
ನವದೆಹಲಿ(ಸೆ. 22) ಇಬ್ಬರು ಚಿನ್ನದ ಹುಡುಗರು ಪರಸ್ಪರ ಭೇಟಿಯಾಗಿದ್ದಾರೆ. ಶೂಟರ್ ಅಭಿನವ್ ಬಿಂದ್ರಾ ಮತ್ತು ಟೋಕಿಯೋ ಚಿನ್ನದ ಹುಡುಗ ನೀರಜ್ ಚೋಪ್ರಾ ಭೇಟಿಯಾಗಿದ್ದಾರೆ.
ಭೇಟಿಯ ಸಂದರ್ಭದಲ್ಲಿ ಅಭಿನವ್ ಬಿಂದ್ರಾ ವಿಶೇಷ ಗಿಫ್ಟ್ ನೀಡಿದ್ದಾರೆ. Golden Retriever ಶ್ವಾನವನ್ನು ಕಾಣಿಕೆಯಾಗಿ ನೀಡಿದ್ದಾರೆ. ಶ್ವಾನ ಕಾಣಿಕೆಯಾಗಿ ನೀಡಿ ಮುಂದಿನ ಪ್ಯಾರೀಸ್ದ ಒಲಿಂಪಿಕ್ಸ್ ಗೆ ಗುಡ್ ಲಕ್ ಹೇಳಿದ್ದಾರೆ. ಟೋಕಿಯೋದಲ್ಲಿ ಭಾರತದ ಕೀರ್ತಿ ಪತಾಕೆ ಹಾರಿಸಿದ ಯುವಕ ಭೇಟಿಯಾಗಿದ್ದು ಖುಷಿ ತಂದಿದೆ ಎಂದು ಬಿಂದ್ರಾ ತಿಳಿಸಿದ್ದಾರೆ.
ಚೋಪ್ರಾ ಕಾಣಿಸಿಕೊಂಡ ಜಾಹೀರಾತು ವೈರಲ್
ಸೋಶಿಯಲ್ ಮೀಡಿಯಾದಲ್ಲಿ ಬಿಂದ್ರಾ ಪೋಟೋ ಹಂಚಿಕೊಂಡಿದ್ದು ಅಭಿಮಾನಿಗಳು ಕೊಂಡಾಡಿದ್ದಾರೆ. ಒಬ್ಬರು ಶ್ರೀಮಂತ ಕುಟುಂಬದಿಂದ ಬಂದವರು.. ಒಬ್ಬರು ಹೃದಯ ಶ್ರೀಮಂತಿಕೆ ಕುಟುಂಬದಿಂದ ಬಂದವರು.. ಒಬ್ಬರು ಯಾವಾಗಲೂ ಇಂಗ್ಲಿಷ್ ಮಾತನಾಡುತ್ತಾರೆ.. ಇನ್ನೊಬ್ಬರು ಹಿಂದಿ ಮಾತನಾಡುತ್ತಾರೆ.. ಆದರೆ ಚಿನ್ನ ಇಬ್ಬರನ್ನು ಒಂದು ಮಾಡಿದೆ ಎಂದು ನೆಟ್ಟಿಗರೊಬ್ಬರು ಕೊಂಡಾಡಿದ್ದಾರೆ.
ಟೋಕಿಯೋ ಒಲಿಂಪಿಕ್ಸ್ ನ ಜಾವೆಲಿನ್ ಥ್ರೋದಲ್ಲಿ ನೀರಜ್ ಚಿನ್ನದ ಪದಕ ಸಾಧನೆ ಮಾಡಿದ್ದರು. ಶೂಟಿಂಗ್ ನಲ್ಲಿ ಚಿನ್ನ ಗೆದ್ದಿದ್ದ ಅಭಿನವ್ ಬಿಂದ್ರಾ ಹಿಂದೆ ಇತಿಹಾಸ ಸೃಷ್ಟಿಸಿದ್ದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.