
ನವದೆಹಲಿ(ಮಾ.21): ಮುಂಬರಲಿರುವ 2022ರ ಕಾಮನ್'ವೆಲ್ತ್ ಕ್ರೀಡಾಕೂಟದ ಆತಿಥ್ಯಕ್ಕೆ ಭಾರತ ಬಿಡ್ ಮಾಡುವುದಿಲ್ಲ ಎಂದು ಭಾರತೀಯ ಒಲಿಂಪಿಕ್ ಸಂಸ್ಥೆ (ಐಒಎ) ಮುಖ್ಯಸ್ಥ ಎನ್. ರಾಮಚಂದ್ರನ್ ಸ್ಪಷ್ಟಪಡಿಸಿದ್ದಾರೆ.
ಈಗಾಗಲೇ ಸ್ಪರ್ಧೆಯಲ್ಲಿ ಹಲವಾರು ರಾಷ್ಟ್ರಗಳು ಇರುವ ಕಾರಣ ಭಾರತ ಈ ನಿರ್ಧಾರ ಕೈಗೊಂಡಿದೆ ಎಂದು ರಾಮಚಂದ್ರನ್ ಹೇಳಿದ್ದಾರೆ.
‘‘ಮೂಲಗಳ ಪ್ರಕಾರ ಡರ್ಬನ್ ನಗರ ಆತಿಥ್ಯ ಕಳೆದುಕೊಂಡಿದ್ದರೂ ಇನ್ನೂ ಅಧಿಕೃತವಾಗಿಲ್ಲ. ಕಾಮನ್‌ವೆಲ್ತ್ ಕ್ರೀಡಾಕೂಟ ಆಯೋಜನಾ ಸಮಿತಿ ದ. ಆಫ್ರಿಕಾದೊಂದಿಗೆ ಮಾತುಕತೆ ನಡೆಸುತ್ತಿದೆ. ಈ ಮಧ್ಯೆ ಬ್ರಿಟನ್'ನ ಮೂರು ನಗರಗಳು ಆತಿಥ್ಯಕ್ಕೆ ಮುಂದೆ ಬಂದಿವೆ. ಹೀಗಾಗಿ, ನಾವು ಹರಾಜಿನಲ್ಲಿ ಭಾಗವಹಿಸುವುದು ಸರಿಯಲ್ಲ’’ ಎಂದು ರಾಮಚಂದ್ರನ್ ಹೇಳಿದ್ದಾರೆ.
ಲಂಡನ್, ಮ್ಯಾಚೆಂಸ್ಟರ್ ಮತ್ತು ಬರ್ಮಿಂಗ್'ಹ್ಯಾಂ ನಗರಗಳು ಕಾಮನ್'ವೆಲ್ತ್ ಗೇಮ್ಸ್ ಆತಿಥ್ಯವಹಿಸಲು ಮುಂದೆ ಬಂದಿವೆ ಎನ್ನಲಾಗಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.