
ದುಬೈ(ಡಿ.08): ಉದ್ದೀಪನಾ ಮದ್ದು ಸೇವನೆ ಮಾಡಿ ಸಿಕ್ಕಿಬಿದ್ದಿದ್ದ ಆಫ್ಘಾನಿಸ್ತಾನದ ಕ್ರಿಕೆಟಿಗ ಮೊಹಮ್ಮದ್ ಶಹಜಾದ್'ರನ್ನು 12 ತಿಂಗಳುಗಳ ಕಾಲ ಅಮಾನತುಗೊಳಿಸಲಾಗಿದೆ.
ವಿಕೆಟ್ ಕೀಪರ್ ಬ್ಯಾಟ್ಸ್'ಮನ್ ಶಹಜಾದ್ ಪ್ರಕರಣಕ್ಕೆ ಸಂಬಂಧಿಸಿದಂತೆ ಐಸಿಸಿ ಗುರುವಾರ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದೆ.
ಈ ವರ್ಷದ ಆರಂಭದಲ್ಲಿ ಶಹಜಾದ್ ಉದ್ದೀಪನಾ ಮದ್ದು ಸೇವನೆ ಪ್ರಕರಣದಲ್ಲಿ ಸಿಕ್ಕಿ ಬಿದ್ದಿದ್ದರು. ಮೂತ್ರ ಪರೀಕ್ಷೆಯಲ್ಲಿ ಅವರ ಮದ್ದು ಸೇವಿಸಿರುವುದು ಖಚಿತವಾಗಿದ್ದರಿಂದ ಒಂದು ವರ್ಷ ಕ್ರಿಕೆಟ್ ಚಟುವಟಿಕೆಯಿಂದ ದೂರ ಇರಿಸಲಾಗಿತ್ತು. ಅವರ ಅಮಾನತು ಅವಧಿ 2018ರ ಜ. 17ಕ್ಕೆ ಪೂರ್ಣಗೊಳ್ಳಲಿದೆ.
ಶಹಜಾದ್ 2010ರಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್'ಗೆ ಪದಾರ್ಪಣೆ ಮಾಡಿದ್ದು, 58 ಪಂದ್ಯಗಳಲ್ಲಿ 1901 ರನ್ ಕಲೆ ಹಾಕಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.