ಇತ್ತೀಚೆಗೆ ಮುಕ್ತಾಯಗೊಂಡ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ 0-4ರ ಸೋಲು ಕಂಡಿದ್ದ ಪಾಕಿಸ್ತಾನ, ಶುಕ್ರವಾರ ನಡೆದ ಮೊದಲ ಅಭ್ಯಾಸ ಪಂದ್ಯದಲ್ಲಿ ಆಫ್ಘಾನಿಸ್ತಾನ ವಿರುದ್ಧ 3 ವಿಕೆಟ್‌ಗಳಿಂದ ಪರಾಭವಗೊಂಡಿತು.
ಬ್ರಿಸ್ಟಲ್[ಮೇ.25]: ಐಸಿಸಿ ಏಕದಿನ ವಿಶ್ವಕಪ್‌ನ ಅಭ್ಯಾಸ ಪಂದ್ಯದಲ್ಲೇ ಕ್ರಿಕೆಟ್ ಶಿಶು ಆಫ್ಘಾನಿಸ್ತಾನದ ಎದುರು ಪಾಕಿಸ್ತಾನ ಎಡವಿದೆ.
ಇತ್ತೀಚೆಗೆ ಮುಕ್ತಾಯಗೊಂಡ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ 0-4ರ ಸೋಲು ಕಂಡಿದ್ದ ಪಾಕಿಸ್ತಾನ, ಶುಕ್ರವಾರ ನಡೆದ ಮೊದಲ ಅಭ್ಯಾಸ ಪಂದ್ಯದಲ್ಲಿ ಆಫ್ಘಾನಿಸ್ತಾನ ವಿರುದ್ಧ 3 ವಿಕೆಟ್‌ಗಳಿಂದ ಪರಾಭವಗೊಂಡಿತು.
ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನವನ್ನು 262 ರನ್‌ಗಳಿಗೆ ಆಲೌಟ್ ಮಾಡಿದ ಆಫ್ಘಾನಿಸ್ತಾನ, 49.4 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು ಗುರಿ ತಲುಪಿತು. ಮೊಹಮದ್ ನಬಿ ಆಲ್ರೌಂಡ್ ಪ್ರದರ್ಶನ ತೋರಿದರೆ, ಹಸ್ಮತುಲ್ಲಾ ಶೆಹಾದಿ ಅಜೇಯ 74 ರನ್ ಸಿಡಿಸುವ ಮೂಲಕ ಭರ್ಜರಿ ಜಯ ತಂದಿತ್ತರು.
ಸ್ಕೋರ್:
ಪಾಕಿಸ್ತಾನ 262/10,
ಆಫ್ಘಾನಿಸ್ತಾನ: 263/7