
ಬೆಂಗಳೂರು(ನ.05): ಕಿಂಗ್ಸ್ ಇಲೆವೆನ್ ಪಂಜಾಬ್ ಫ್ರಾಂಚೈಸಿ ಮುಂಬರುವ ಐಪಿಎಲ್ ಟೂರ್ನಿಗೆ ಈಗನಿಂದಲೇ ಸಿದ್ದತೆ ಆರಂಭಿಸಿದೆ. ತಂಡದ ಮೆಂಟರ್ ಆಗಿದ್ದ, ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ವಿರೇಂದ್ರೆ ಸೆಹ್ವಾಗ್ ಅವರನ್ನ ಒಪ್ಪಂದ ಅಂತ್ಯಗೊಳಿಸಿದ ಬೆನ್ನಲ್ಲೇ, ಇದೀಗ ತಂಡದ ಬೌಲಿಂಗ್ ಕೋಚ್ ವೆಂಕಟೇಶ್ ಪ್ರಸಾದ್ ಕೂಡ ತಂಡದಿಂದ ಹೊರಬಿದ್ದಿದ್ದಾರೆ.
ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಬೌಲಿಂಗ್ ಕೋಚ್ ಆಗಿ ಟೀಂ ಇಂಡಿಯಾ ಮಾಜಿ ವೇಗಿ, ಕನ್ನಡಿಗ ವೆಂಕಟೇಶ್ ಪ್ರಸಾದ್ ಕಾರ್ಯನಿರ್ವಹಿಸುತ್ತಿದ್ದರು. ಆದರೆ ಸೆಹ್ವಾಗ್ ಅವರ ಒಪ್ಪಂದ ಅಂತ್ಯಗೊಳಿಸಿದ ಬಳಿಕ ಇದೀಗ ವೆಂಕಟೇಶ್ ಪ್ರಸಾದ ಅವರನ್ನ ಒಪ್ಪಂದವನ್ನ ಪಂಜಾಬ್ ತಂಡ ನವೀಕರಿಸಿಲ್ಲ. ಹೀಗಾಗಿ ಪಂಜಾಬ್ ತಂಡದಿಂದ ವೆಂಕಿ ಹೊರಬಿದ್ದಿದ್ದಾರೆ.
ವೆಂಕಟೇಶ್ ಪ್ರಸಾದ್ ಸ್ಥಾನಕ್ಕೆ, ಕಳದೆ ಬಾರಿ ಡೆಲ್ಲಿ ಡೇರ್‌ಡೆವಿಲ್ಸ್ ತಂಡದ ಸಹಾಯಕ ಬೌಲಿಂಗ್ ಕೋಚ್ ಆಗಿದ್ದ ಶ್ರೀಧರ್ ಶ್ರೀರಾಮ್ ಅವರನ್ನ ಆಯ್ಕೆ ಮಾಡಿದೆ. ಇತ್ತೀಚೆಗಷ್ಟೇ ತಂಡದ ಮುಖ್ಯ ಕೋಚ್ ಆಗಿ ನ್ಯೂಜಿಲೆಂಡ್ ಕೋಚ್ ಮೈಕೆ ಹೆಸನ್ ಅವರನ್ನ ಆಯ್ಕೆ ಮಾಡಿತ್ತು
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.