ಬೆಂಗಳೂರಿಗೆ ಬಂದಿಳಿದ ಅಫ್ಘಾನಿಸ್ತಾನ ಕ್ರಿಕೆಟ್ ತಂಡ!

By Web DeskFirst Published Jan 21, 2019, 8:54 PM IST
Highlights

ಐರ್ಲೆಂಡ್ ವಿರುದ್ಧದ ಕ್ರಿಕೆಟ್ ಸರಣಿಗಾಗಿ ಅಫ್ಘಾನಿಸ್ತಾನ ಕ್ರಿಕೆಟ್ ತಂಡ ಬೆಂಗಳೂರಿಗೆ ಆಗಮಿಸಿದೆ. ಅಷ್ಟಕ್ಕೂ ಐರ್ಲೆಂಡ್ ಹಾಗೂ ಅಫ್ಘಾನಿಸ್ತಾನ ನಡುವಿನ ಕ್ರಿಕೆಟ್ ಸರಣಿಗೆ ಅಫ್ಘಾನ್ ತಂಡ ಬೆಂಗಳೂರಿಗೆ ಬಂದಿದ್ದೇಕೆ? ಇಲ್ಲಿದೆ ವಿವರ.

ಬೆಂಗಳೂರು(ಜ.21): ಐರ್ಲೆಂಡ್ ವಿರುದ್ಧದ ಸರಣಿಗಾಗಿ ಅಫ್ಘಾನಿಸ್ತಾನ ಕ್ರಿಕೆಟ್ ತಂಡ ಇದೀಗ ಭಾರತಕ್ಕೆ ಬಂದಿಳಿದಿದೆ. ಇದೇ ಮೊದಲ ಬಾರಿಗೆ ಅಫ್ಘಾನಿಸ್ತಾನ ಹಾಗೂ ಐರ್ಲೆಂಡ್ ನಡುವಿನ ಸರಣಿಗೆ ಭಾರತ ಆತಿಥ್ಯವಹಿಸುತ್ತಿದೆ. ಪಂದ್ಯಕ್ಕೂ ಮುನ್ನ ಆಯೋಜಿಸಿರುವ ತರಬೇತಿ ಶಿಭಿರಕ್ಕಾಗಿ ಅಫ್ಘಾನ್ ಟೀಂ ಬೆಂಗಳೂರಿಗೆ ಆಗಮಿಸಿದೆ.

ಇದನ್ನೂ ಓದಿ: ಐಸಿಸಿ ಟೆಸ್ಟ್ ರ‍್ಯಾಂಕಿಂಗ್ ಪ್ರಕಟ- ನಂ.1 ಸ್ಥಾನ ಕಾಪಾಡಿಕೊಂಡ ಕೊಹ್ಲಿ!

ಅಫ್ಘಾನಿಸ್ತಾನ ಹಾಗೂ ಐರ್ಲೆಂಡ್ ನಡುವೆ 3 ಟಿ20, 5 ಏಕದಿನ ಹಾಗೂ ಏಕೈಕ ಟೆಸ್ಟ್ ಪಂದ್ಯ ಆಯೋಜಿಸಲಾಗಿದೆ. ಎಲ್ಲಾ ಪಂದ್ಯಗಳು ಡೆಹ್ರಡೂನ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ. ಫೆಬ್ರವರಿ 21 ರಂದು ಆರಂಭಗೊಳ್ಳಲಿರುವ ಸರಣಿ ಮಾರ್ಚ್ 19ಕ್ಕೆ ಅಂತ್ಯಗೊಳ್ಳಲಿದೆ.

 

Afghanistan National Team departed for India this morning to participate in a training camp in Bangalore ahead of the series against that will be held from 21st February to 19th March 2019 in Dehradun, India. pic.twitter.com/nNGoKgL1cp

— Afghanistan Cricket Board (@ACBofficials)

 

ಇದನ್ನೂ ಓದಿ: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕ್ರಿಕೆಟಿಗ, ಬಿಗ್‌ಬಾಸ್ ಖ್ಯಾತಿಯ ಎನ್.ಸಿ ಅಯ್ಯಪ್ಪ!

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಫ್ಘಾನಿಸ್ತಾನ ಕ್ರಿಕೆಟ್ ತಂಡಕ್ಕೆ ತರಬೇತಿ ಶಿಬಿರ ಆಯೋಜಿಸಲಾಗಿದೆ. ಈ ಕುರಿತು ಅಫ್ಘಾನ್ ಕ್ರಿಕೆಟ್ ಮಂಡಳಿಯ ಟ್ವಿಟರ್ ಖಾತೆಯಲ್ಲಿ ಹೇಳಿಕೊಂಡಿದೆ. 

click me!