
ಟಾಪ್ ತಂಡವು ಆಯ್ಕೆ ಮಾಡಿದ ಆಟಗಾರರಿಗೆ ತರಬೇತಿ ಪಡೆಯಲು ಹಣಕಾಸಿನ ನೆರವನ್ನು ಸರ್ಕಾರ ನೀಡಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.